LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"ಗಂಧದ ಮರದ ತುಂಡುಗಳು ವಶಕ್ಕೆ"

ಹನೂರು: ಮಲೆ ಮಹದೇಶ್ವರ ವನ್ಯ ಜೀವಿಧಾಮದ ಹನೂರು ಬಫರ್ ವಲಯದ ಮಂಗಲ ಗ್ರಾಮದ ವೃದ್ಧೆಯೊಬ್ಬರ ಮನೆಯಲ್ಲಿ ಸಂಗ್ರಹಣೆ ಮಾಡಿದ್ದ ಗಂಧದ ಮರದ ತುಂಡುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಹನೂರು ತಾಲ್ಲೂಕಿನ ಮಂಗಲ ಗ್ರಾಮದ ರಾಜಮ್ಮ ಬಂಧಿತ ಆರೋಪಿ. ಹನೂರು ಬಫರ್ ವಲಯದ ಮಂಗಲ ಗ್ರಾಮದಲ್ಲಿ ವೃದ್ಧೆಯೊಬ್ಬರ ಮನೆಯಲ್ಲಿ ಶ್ರೀಗಂಧದ ತುಂಡುಗಳನ್ನು ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಲೆ ಮಹದೇಶ್ವರ ವನ್ಯಜೀವಿಧಾಮ ಹನೂರು ವಲಯದ ಡಿಸಿಎಫ್ ಭಾಸ್ಕರ್ ಮಾರ್ಗದರ್ಶನದಲ್ಲಿ ಎಸಿಎಫ್ ವಿರಾಜ್ ನೇತೃತ್ವದಲ್ಲಿ ವಲಯ ಆರಣ್ಯ ಅಧಿಕಾರಿ ನಾಗರಾಜು ಹಾಗೂ ಸಿಬ್ಬಂದಿ ವೃದ್ಧೆಯ ಮನೆಯ ಮೇಲೆ ದಾಳಿ ನಡೆಸಿದಾಗ ಬೀರುವಿನಲ್ಲಿ ಲಕ್ಷಾಂತರರೂ. ಮೌಲ್ಯದ ೧೦೦ ಕೆಜಿ ಶ್ರೀಗಂಧ ಮರದ ತುಂಡುಗಳನ್ನು ಶೇಖರಣೆ ಮಾಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಆರೋಪಿ ಹಾಗೂ ಶೇಖರಣೆ ಮಾಡಿದ್ದ ಶ್ರೀಗಂಧದ ತುಂಡುಗಳು ಹಾಗೂ ಬೀರುವನ್ನು ವಶಕ್ಕೆ ಪಡೆದಿದ್ದಾರೆ.

ರಾಜಮ್ಮರವರಿಗೆ ಶ್ರೀಗಂಧದ ತುಂಡುಗಳನ್ನು ಯಾರು ತಂದುಕೊಟ್ಟಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆ ಸಂಬAಧ ಸೂಕ್ತ ತನಿಖೆ ನಡೆಸಿದರೆ ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ಸತ್ಯಾಂಶ ಹೊರಬರಲಿದೆ.ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಉಮಾಪತಿ, ನಾಗರಾಜು, ಡಿಆರ್‌ಎಫ್‌ಒ ನಂದೀಶ್, ಸಿಬ್ಬಂದಿ ವರ್ಗದವರಾದ ವಿನಾಯಕ್, ಮಹೇಶ್, ನಿಂಗರಾಜ್, ಲಾಯಪ್ಪ, ಚಿನ್ನಸ್ವಾಮಿ, ಲಲಿತ, ಅಶೋಕ್, ಇನ್ನಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು