LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹನುಮನ ಜನ್ಮಸ್ಥಳ ಅಂಜನಾದ್ರಿಯಲ್ಲಿ ರಿಷಬ್ ಶೆಟ್ಟಿ ನಟನೆಯ `ಜೈ ಹನುಮಾನ್' ಚಿತ್ರಕ್ಕೆ ಚಾಲನೆ

ಬಹು ನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ `ಜೈ ಹನುಮಾನ್' ಚಿತ್ರದ ಚಿತ್ರೀಕರಣಕ್ಕೆ ಭಾನುವಾರ ಪವಿತ್ರ ತಾಣವಾದ ಹಂಪಿಯ ಸಮೀಪದ ಅಂಜನಾದ್ರಿ ಬೆಟ್ಟದಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಹನುಮಂತನ ಜನ್ಮಸ್ಥಳವೆಂದೇ ಪ್ರಸಿದ್ಧಿಯಾಗಿರುವ ಈ ಪುಣ್ಯಕ್ಷೇತ್ರದಲ್ಲಿ ಚಿತ್ರತಂಡವು ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಿನಿಮಾ ಪ್ರಕ್ರಿಯೆಗೆ ಚಾಲನೆ ನೀಡಿತು.
ಚಿತ್ರದ ನಾಯಕ ನಟ ರಿಷಬ್ ಶೆಟ್ಟಿ ಮತ್ತು ಪ್ರತಿಭಾವಂತ ನಿರ್ದೇಶಕ ಪ್ರಶಾಂತ್ ವರ್ಮ ಅವರು ದೈವಿಕ ಆಶೀರ್ವಾದವನ್ನು ಕೋರಿ ಶಾಸ್ತೊçÃಕ್ತವಾಗಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಚಿತ್ರದ ತಾಂತ್ರಿಕ ವರ್ಗ ಹಾಗೂ ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದು, ಒಂದು ಆಧ್ಯಾತ್ಮಿಕ ಮತ್ತು ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು.
ಚಿತ್ರದ ಮೊದಲ ದೃಶ್ಯಕ್ಕೆ ಖ್ಯಾತ ನಿರ್ಮಾಪಕ ಭೂಷಣ್ ಕುಮಾರ್ ಅವರು ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರೆ, ಹೆಸರಾಂತ ವಿತರಕ ಅನಿಲ್ ತಡಾನಿ ಅವರು ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ವಿಶೇಷವಾಗಿ, 'ಹನುಮಾನ್' ಚಿತ್ರದ ಯಶಸ್ವಿ ನಟ ತೇಜ ಸಜ್ಜ ಅವರು ಮೊದಲ ದೃಶ್ಯಕ್ಕೆ ಆ್ಯಕ್ಷನ್ ಕಟ್ ಹೇಳುವ ಮೂಲಕ ತಂಡಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಪ್ರಮುಖ ಘಟ್ಟವಾಗಿ ನಿರ್ಮಾಪಕರಾದ ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ, ಅನಿಲ್ ತಡಾನಿ ಮತ್ತು ಭೂಷಣ್ ಕುಮಾರ್ ಅವರು ಚಿತ್ರದ ಸ್ಕಿçಪ್ಟ್ ಅನ್ನು ನಿರ್ದೇಶಕ ಪ್ರಶಾಂತ್ ವರ್ಮ ಅವರಿಗೆ ಹಸ್ತಾಂತರಿಸುವ ಮೂಲಕ ಅಧಿಕೃತವಾಗಿ ಚಿತ್ರದ ಕೆಲಸಗಳಿಗೆ ನಾಂದಿ ಹಾಡಿದರು.
ಚಿತ್ರದ ತಾಂತ್ರಿಕ ವಿವರ: ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ನಟಿಸುತ್ತಿದ್ದರೆ, ಪ್ರಶಾಂತ್ ವರ್ಮ ನಿರ್ದೇಶನವಿರಲಿದೆ. ಆಸ್ಕರ್ ವಿಜೇತ ಸಂಯೋಜಕ ಎಂ. ಎಂ. ಕೀರವಾಣಿ ಅವರ ಸಂಗೀತ, ಎಸ್. ತಿರುನಾ ವಕ್ಕರಸು ಛಾಯಾಗ್ರಹಣವಿರಲಿದೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸುತ್ತಿರುವ ಈ ಚಿತ್ರವು `ಪ್ರಶಾಂತ್ ವರ್ಮ ಸಿನಿಮಾಟಿಕ್ ಯುನಿವರ್ಸ್'  ಅಡಿಯಲ್ಲಿ ಅದ್ಧೂರಿ ವೆಚ್ಚದಲ್ಲಿ ಮೂಡಿಬರಲಿದೆ. ಹನುಮ ಂತನ ಪಾತ್ರದಲ್ಲಿ ರಿಷಬ್ ಶೆಟ್ಟಿ ಅವರನ್ನು ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು