`
ನಿರ್ದೇಶಕ ಬಿ. ಎಂ. ಗಿರಿರಾಜ`ಕಲ್ಯಾಣಿ’ ಎಂಬ ಮತ್ತೊಂದು ವಿಭಿನ್ನ ಕಥಾಹಂದರವನ್ನು ತೆರೆಮೇಲೆ ತರುವ ತಯಾರಿಯಲ್ಲಿದ್ದಾರೆ. ಲೇಖಕ ಬಸವ ರೆಡ್ಡಿ ಕಥೆಗೆ ಬಿ. ಎಂ. ಗಿರಿರಾಜ ಸಿನಿಮಾ ರೂಪ ಕೊಟ್ಟು ಅದನ್ನು `ಕಲ್ಯಾಣಿ’ ಹೆಸರಿನಲ್ಲಿ ತೆರೆಗೆ ತರುತ್ತಿದ್ದಾರೆ. ಕೆಲ ತಿಂಗಳ ಹಿಂದೆ ಶುರುವಾಗಿದ್ದ ಈ ಚಿತ್ರ, ಸದ್ಯ ತನ್ನ ಸಂಪೂರ್ಣ ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿ, ತರೆಗೆ ಬರಲು ತಯಾರಾಗಿದೆ. ಕುಮಾರಸ್ವಾಮಿ ಆರ್. ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ರಂಗಭೂಮಿಪ್ರತಿಭೆ ಯುವ ನಟ ಸಾಮ್ರಾಟ್ ಶೆಟ್ಟಿ `ಕಲ್ಯಾಣಿ’ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಉತ್ತರ ಭಾರತದ ನಟಿ ಸಿಮ್ರನ್, ರಾಹುಲ್ ಜೇಟ್ಲಿ, ಶಮಂತ್ ರಾವ್, ಪಿ. ಡಿ. ಸತೀಶ್ ಚಂದ್ರ, ಯಮುನಾ ಶ್ರೀನಿಧಿ, ವಿಜಯ್ ಚೆಂಡೂರು, ಶೈಲೇಂದ್ರ, ರಂಗು ಸಮರ್ಪಣ್ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು `ಕಲ್ಯಾಣಿ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ನಿರ್ದೇಶಕ ಬಿ. ಎಂ. ಗಿರಿರಾಜ್,ಮಾತನಾಡಿ `ನವಿರಾದ ಒಲವಿನ ಕಥೆ ಮುನ್ನಲೆಯಾಗಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಇದರಲ್ಲಿ ನಂಬಿಕೆ, ಸ್ನೇಹ, ಐಡೆಂಟಿಟಿಯ ವಿಷಯಗಳು ಹಾಗೂ ಬೇರೆ ಬೇರೆ ಸಂಸ್ಕöÈತಿಗಳ ಮುಖಾಮುಖಿ ಈ ಸಿನಿಮಾ. ಉತ್ತರ ಭಾರತದಿಂದ ಬರುವ ಹುಡುಗಿ ದಕ್ಷಿಣ ಭಾರತದ ಹುಡುಗನ ಎರಡು ಪಾತ್ರಗಳನ್ನು ಪ್ರಧಾನವಾಗಿ ಇಟ್ಟುಕೊಂಡು ಎರಡು ಸಂಸ್ಕöÈತಿಗಳ ಅನಾವರಣವನ್ನು ಈ ಚಿತ್ರದಲ್ಲಿ ಮಾಡುವ ಪ್ರಯತ್ನ ಮಾಡಿದ್ದೇವೆ. ನಾನು ಇಲ್ಲಿಯವರೆಗೆ ಮಾಡಿರುವ ಸಿನಿಮಾಗಳಿಗಿಂತ ಸಂಪೂರ್ಣ ವಿಭಿನ್ನವಾಗಿರುವಂತ ಸಿನಿಮಾ ಇದಾಗಿದೆ’ ಎಂದಿದ್ದಾರೆ. ಇನ್ನು ಬಿಡುಗಡೆಯಾಗಿರುವ ‘ಕಲ್ಯಾಣಿ’ ಚಿತ್ರದ ಮೂರು ಹಾಡುಗಳಿಗೆ ಬಿ. ಜೆ. ಭರತ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಒಂದು ಹಾಡಿನಲ್ಲಿ ವರಕವಿ ದ. ರಾ. ಬೇಂದ್ರೆ, ಮತ್ತೊಂದು ಹಾಡಿನಲ್ಲಿ ವಿಜಯ್ ಈಶ್ವರ್ ಸಾಹಿತ್ಯವಿದೆ. ಇನ್ನು ಚಿತ್ರದ ‘ನಿನ್ನ ಲುಕ್ಕು ಫ್ಯಾಂಟಾಸ್ಟಿಕ್ಕು...’ ಎಂಬ ರ್ಯಾಪ್ ಶೈಲಿಯ ಗೀತೆಗೆ ಕನ್ನಡದ ಜನಪ್ರಿಯ ರ್ಯಾಪ್ ಗಾಯಕ ಆಲ್ ಓಕೆ (ಅಲೋಕ್) ಸಾಲು ಬರೆದು, ಧ್ವನಿಯಾಗುವುದರ ಜೊತೆಗೆ ತೆರೆಮೇಲೆ ಹೆಜ್ಜೆ ಹಾಕಿರುವುದು ವಿಶೇಷ. ನಿರ್ದೇಶಕ ಶಶಾಂಕ್, ‘ಕಲ್ಯಾಣಿ’ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಭಟ್ಕಳ, ಉಡುಪಿ, ಬೆಂಗಳೂರು ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ಮಾಡಲಾಗಿದೆ. ಡಿಸೆಂಬರ್ ವೇಳೆಗೆ `ಕಲ್ಯಾಣಿ’ ಚಿತ್ರವನ್ನು ಪ್ರೇಕ್ಷಕರ ಮುಂದೆ ಬರಲಿದೆ.