LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಿಪೋ ದರದ ಯಥಾಸ್ಥಿತಿ: ಆರ್‌ಬಿಐ ಗವರ್ನರ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾನಿಟರಿ ಪಾಲಿಸಿ ಸಮಿತಿಯು ನಿರೀಕ್ಷೆಯಂತೆ ರಿಪೋ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಆರ್‌ಬಿಐ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ಆರ್‌ಬಿಐನ ರಿಪೋ ದರ ಅಥವಾ ಬಡ್ಡಿದರವು ಶೇ. 5.25ರಲ್ಲಿ ಮುಂದುವರಿಯಲಿದೆ. ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ಹಣದುಬ್ಬರ ಏರಿಕೆಯಾಗುವ ಸಾಧ್ಯತೆ ಇದ್ದರಿಂದ ಬಡ್ಡಿದರ ಇಳಿಸದೇ ಇರುವ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಎಂಪಿಸಿ ಸಭೆ ಬಳಿಕ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಪತ್ರಿಕಾಗೋಷ್ಠಿ ಕರೆದು ಪಾಲಿಸಿ ನಿರ್ಧಾರಗಳನ್ನು ಪ್ರಕಟಿಸಿದರು. ಹಾಗೆಯೇ, 2026-27ರ ವರ್ಷಕ್ಕೆ ಜಿಡಿಪಿ ಬೆಳವಣಿಗೆ ಮತ್ತು ಹಣದುಬ್ಬರ ಎಷ್ಟಾಗಬಹುದು ಎಂದು ಮಾಡಲಾಗಿರುವ ಅಂದಾಜನ್ನೂ ಬಹಿರಂಗಪಡಿಸಿದರು.
ಈ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ. 4.6 ಇರಬಹುದು ಎಂದು ಆರ್‌ಬಿಐ ಪ್ರೊಜೆಕ್ಟ್ ಮಾಡಿದೆ. ಮೊದಲ ಕ್ವಾರ್ಟರ್‌ನಲ್ಲಿ ಶೇ. 4, ಎರಡನೇ ಕ್ವಾರ್ಟರ್‌ನಲ್ಲಿ ಶೇ. 4.4, ಮೂರನೇ ಕ್ವಾರ್ಟರ್‌ನಲ್ಲಿ ಶೇ. 5.2, ನಾಲ್ಕನೇ ಕ್ವಾರ್ಟರ್‌ನಲ್ಲಿ ಶೇ. 4.7ರಷ್ಟು ಹಣದುಬ್ಬರ ಇರಬಹುದು ಎನ್ನುವುದು ಆರ್‌ಬಿಐ ಎಂಪಿಸಿಯಲ್ಲಿ ಬಂದಿರುವ ಅಭಿಪ್ರಾಯ.
ಈ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಸರಾಸರಿಯಾಗಿ ಶೇ. 6.9 ಜಿಡಿಪಿ ಬೆಳೆಯಬಹುದು ಎಂದು ಆರ್‌ಬಿಐ ಈ ಬಾರಿ ಅಂದಾಜು ಮಾಡಿದೆ. ಮೊದಲ ಕ್ವಾರ್ಟರ್‌ನಲ್ಲಿ ಶೇ. 6.8, ಎರಡನೇ ಕ್ವಾರ್ಟರ್‌ನಲ್ಲಿ ಶೇ. 6.7, ಮೂರನೇ ಕ್ವಾರ್ಟರ್‌ನಲ್ಲಿ ಶೇ. 7 ಮತ್ತು ನಾಲ್ಕನೇ ಕ್ವಾರ್ಟರ್‌ನಲ್ಲಿ ಶೇ. 7.2ರಷ್ಟು ಆರ್ಥಿಕತೆ ಬೆಳೆಯಬಹುದು ಎಂದು ಸಂಜಯ್ ಮಲ್ಹೋತ್ರಾ ತಿಳಿಸಿದರು.
ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ವಿಚಾರ ಪ್ರಸ್ತಾಪಿಸಿದ ಆರ್‌ಬಿಐ ಗವರ್ನರ್, ಪ್ರಸಕ್ತ ವರ್ಷದ ಆರ್ಥಿಕ ಬೆಳವಣಿಗೆಯ ಮೇಲೆ ಈ ಬಿಕ್ಕಟ್ಟು ಪರಿಣಾಮ ಬೀರುವ ಸಾಧ್ಯತೆಯನ್ನು ವಿವರಿಸಿದರು. ಬಿಕ್ಕಟ್ಟಿನಿಂದ ವಿವಿಧ ಕ್ಷೇತ್ರಗಳನ್ನು ರಕ್ಷಿಸಲು ಸರ್ಕಾರ ತೆಗೆದುಕೊಂಡಿರುವ, ತೆಗೆದುಕೊಳ್ಳುತ್ತಿರುವ ವಿವಿಧ ಕ್ರಮಗಳನ್ನು ಅವರು ಸ್ವಾಗತಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು