LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ವಿಲಕ್ಷಣತೆಗೆ ಸಾಕ್ಷಿ ದರ್ಶನ್ ಅಭಿಮಾನಿಗಳ ವಿರುದ್ಧ ಆರ್‍ಜಿವಿ ಮಾತು

ಹೈದರಾಬಾದ್: ರಾಮ್ ಗೋಪಾಲ್ ವರ್ಮಾ ಅವರು ಸದಾ ವಿವಾದದ ಮೂಲಕ ಸುದ್ದಿ ಆಗುತ್ತಾ ಇರುತ್ತಾರೆ. ಹಲವು ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡುತ್ತಾರೆ. ಈಗ ಆರ್‍ಜಿವಿ ಅವರು ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಅವರು, `ನಿರ್ದೇಶಕರು ಚಿತ್ರಕಥೆ ಬರೆದ ಬಳಿಕವೇ ಸಿನಿಮಾದ ಶೂಟಿಂಗ್ ಆರಂಭಿಸುತ್ತಾರೆ. ಹಲವು ಸಂದರ್ಭದಲ್ಲಿ ನಿರ್ದೇಶಕರು ಸೆಟ್‍ನಲ್ಲೂ ಚಿತ್ರಕಥೆ ಬರೆಯುತ್ತಾರೆ. ಆದರೆ, ದರ್ಶನ್ ಪ್ರಕರಣದಲ್ಲಿ ಸಿನಿಮಾ ಬಿಡುಗಡೆ ಆದ ಬಳಿಕ ಚಿತ್ರಕಥೆ ಬರೆಯಲಾಗುತ್ತಿದೆ' ಎಂದಿದ್ದಾರೆ. ದರ್ಶನ್ ಅವರು ಕೊಲೆ ಕೇಸ್‍ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್‍ಜಿವಿ ಮಾತನಾಡಿದ್ದಾರೆ.

ರೇಣುಕಾ ಸ್ವಾಮಿ ದರ್ಶನ್ ಅಭಿಮಾನಿ. ಅವರ ಮೇಲೆ ಹಲ್ಲೆ ಮಾಡಿದ್ದು ದರ್ಶನ್ ಹಾಗೂ ಅವರ ಆಪ್ತರು. `ವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸುತ್ತಿರುವ ಅಭಿಮಾನಿಯನ್ನು ಕೊಲ್ಲಲು ಸ್ಟಾರ್ ನಟ ಡೈ ಹಾರ್ಡ್ ಅಭಿಮಾನಿಗಳನ್ನೇ ಬಳಿಸಿಕೊಂಡಿದ್ದಾರೆ. ಇದು ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿಯ ವಿಲಕ್ಷಣತೆಗೆ ಸೂಕ್ತ ಉದಾಹರಣೆಯಾಗಿದೆ. ತಾವು ಆರಾಧಿಸುವ ನಟ ಹೀಗೆಯೇ ಇರಬೇಕು ಎಂದು ಬಯಸುತ್ತಾ ಹೋದಾಗ ಆಗುವ ಅಡ್ಡಪರಿಣಾಮಗಳು ಇವು' ಎಂದಿದ್ದಾರೆ ರಾಮ್ ಗೋಪಾಲ್ ವರ್ಮಾ.

ದರ್ಶನ್ ಫ್ಯಾಮಿಲಿ ಮ್ಯಾನ್ ಆಗಿರಬೇಕು ಎಂದು ರೇಣುಕಾಸ್ವಾಮಿ ಬಯಸಿದ್ದರು. ಅವರು ಪವಿತ್ರಾ ಬದಲು ವಿಜಯಲಕ್ಷ್ಮಿ ಜೊತೆ ಇರಲಿ ಎಂದು ರೇಣುಕಾ ಸ್ವಾಮಿ ಅಂದುಕೊಂಡಿದ್ದರು. ಈ ಕಾರಣಕ್ಕೆ ಪವಿತ್ರಾಗೆ ಅವರು ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು. ಇದರಿಂದ ಅವರ ಪ್ರಾಣವೇ ಹೋಗಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು