LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಇಂದು ಸಾಮ್ರಾಟ್ ಮಾಂಧಾತ ತೆರೆಗೆ

ಹೇಮಂತ್ ಪ್ರೊಡಕ್ಷನ್ಸ್ ಮೂಲಕ ಹೇಮಂತ್ ಕುಮಾರ್ ಅವರ ನಿರ್ಮಾಣ ಹಾಗೂ ನಿರ್ದೇಶನವಿರುವ "ಸಾಮ್ರಾಟ್ ಮಂಧಾತ" ಚಿತ್ರ ಈವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಇಕ್ಷ್ವಾಕು ವಂಶದ (ಸೂರ್ಯವಂಶ) ಯುವನಾಶ್ವ ಮಹಾರಾಜನ ಮಗನಾದ ಮಾಂಧಾತ ತನ್ನ ಸತ್ಯ ಮತ್ತು ಧರ್ಮದಿಂದ ಕೂಡಿದ ಆಡಳಿತದಿಂದಲೇ ಹೆಸರು ಗಳಿಸಿದ್ದನು.

ಶತಬಿಂದುವಿನ ಮಗಳು ಬಿಂದುಮತಿ ಚೈತ್ರರಥಿಯನ್ನು ವರಿಸಿದ ಮಾಂಧಾತನಿಗೆ ಪುರುಕುತ್ಸ ಅಥವಾ ಸುಸಂಧಿ, ಅಂಬರೀಷ ಮತ್ತು ಮುಚುಕುಂದರೆಂಬ ಮೂವರು ಗಂಡು ಮಕ್ಕಳು ಮತ್ತು ಐವತ್ತು ಹೆಣ್ಣುಮಕ್ಕಳಿದ್ದರೆಂದು ಹೇಳಲಾಗುತ್ತಿದೆ. ಆತನ ಕಥೆಯನ್ನು ಸಾಮ್ರಾಟ್ ಮಾಂಧಾತ ಚಿತ್ರದ ಮೂಲಕ ಹೇಮಂತ್ ಅವರು ತೆರೆಮೇಲೆ ನಿರೂಪಿಸಹೊರಟಿದ್ದಾರೆ.

ಈ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲರೂ ರಂಗಭೂಮಿ ಕಲಾವಿದರಾಗಿದ್ದು ಐದಾರು ತಿಂಗಳವರೆಗೆ ತರಬೇತಿ ಪಡೆದು ಕ್ಯಾಮೆರಾ ಮುಂದೆ ಅಭಿನಯಿಸಿದ್ದಾರೆ. ತ್ರೇತಾಯುಗದ ಆದಿಭಾಗದಲ್ಲಿ ಭೂಲೋಕದಲ್ಲಿ ಅಧರ್ಮ ಹೆಚ್ಚಾದಾಗ ಧರ್ಮದೇವ ಶನಿ ಮಹಾತ್ಮನ ಮೊರೆ ಹೋಗುತ್ತಾನೆ. ಆ ಸಂದರ್ಭದಲ್ಲಿ ಶನಿ ಮತ್ತು ಲಕ್ಷ್ಮಿಯ ನಡುವೆ ಯಾರು ಶ್ರೇಷ್ಠರೆಂದು ನಿರ್ಧರಿಸುವ ಕಥೆಯೇ ಸಾಮ್ರಾಟ್ ಮಾಂಧಾತ.

ಚಿತ್ರದಲ್ಲಿ ಮಾಂಧಾತನಾಗಿ ರಂಗಭೂಮಿ ಕಲಾವಿದ ಬಸವರಾಜು ಅವರು ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶನಿದೇವನಾಗಿ ಸುಂದರಬಾಬು, ಬಿಂದುಮತಿಯಾಗಿ ಭಾರತಿ, ನಾರದನಾಗಿರುವ ನಂಜುಂಡಪ್ಪ, ಶೌಭರಿ ಮಹರ್ಷಿಯಾಗಿ ನರಸಿಂಹಮೂರ್ತಿ, ಯವನಾಶ್ವನಾಗಿರುವ ಮಂಜುನಾಥ ಕಾಣಿಸಿಕೊಂಡಿದ್ದಾರೆ. ಸಾಮ್ರಾಟ ಮಾಂಧಾತ ಚಿತ್ರಕ್ಕೆ ಆರ್.ವೀರೇಂದ್ರಕುಮಾರ್ ಸಂಭಾಷಣೆ ಸಾಹಿತ್ಯ ರಚಿಸಿದ್ದಾರೆ. ಶಿವರಾಮ್ ಅವರ ಸಂಕಲನ ಈ ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು