LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸೋಲಿಗೆ ಸೇಡು ತೀರಿಸಿಕೊಳ್ತಾರಾ ರಾಯಲ್ ಚಾಲೆಂಜರ್ಸ್?

ಹೊಸದಿಲ್ಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೋಮವಾರ ನಡೆಯಲಿರುವ ಐಪಿಎಲ್ 39ನೇ ಹಣಾಹಣಿಯಲ್ಲಿಪೈಪೋಟಿ ನಡೆಸಲಿವೆ. ತನ್ನ ಹಿಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದು ಗೆಲುವಿನ ಲಯಕ್ಕೆ ಮರಳಿರುವ ರಾಯಲ್ ಚಾಲೆಂಜರ್ಸ್ ಹಿಂದಿನ ಡೆಲ್ಲಿಕ್ಯಾಪಿಟಲ್ಸ್ ವಿರುದ್ಧದ ಸೋಲಿಗೆ ಮುಯ್ಯಿ ತೀರಿಸಿಕೊಳ್ಳಲು ಹವಣಿಸುತ್ತಿದೆ.
ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಫಾಮ್ರ‍್ಗೆ ಮರಳಿದ ಬಳಿಕ ಗೆಲುವಿನ ಲಯ ಕಂಡುಕೊAಡಿರುವ ಕಳೆದ ಬಾರಿಯ ಚಾಂಪಿಯನ್ ಆರ್‌ಸಿಬಿ, ಜೇಟ್ಲಿ ಕ್ರೀಡಾಂಗಣದಲ್ಲಿ ತನ್ನ ಅಬ್ಬರವನ್ನು ಅನಾವರಣಗೊಳಿಸಲು ಸಜ್ಜಾಗಿದೆ. ಸದ್ಯ ಹತ್ತು ಅಂಕಗಳನ್ನು ಹೊಂದಿರುವ ರಜತ್ ಪಾಟೀದಾರ್ ಬಳಗ, ಸ್ಥಿರ ಪ್ರದರ್ಶನದೊಂದಿಗೆ ಪ್ಲೇಆಫ್ ಹಂತವನ್ನು ಸುಗಮ ಮಾಡಿಕೊಳ್ಳುವ ಗುರಿಯಲ್ಲಿದೆ. ಏಪ್ರಿಲ್ 18ರಂದು ಬೆಂಗಳೂರಿನಲ್ಲಿ ನಡೆದಿದ್ದ ಪಂದ್ಯದಲ್ಲಿ ಡೆಲ್ಲಿ ಎದುರು ಮಂಡಿಯೂರಿದ್ದ ಆರ್‌ಸಿಬಿ, ಈಗ ಹಿಂದಿನ ಸೋಲಿಗೆ ತಿರುಗೇಟು ನೀಡುವ ಅವಕಾಶವನ್ನು ಹೊಂದಿದೆ. ಆದರೆ ಇದರಲ್ಲಿ ಯಶಸ್ವಿಯಾಗುತ್ತದೆಯೋ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಅತ್ತ ಪಂಜಾಬ್ ಕಿಂಗ್ಸ್ ವಿರುದ್ಧ 264 ರನ್ ಗಳಿಸಿಯೂ ಪಂದ್ಯ ಉಳಿಸಿಕೊಳ್ಳುವಲ್ಲಿ ವಿಫಲಗೊಂಡಿರುವ ಅಕ್ಷರ್ ಪಟೇಲ್ ಸಾರಥ್ಯದ ಡೆಲ್ಲಿ, ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸ್ಥಿರ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿಯನ್ನು ಕಟ್ಟಿ ಹಾಕುವ ಒತ್ತಡದಲ್ಲಿದೆ. ನಿತೀಶ್ ರಾಣಾ ಮತ್ತು ಕೆ.ಎಲ್. ರಾಹುಲ್ ದ್ವಿತೀಯ ವಿಕೆಟ್‌ಗೆ ದಾಖಲೆಯ 220 ರನ್ ಗಳಿಸಿದರು. ಆದರೆ ನಿಸ್ತೇಜ ಬೌಲಿಂಗ್ ಪ್ರದರ್ಶನದಿಂದಾಗಿ ಡೆಲ್ಲಿ 4ನೇ ಸೋಲಿಗೆ ಗುರಿಯಾಗಿದೆ.
ತನ್ನ ಹಿಂದಿನ ಐದು ಪಂದ್ಯಗಳ ಪೈಕಿ ನಾಲ್ಕು ಸೋಲು ಮತ್ತು 1ರಲ್ಲಿ ಮಾತ್ರ ಗೆದ್ದಿರುವ ಕ್ಯಾಪಿಟಲ್ಸ್ ಮುಂದಿನ ಹಾದಿಯನ್ನು ಸುಗಮ ಮಾಡಿಕೊಳ್ಳಬೇಕಾದರೆ ಗೆಲುವಿನ ಹಾದಿಗೆ ಮರಳುವ ಜತೆಗೆ ಆಲ್‌ರೌಂಡ್ ಪ್ರದರ್ಶನ ನೀಡಬೇಕಿದೆ. ಒಟ್ಟಾರೆ ಆರ್‌ಸಿಬಿ ಎದುರಿನ ಪಂದ್ಯದ ಡೆಲ್ಲಿ ತಂಡಕ್ಕೆ ನೈಜ ಪರೀಕ್ಷೆಯಲ್ಲಿಒಂದಾಗಿದೆ. ಉಭಯ ತಂಡಗಳು 34ರಲ್ಲಿ ಮುಖಾಮುಖಿಯಾಗಿದ್ದು, ಡೆಲ್ಲಿ 13 ಮತ್ತು ಆರ್‌ಸಿಬಿ 20ರಲ್ಲಿ ಜಯ ಸಾಧಿಸಿವೆ. ಒಂದು ಪಂದ್ಯ ಫಲಿತಾಂಶರಹಿತವಾಗಿ ರದ್ದುಗೊಂಡಿದೆ. ಜೇಟ್ಲಿ ಕ್ರೀಡಾಂಗಣ ಬ್ಯಾಟಿಂಗ್ ಸ್ನೇಹಿಯಾಗಿದ್ದು, ರನ್ ಮಳೆ ಸುರಿಯುವ ನಿರೀಕ್ಷೆಯಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು