LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರೆಪೋ ದರ ಯಥಾಸ್ಥಿತಿ ಮುಂದುವರಿಕೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಪ್ರಮುಖ ಪಾಲಿಸಿ ರೆಪೋ ದರವನ್ನು ಯಾವುದೇ ಬದಲಾವಣೆಯಿಲ್ಲದೆ ಶೇಕಡಾ 5.25 ರಷ್ಟು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸತತ ನಾಲ್ಕನೇ ಬಾರಿಗೆ ರೆಪೋ ದರವನ್ನು ಸ್ಥಿರವಾಗಿಡಲಾಗಿದೆ. ಅಲ್ಲದೆ, ಬ್ಯಾಂಕ್ ತನ್ನ `ತಟಸ್ಥ ನಿಲುವು' ಅನ್ನು ಮುಂದುವರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಜಾಗತಿಕ ಮಟ್ಟದಲ್ಲಿ ಎದುರಾಗುತ್ತಿರುವ ಸವಾಲುಗಳ ನಡುವೆಯೂ ಭಾರತದ ಆರ್ಥಿಕತೆ ಸುಭದ್ರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
``ಕಳೆದ ಕೆಲವು ತಿಂಗಳುಗಳಿAದ ಜಾಗತಿಕ ಆರ್ಥಿಕತೆಯು ತೀವ್ರ ಅನಿಶ್ಚಿತತೆ, ಪ್ರಮುಖ ವ್ಯಾಪಾರ ಮಾರ್ಗಗಳು ಮತ್ತು ಪೂರೈಕೆ ಸರಪಳಿಗಳ ಅಡ್ಡಿ, ಮಾರುಕಟ್ಟೆಯ ಏರಿಳಿತ ಹಾಗೂ ಉದ್ಯಮ ವಲಯದ ಜಾಗರೂಕ ನಡೆಗಳಿಂದ ಪ್ರಭಾವಿತವಾಗಿದೆ. ಆದರೆ, ಹಿಂದಿನ ಜಾಗತಿಕ ಬಿಕ್ಕಟ್ಟುಗಳಿಗೆ ಹೋಲಿಸಿದರೆ, ಈ ಬಾರಿಯ ಜಾಗತಿಕ ಏರಿಳಿತದ ನಡುವೆಯೂ ಭಾರತದ ಆರ್ಥಿಕತೆಯು ಅತ್ಯಂತ ಬಲವಾದ ಮತ್ತು ಉತ್ತಮವಾದ ಮೂಲಭೂತ ಅಂಶಗಳೊAದಿಗೆ ಮಾರುಕಟ್ಟೆ ಪ್ರವೇಶಿಸಿದೆ ಎಂಬುದನ್ನು ನಾನು ಒತ್ತಿಹೇಳಲು ಬಯಸುತ್ತೇನೆ,'' ಎಂದು ಅವರು ತಿಳಿಸಿದರು.
ಜಾಗತಿಕ ಮಟ್ಟದ ಈ ಆಘಾತಗಳನ್ನು ಎದುರಿಸಲು ಮತ್ತು ಕನಿಷ್ಠ ಪ್ರಮಾಣದ ತೊಂದರೆಗಳೊAದಿಗೆ ಪರಿಸ್ಥಿತಿಯನ್ನು ನಿಭಾಯಿಸಲು ಭಾರತೀಯ ಆರ್ಥಿಕತೆ ಸಮರ್ಥವಾಗಿದೆ ಎಂದು ಗವರ್ನರ್ ಭರವಸೆ ನೀಡಿದ್ದಾರೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇರುವುದರಿಂದ ಸದ್ಯಕ್ಕೆ ಬ್ಯಾಂಕ್ ಸಾಲಗಳ ಇಎಂಐ ದರಗಳಲ್ಲಿ ಯಾವುದೇ ಏರಿಕೆಯಾಗುವುದಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು