LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ತೀರ್ಥರೂಪ ತಂದೆಯವರಿಗೆ' ಸಿನಿಮಾದ ಮೊದಲ ಹಾಡು ರಿಲೀಸ್

ಹೊಂದಿಸಿ ಬರೆಯಿರಿ ಸಿನಿಮಾ ಖ್ಯಾತಿಯ ರಾಮೇನಹಳ್ಳಿ ಜಗನ್ನಾಥ ಅವರ ಹೊಸ ಪ್ರಯತ್ನ ತೀರ್ಥರೂಪ ತಂದೆಯವರಿಗೆ. ಟೈಟಲ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ನನದೇ ಜಗದಲಿ ಎಂಬ ಹಾಡಿಗೆ ರಾಮೇನಹಳ್ಳಿ ಜಗನ್ನಾಥ್ ಅರ್ಥಪೂರ್ಣ ಪದಗಳನ್ನು ಪೊಣಿಸಿದ್ದಾರೆ. ಭಾವನಾತ್ಮಕವಾಗಿ ಸಾಗುವ ಗೀತೆ ನೋಡುಗರನ್ನು ಕಾಡುತ್ತದೆ. ಸುಂದರ ದೃಶ್ಯಗಳ ಜೊತೆಯಲ್ಲಿ ಕಾಡುವ ಸಾಹಿತ್ಯ ಹಾಗೂ ಜೋ ಕೋಸ್ಟ
ಸಂಗೀತವಿರುವ ನನದೇ ಜಗದಲಿ ಸಾಂಗ್ ಗೆ ಕಪಿಲ್ ಕಪಿಲನ್ ಧ್ವನಿಯಾಗಿದ್ದಾರೆ.

ತೀರ್ಥರೂಪ ತಂದೆಯವರಿಗೆ ಎAಬ ಶೀರ್ಷಿಕೆ ಇದ್ದರೂ ಕೂಡ ಇಲ್ಲಿ ಅಮ್ಮ ಮಗನ ಬಾಂಧವ್ಯ ಅನಾವರಣ ಗೊಳಿಸುವ ಮೂಲಕ ನಿರ್ದೇಶಕರು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದ್ದಾರೆ. ತೆಲುಗಿನ ಕಿರುತೆರೆಯಲ್ಲಿ ಹೆಸರು ಮಾಡಿರುವ ಕನ್ನಡದ ಹುಡುಗ ನಿಹಾರ್ ಮುಕೇಶ್ ನಾಯಕನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಸಾಥ್ ಕೊಡುತ್ತಿದ್ದಾರೆ. ರಾಜೇಶ್ ನಟರಂಗ, ಸಿತಾರಾ, ರವೀಂದ್ರ ವಿಜಯ್, ಅಜಿತ್ ಹಂಡೆ ಸೇರಿದಂತೆ ಅನುಭವಿ ತಾರಾಬಳಗದ ಜೊತೆ ಹೊಸ ಪ್ರತಿಭೆಗಳಿಗೆ ಜಗನ್ನಾಥ್ ಅವರು ಅವಕಾಶ ನೀಡಿದ್ದಾರೆ.

`ತೀರ್ಥರೂಪ ತಂದೆಯವರಿಗೆ' ಚಿತ್ರವು `ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್' ಮೂಲಕ ನಿರ್ಮಾಣ ಆಗುತ್ತಿದೆ. ರಾಮೇನಹಳ್ಳಿ ಜಗನ್ನಾಥ ಅವರೇ ಕಥೆ ಬರೆದಿದ್ದಾರೆ. `ಹೊಂದಿಸಿ ಬರೆಯಿರಿ' ಚಿತ್ರ ನಿರ್ಮಾಣ ಮಾಡಿದ್ದ `ಸಂಡೇ ಸಿನಿಮಾಸ್' ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. `ಬ್ಲಿಂಕ್' ಸಿನಿಮಾ ಖ್ಯಾತಿಯ ರವಿಚಂದ್ರ ಎ.ಜೆ. ಅವರು `ತೀರ್ಥರೂಪ ತಂದೆಯವರಿಗೆ' ಸಿನಿಮಾಗೆ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ದೀಪಕ್ ಯರಗೇರಾ ಅವರು ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಮಾಡುತ್ತಿದ್ದಾರೆ. ಪ್ರಶಾಂತ್ ರಾಜಪ್ಪ ಅವರು ಸಂಭಾಷಣೆ ಬರೆದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು