LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಇಇ ಯಲ್ಲಿ ಸಾನ್ವಿ ಜೈನ್ ಮತ್ತು ಕೃಷ್ಣ ಸಾಯಿ ಅಮೋಘ ಸಾಧನೆ

ಬೆಂಗಳೂರು: ವೃತ್ತಿಶಿಕ್ಷಣ ಕೋರ್ಸುಗಳಿಗೆ ಪೂರ್ವ ಸಿದ್ಧತೆ ಸೇವೆಗಳನ್ನು ಒದಗಿಸುವಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಆಕಾಶ್ ಎಜುಕೇಶನಲ್ ಸರ್ವೀಸಸ್ ಲಿಮಿಟೆಡ್ (AESL)ನ ಬೆಂಗಳೂರು ಮೂಲದ ಇಬ್ಬರು ವಿದ್ಯಾರ್ಥಿಗಳು ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಷನ್ (ಎಇಇ) ಮುಖ್ಯ ಪರೀಕ್ಷೆ 2024 ರ ಎರಡನೇ ಸೆಶನ್ ನಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ.

ಂಇSಐ ನ ವಿದ್ಯಾರ್ಥಿಗಳಾದ ಸಾನ್ವಿ ಜೈನ್ ಮತ್ತು ಕೃಷ್ಣ ಸಾಯಿ ಶಿಶಿರ್ ವಿ ಉಪ್ಪಳ ಅವರು ಅಖಿಲ ಭಾರತ ಮಟ್ಟದಲ್ಲಿ ಕ್ರಮವಾಗಿ 34 ಮತ್ತು 72ನೇ ಖಚಿಟಿಞ ಪಡೆದಿದ್ದಾರೆ. ಈ ಮೂಲಕ ಸಾನ್ವಿ ಜೈನ್ ಕರ್ನಾಟಕದ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಸಾನ್ವಿ ಭೌತಶಾಸ್ತ್ರ ಮತ್ತು ಗಣಿತದಲ್ಲಿ ಶೇ.100 ಕ್ಕೆ ನೂರು ಅಂಕಗಳನ್ನು ಪಡೆದಿದ್ದರೆ, ಕೃಷ್ಣ ರಾಸಾಯನಶಾಸ್ತ್ರ ಮತ್ತು ಗಣಿತದಲ್ಲಿ ಶೇ.100 ಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.

ತಮ್ಮ ಈ ಸಾಧನೆಗಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿರುವ ಅವರು, ತಮ್ಮ ಯಶೋಗಾಥೆಯ ಈ ಪ್ರಯಾಣದಲ್ಲಿ ಆಕಾಶ್ ಸಿದ್ಧಪಡಿಸಿದ ವಿಷಯ ಮತ್ತು ತರಬೇತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಇದಕ್ಕಾಗಿ ನಾವು ಆಕಾಶ್‍ಗೆ ಋಣಿಯಾಗಿದ್ದೇವೆ. ಆಕಾಶ್ ನ ಬೋಧಕ ಸಿಬ್ಬಂದಿಯ ಅಚಲವಾದ ಮಾರ್ಗದರ್ಶನವಿಲ್ಲದೇ ಮತ್ತು ಅವರು ಕಾಲಮಿತಿಯಲ್ಲಿ ನಮಗೆ ಹಲವಾರು ವಿಷಯಗಳನ್ನು ಕಲಿಸಿಕೊಡದಿದ್ದಲ್ಲಿ ನಮಗೆ ಈ ಪರೀಕ್ಷೆ ದುಸ್ತರವಾದ ಸವಾಲಾಗಿರುತ್ತಿತ್ತು ಎಂದು ಹೇಳುತ್ತಾರೆ.

ಆಕಾಶ್ ಎಜುಕೇಶನಲ್ ಸರ್ವೀಸಸ್ ಲಿಮಿಟೆಡ್ (AESL) ನ ಚೀಫ್ ಅಕಾಡೆಮಿಕ್ ಅಂಡ್ ಬ್ಯುಸಿನೆಸ್ ಹೆಡ್ ಧೀರಜ್ ಮಿಶ್ರಾ ಅವರು ಮಾತನಾಡಿ, ಈ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆಯು AESLನ ಬದ್ಧತೆಗೆ ಸಾಕ್ಷಿಯಾಗಿದೆ. ನಮ್ಮ ಸಂಸ್ಥೆಯು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ತೋರುತ್ತಿರುವ ಕಾಳಜಿ ಮತ್ತು ಸಮರ್ಪಣೆಯನ್ನು ಈ ಸಾಧನೆ ತೋರಿಸುತ್ತದೆ. ವಿದ್ಯಾರ್ಥಿಗಳಿಗೆ ಸಮಗ್ರ ಕೋಚಿಂಗ್ ಮತ್ತು ನಾವೀನ್ಯತೆಯ ಕಲಿಕಾ ಪರಿಹಾರಗಳನ್ನು ಒದಗಿಸುವ ಮೂಲಕ ಅವರನ್ನು ನಾವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸುತ್ತೇವೆ. ಈ ಸಾಧನೆ ಮಾಡಿರುವ ವಿದ್ಯಾರ್ಥಿಗಳ ಭವಿಷ್ಯ ಇನ್ನೂ ಯಶಸ್ವಿಯಾಗಲಿ ಮತ್ತು ಉಜ್ವಲವಾಗಿರಲಿ ಎಂದು ಹಾರೈಸುತ್ತೇವೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು