LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರೋಲೆಕ್ಸ್ ಚಿತ್ರಕ್ಕೆ ಸೆನ್ಸಾರ್ ಅಸ್ತು 


ಮಧು ಫಿಲಂ ಸುರ್ಕು್ಯಯಿಟ್ಸ್  ಸಂಸ್ಥೆ ಲಾಂಛನದಡಿಯಲ್ಲಿ ಅಂಬಟಿ ಮಧು ಮೋಹನ್ ನಿರ್ಮಿಸಿರುವ, ಶ್ರೀನಿವಾಸ್ ಮಂಡ್ಯ ನಿರ್ದೇಶಿಸಿರುವ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ರೋಲೆಕ್ಸ್” ಚಿತ್ರವನ್ನು ಪ್ರಾದೇಶಿಕ ಸೆನ್ಸಾರ್ ಮಂಡಳಿ ವೀಕ್ಷಿಸಿ U/ಂ ಪ್ರಮಾಣಪತ್ರ ನೀಡಿದೆ.
ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯಾವುದೇ ವಯಸ್ಸಿನ ಮಿತಿಯಿಲ್ಲದೆ ಪ್ರತಿಯೊಬ್ಬರು ಕುಟುಂಬ ಸಮೇತ ನೋಡಬಹುದು. ಚಿತ್ರದಲ್ಲಿ ಮನೋರಂಜನೆ ಪ್ರಧಾನ. ನೋಡುಗರಿಗೆ ಇದೊಂದು ನಗೆಯ ಹಬ್ಬ. ಈ ಚಿತ್ರದಲ್ಲಿ ಕೋಮಲ್ ಕುಮಾರ್ ಅವರ ಸ್ಟೆöÊಲಿಶ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.  ಸೋನಾಲ್ ಮೊಂತೆರೊ ಈ ಚಿತ್ರದ ನಾಯಕಿ. ವಿಶೇಷಪಾತ್ರದಲ್ಲಿ ವಿನೋದ್ ಪ್ರಭಾಕರ್ ಅಭಿನಯಿಸಿದ್ದಾರೆ. 
ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ ಎಂದು ನಿರ್ದೇಶಕ ಶ್ರೀನಿವಾಸ್ ಮಂಡ್ಯ ತಿಳಿಸಿದ್ದಾರೆ.
ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ  ಜೆಸ್ಟ್ ಗಿಫ್ಟ್ ಸಂಗೀತ ನೀಡಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ,  ಅರವಿಂದ್ ರಾಜ್ ಅವರ ಸಂಕಲನವಿರುವ ಈ ಚಿತ್ರಕ್ಕೆ ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿ ಹಾಗೂ ಮುರಳಿಕೃಷ್ಣ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST