LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಾಳಿ ದೇವಸ್ಥಾನದಲ್ಲಿ `ರುದ್ರ ಕಾಲ'

ನಟ ದಿಗಂತ್ ಅಭಿನಯದ "ರುದ್ರ ಕಾಲ" ಚಿತ್ರದ ಮುಹೂರ್ತ ಸಮಾರಂಭ ಬುಧವಾರ ಕಾಳಿ ದೇವಸ್ಥಾನದಲ್ಲಿ ನೆರವೇರಿತು. ನಿರ್ದೇಶಕ ಯೋಗರಾಜ್ ಭಟ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಿರ್ದೇಶಕ ರಾಜ್ ಗುರು ಕ್ಯಾಮೆರಾ ಚಾಲನೆ ಮಾಡಿದರು.ನಿರ್ದೇಶಕ ಗೋಪಿ,ಮಾತನಾಡಿ ನಾನು ತೆಲುಗಿನಲ್ಲಿ ಎರಡು, ಕನ್ನಡದಲ್ಲಿ ಒಂದು ಚಿತ್ರ ನಿರ್ದೇಶನ ಮಾಡಿದ್ದೇನೆ. "ರುದ್ರ ಕಾಲ" ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಈ ಚಿತ್ರ ಕೂಡ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಇದು ಕ್ರೈಂ ಥ್ರಿಲ್ಲರ್ ಹಾಗೂ ಫ್ಯಾಮಿಲಿ ಎಮೋಷನ್ ಕಥಾಹಂದರ ಹೊಂದಿರುವ ಚಿತ್ರ. ಇತ್ತೀಚೆಗೆ ಖ್ಯಾತ ನಟಿ ಸಮಂತ ನಮ್ಮ ಚಿತ್ರದ ಶೀರ್ಷಿಕೆ ಅನಾವರಣ ಮಾಡಿಕೊಟ್ಟಿದ್ದರು. ನನ್ನ ಸಹೋದರ ರಮೇಶ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ದಿಗಂತ್ ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. "ಅಧ್ಯಕ್ಷ" ಚಿತ್ರದ ನಾಯಕಿ ಹೆಬಾ ಪಟೇಲ್ ಬಹಳ ವರ್ಷಗಳ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಟಿ ವಂಶಿ, ನಟ ಗೋವಿಂದೇ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕ್ರಿಸ್ಟೋಫರ್ ಜೋಸೆಫ್ ಛಾಯಾಗ್ರಹಣ, ರುದ್ರ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಚನ್ನಯ್ಯ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರವನ್ನು ರಮೇಶ್ ನಾಯ್ಕ ಅವರು ನಿರ್ಮಿಸುತ್ತಿದ್ದಾರೆ. ರಂಜಿತ ನವೀನ್ ಸಹ ನಿರ್ಮಾಪಕರು. ಮೇ ತಿಂಗಳಲ್ಲಿ ಬೆಂಗಳೂರಿನಲ್ಲೇ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎಂದರು. "ರುದ್ರ ಕಾಲ" ಚಿತ್ರ ಕ್ರೈಂ ಥ್ರಿಲ್ಲರ್ ಜೊತೆಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ. ರಮೇಶ್ ಅವರು ಒಳ್ಳೆಯ ಕಥೆ ಬರೆದಿದ್ದಾರೆ. ನಿರ್ದೇಶಕ ಗೋಪಿ ಅವರು ಕಥೆ ಹೇಳುವಾಗಲೇ ನನಗೆ ಕಥೆ ಬಹಳ ಇಷ್ಟವಾಯಿತು. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಎಂದರು ನಾಯಕ ದಿಗಂತ್.."ಅಧ್ಯಕ್ಷ" ನಂತರ ಹತ್ತು ವರ್ಷಗಳ ಬಳಿಕ ನಾನು ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಆ ಚಿತ್ರಕ್ಕೆ ಕನ್ನಡಿಗರು ತೋರಿದ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆಯಲಿ ಎಂದರು ನಾಯಕಿ ಹೆಬಾ ಪಟೇಲ್. ನಿರ್ದೇಶಕ ಗೋಪಿ ಅವರು ಹೇಳಿದ ಕಥೆ ಇಷ್ಟವಾಯಿತು. ದಿಗಂತ್ ಅವರೆ ಈ ಚಿತ್ರಕ್ಕೆ ಸೂಕ್ತ ನಾಯಕ ಎನಿಸಿತು. ಇಂದು ನಮ್ಮ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ಆಗಮಿಸಿದ ಗಣ್ಯರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ ಎಂದರು ನಿರ್ಮಾಪಕ ರಮೇಶ್ ನಾಯ್ಕ. ಸಹ ನಿರ್ಮಾಪಕಿ ರಂಜಿತ ನವೀನ್ ಮಾತನಾಡಿ, ನಮ್ಮ ಹೊಸಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
ಕಥೆಯ ಬಗ್ಗೆ ರಮೇಶ್ ಮಾಹಿತಿ ನೀಡಿದರು. ಕಾರ್ಯಕಾರಿ ನಿರ್ಮಾಪಕ ಶಿವರಾಜ್, ನಟಿ ವಂಶಿ, ನಟ ಗೋವಿಂದೇಗೌಡ, ಛಾಯಾಗ್ರಾಹಕ ಕ್ರಿಸ್ಟೋಫರ್ ಜೋಸೆಫ್, ಸಾಹಸ ನಿರ್ದೇಶಕ ಚನ್ನಯ್ಯ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು