LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಅಹವಾಲುಗಳನ್ನು ತಿಂಗಳೊಳಗೆ ಬಗೆಹರಿಸಿ

ದೊಡ್ಡಬಳ್ಳಾಪುರ: ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ರಾಜ್ಯ ಸರ್ಕಾರ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಜನತಾ ದರ್ಶನದಲ್ಲಿ ಸ್ವೀಕರಿಸಿದ ದೂರು, ಅಹವಾಲುಗಳನ್ನು ತಿಂಗಳೊಳಗಾಗಿ ಬಗೆಹರಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ದೊಡ್ಡಬಳ್ಳಾಪುರ ನಗರದ ಡಾ.ಬಾಬು ಜಗಜೀವನ ರಾಮ್ ಭವನದಲ್ಲಿ ಏರ್ಪಡಿಸಲಾಗಿದ್ದ ‘ಜನತಾ ದರ್ಶನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನರು ಪ್ರತಿ ದಿನ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಜನತಾ ದರ್ಶನ ಕಾರ್ಯಕ್ರಮ ಸಹಕಾರಿಯಾಗುತ್ತದೆ.

ಸಾರ್ವಜನಿಕರು ಮನೆ, ಸ್ಮಶಾನ ರಸ್ತೆ, ರಾಜಕಾಲುವೆ, ನಿವೇಶನ ಹಂಚಿಕೆ ಮುಂತಾದ ವಿವಿಧ ರೀತಿಯ ಸಮಸ್ಯೆ, ಬೇಡಿಕೆ, ದೂರು ಅಹವಾಲುಗಳನ್ನು ಸಲ್ಲಿಸುವರು. ಅವುಗಳಲ್ಲಿ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಅರ್ಜಿಗಳನ್ನು ಶೀಘ್ರವೇ ಒಂದು ತಿಂಗಳ ಕಾಲಮಿತಿಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಹೇಳಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಧೀರಜ್ ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ, ಸಮಸ್ಯೆಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪರಿಹರಿಸಬೇಕು ಎಂದರಲ್ಲದೆ ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣ, ಒಳಚರಂಡಿ ವ್ಯವಸ್ಥೆ, ನಗರೋತ್ಥಾನ ಕಾಮಗಾರಿಗಳು, ನಿರಾಶ್ರಿತರಿಗೆ ಮನೆ ಕಲ್ಪಿಸುವ ಸಂಬಂಧ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಬೆಂಗಳೂರುಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು, ಸರ್ಕಾರದ ನಿರ್ದೇಶನದಂತೆ ಪ್ರತಿ 15 ದಿನಕ್ಕೊಮ್ಮೆ ಜನತಾದರ್ಶನವನ್ನು ಹಮ್ಮಿಕೊಳ್ಳಲಾಗುವುದು ಜನತಾ ದರ್ಶನದಲ್ಲಿ  ಸಲ್ಲಿಸಲಾದ ಅರ್ಜಿಗಳನ್ನು ಐ.ಪಿ.ಜಿ.ಆರ್.ಎಸ್ ಪೊರ್ಟಲ್‍ನಲ್ಲಿ ನೋಂದಾಯಿಸಿ, ವಿಲೇವಾರಿ ಆದ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ದೇವನಹಳ್ಳಿಯಲ್ಲಿ ನಡೆದ ಜನತಾ ದರ್ಶನದಲ್ಲಿ 277 ಅಹವಾಲು ಸ್ವೀಕರಿಸಲಾಗಿತ್ತು ಅದರಲ್ಲಿ 145 ವಿಲೇವಾರಿ ಆಗಿದೆ.

ಹೊಸಕೋಟೆಯಲ್ಲಿ 318 ಅರ್ಜಿಗಳು ಸ್ವೀಕರಿಸಿ 180 ಅರ್ಜಿ ವಿಲೇವಾರಿ ಮಾಡಲಾಗಿದೆ. ಇನ್ನು ಕೆಲವು ನ್ಯಾಯಾಲಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಕೂಲಂಕುಶವಾಗಿ ಪರಿಶೀಲಿಸಬೇಕು ಹಾಗಾಗಿ ತಡವಾಗುತ್ತದೆ. ಒಟ್ಟಾರೆ ಶೇಕಡ 70% ರಷ್ಟು ಅರ್ಜಿಗಳು ವಿಲೇವಾರಿ ಮಾಡಲಾಗಿದೆ ಎಂದರು.

297 ಅರ್ಜಿ ಸ್ವೀಕಾರ ಪೋಡಿ ಪ್ರಕರಣ, ಜಮೀನು ತಕರಾರು, ಗ್ರಾಮಗಳಿಗೆ ವಿದ್ಯುತ್ ಸಂಪರ್ಕ, ಜಮೀನು ಸರ್ವೆ, ಸ್ಮಶಾನ ಜಾಗ ಹಾಗೂ ರಸ್ತೆ ವ್ಯವಸ್ಥೆ, ಗೋಮಾಳ ಒತ್ತುವರಿ, ಹಕ್ಕು ಪತ್ರ ಹಂಚಿಕೆ, ಕೆರೆ ಕಟ್ಟೆ ಸಂರಕ್ಷಣೆ, ಪಡಿತರ ಚೀಟಿ ಹಂಚಿಕೆ, ನಿವೇಶನ ಹಂಚಿಕೆ, ಚರಂಡಿ ನಿರ್ಮಾಣ, ಮೂಲಭೂತ ಸಮಸ್ಯೆಗಳು ಸೇರಿದಂತೆ ಒಟ್ಟು 297 ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೊಡ್ಡಬಳ್ಳಾಪುರ ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಡಿವೈಎಸ್ಪಿ ರವಿ, ದೊಡ್ಡಬಳ್ಳಾಪುರ ನಗರಸಭಾ ಅಧ್ಯಕ್ಷರಾದ ಸುಧಾರಾಣಿ, ಉಪಾಧ್ಯಕ್ಷೆ ಫರಾನಾ ತಾಜ್ ಸೇರಿದಂತೆ, ಚುನಾಯಿತ ಜನ ಪ್ರತಿನಿಧಿಗಳು, ಜಿಲ್ಲಾ ಮತ್ತು ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು