ಅಂಬಟಿ ಮಧು ಮೋಹನ್ ನಿರ್ಮಿಸಿ, ಶ್ರೀನಿವಾಸ್ ಮಂಡ್ಯ ನಿರ್ದೇಶಿಸಿರುವ `ರಿಲ್ಯಾಕ್ಸ್’ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಕೋಮಲ್ ಕುಮಾರ್ ನಾಯಕನಾಗಿ, ಸೋನಾಲ್ ಮೊಂತೆರೊ ನಾಯಕಿಯಾಗಿ ಹಾಗೂ ವಿನೋದ್ ಪ್ರಭಾಕರ್ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ `ಗುಡ್ ಮಾರ್ನಿಂಗ್ ಮೇಡಂ’ ಹಾಡು ಇತ್ತೀಚೆಗೆ A2 Music ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ.ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿ ಹಾಡಿರುವ ಈ ಗೀತೆಗೆ ಕವಿ ಸಾಹಿತ್ಯ ರಚಿಸಿದ್ದಾರೆ. ಕೋಮಲ್ ಕುಮಾರ್ ಅವರ ಹಾಸ್ಯಭರಿತ ಹಾವಭಾವ ಹಾಗೂ ಸೋನಾಲ್ ಮೊಂತೆರೊ ಅವರ ಗಂಭೀರ ಅಭಿನಯ ಹಾಡಿನ ಆಕರ್ಷಣೆಯನ್ನು ಹೆಚ್ಚಿಸಿದೆ. ಮುರಳಿಕೃಷ್ಣ ಕಾರ್ಯಕಾರಿ ನಿರ್ಮಾಪಕರಾಗಿರುವ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ.ರಾಕೇಶ್ ಸಿ. ತಿಲಕ್ ಛಾಯಾಗ್ರಹಣ ಹಾಗೂ ಅರವಿಂದ್ ರಾಜ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.