LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸಿನಿಮಾ ಲೋಕಕ್ಕೆ ಕಾಲಿಟ್ಟ ಸಕ್ಕತ್ ಸ್ಟುಡಿಯೋ

ಕನ್ನಡ ಡಿಜಿಟಲ್ ಕ್ಷೇತ್ರದಲ್ಲಿ ಸುನೀಲ್ ರಾವ್, ಅನುಪಮಾ ಗೌಡ, ಸಿಂಧು ಲೋಕನಾಥ್ ಮುಂತಾದವರು ನಟಿಸಿರುವ "ಲೂಸ್ ಕನೆಕ್ಷನ್" ನಮ್ಮ ಕನ್ನಡದ ಮೊದಲ ವೆಬ್ ಸರಣಿಯ ನಿರ್ಮಿಸಿದ್ದು ಸಕ್ಕತ್ ಸ್ಟುಡಿಯೋ ಸಂಸ್ಥೆ.

ಸ್ಟಾರ್ ದಂಪತಿಗಳಾದ ಆರ್. ಜೆ. ಪ್ರದೀಪ್ ಮತ್ತು ಶ್ವೇತಾ ಆರ್ ಪ್ರಸಾದ್ ಅವರ ನೇತೃತ್ವದಲ್ಲಿ ಶುರುವಾದ ಸಕ್ಕತ್ ಸ್ಟುಡಿಯೋ ವೈವಿಧ್ಯಮಯ ವೆಬ್ ಸರಣಿಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುತ್ತಲೇ ಇತ್ತು. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ರವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಅವರ ಸಹಯೋಗದೊಂದಿಗೆ ಸಕ್ಕತ್ ಸ್ಟುಡಿಯೋ, ನಾಗಭೂಷಣ ಮತ್ತು ಸಂಜನಾ ಆನಂದ್ ಅಭಿನಯದ "ಹನಿಮೂನ್", ಪೂರ್ಣ ಮೈಸೂರು ಮತ್ತು ಸಿರಿ ರವಿಕುಮಾರ್ ಅಭಿನಯದ "ಬೈ ಮಿಸ್ಟೇಕ್" ಮತ್ತು ಅರವಿಂದ್ ಅಯ್ಯರ್ ಮತ್ತು ದಿಶಾ ಮದನ್ ಅಭಿನಯದ "ಹೇಟ್ ಯು ರೋಮಿಯೋ" ಹೀಗೆ ಉನ್ನತ ಮಟ್ಟದ ಸರಣಿಗಳು ನಿರ್ಮಾಣವಾಗಿ ವೂಟ್ (Voot) ಆಹಾ (Aha ), ಮುಂತಾದ ಒಟಿಟಿ ಪ್ಲಾಟ್ಫಾರಂ ಗಳಲ್ಲಿ ನೋಡುಗರ ಗಮನ ಸೆಳೆದಿವೆ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಚಿತ್ರದ ಮಹೂರ್ತಕ್ಕೆ ಆಗಮಿಸಿ ಕ್ಲಾಪ್ ಮಾಡಿ ಚಿತ್ರಕ್ಕೆ ಶುಭ ಹಾರೈಸಿದ್ದರು.ದಕ್ಷಿಣ ಭಾರತದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದ "ದಿ ಬೆಸ್ಟ್ ಆಕ್ಟರ್" ಮೈಕ್ರೊ ಮೂವಿ ನಿರ್ದೇಶನ ಸೇರಿದಂತೆ, ದಿವಂಗತ ಸಂಚಾರಿ ವಿಜಯ್ ನಟಿಸಿರುವ 'ಪುಕ್ಸಟ್ಟೆ ಲೈಫ್ "ಚಿತ್ರವನ್ನು ನಿರ್ಮಿಸಿದ್ದ ನಾಗರಾಜ್ ಸೋಮಯಾಜಿ ಇದೀಗ ಸಕ್ಕತ್ ಸ್ಟುಡಿಯೋದ ಮೊದಲ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಇದು ಒಂದು ಅದ್ಭುತವಾದ ಸಿನಿಮೀಯ ಅನುಭವದ ಭರವಸೆಯನ್ನು ಈ ತಂಡ ನೀಡುತ್ತದೆ. ಹೆಚ್ಚು ಹೆಚ್ಚು ಕನ್ನಡ ಸಿನಿಮಾಗಳು ನಿರ್ಮಾಣವಾಗಬೇಕು ಹಾಗು ಗೆಲ್ಲಬೇಕೆಂಬ ನಿರೀಕ್ಷೆಯಲ್ಲಿರುವ ಪ್ರೇಕ್ಷಕ ವರ್ಗ, ಝೀ5ನ ಒಟಿಟಿ ಕ್ಷೇತ್ರದಲ್ಲಿ ಪ್ರದೀಪ್ ಅವರ ಹಿಂದಿನ ನಾಯಕತ್ವ ಮತ್ತು ಛಾಯಾಗ್ರಹಣ ಮತ್ತು ಕಥೆ ಹೇಳುವಿಕೆಯಲ್ಲಿ ನಾಗರಾಜ್ ಅವರ ಪ್ರಭಾವ, ಸೃಜನಶೀಲ ಮನಸ್ಸುಗಳನ್ನು ಒಳಗೊಂಡಿರುವ ತಂಡವು ನಿಸ್ಸಂದೇಹವಾಗಿ 'ಸಕ್ಕತ್' ಕನ್ನಡ ಚಿತ್ರವನ್ನು ಪ್ರೇಕ್ಷಕನಿಗೆ ನೀಡುತ್ತಾರೆಂಬ ಭರವಸೆ ಮೂಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು