LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಸರ್ಜಾಪುರ ಜೈಭೀಮ್ ತಂಡ ಪ್ರಥಮ

ಶಿಡ್ಲಘಟ್ಟ ಗ್ರಾಮಾಂತರ: ತಾಲೂಕಿನ ಮೇಲೂರು ಗ್ರಾಮದಲ್ಲಿ, ಜೈ ಕರ್ನಾಟಕ ವಾಲೀಬಾಲ್ ಸಂಸ್ಥೆಯಿAದ ಹಿರಿಯ ಮತ್ತು ಕಿರಿಯ ವಾಲಿಬಾಲ್ ಆಟಗಾರರ ಜ್ಞಾಪಕಾರ್ಥವಾಗಿ ಆಯೋಜಿಸಲಾಗಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ, ಪ್ರಥಮ ಬಹುಮಾನವನ್ನು ಸರ್ಜಾಪುರದ ಜೈಭೀಮ್ ತಂಡವು ಪಡೆದುಕೊಂಡಿದ್ದು, 1 ಲಕ್ಷ ನಗದು ಬಹುಮಾನ, ಆಕರ್ಷಕ ಟ್ರೋಫಿ ಪಡೆಯಿತು.ಹಾಸನ ತಂಡವು ದ್ವಿತೀಯ ಬಹುಮಾನ 75 ಸಾವಿರ ನಗದು, ಆಕರ್ಷಕ ಟ್ರೋಫಿ, ತೃತೀಯ ಬಹುಮಾನವನ್ನು ಮೇಲೂರು ರಿಪಬ್ಲಿಕ್ ತಂಡವು ಪಡೆಯಿತು. 50 ಸಾವಿರ ನಗದು, ಆಕರ್ಷಕ ಟ್ರೋಪಿ ಪಡೆದುಕೊಂಡರು. ನಾಲ್ಕನೇ ಬಹುಮಾನ ಬೆಂಗಳೂರು ನಗರದ ರೆಡ್ಡಿ ತಂಡವು ಪಡೆದಿದ್ದು, 25 ಸಾವಿರ ನಗದು, ಆಕರ್ಷಕ ಟ್ರೋಪಿ ಪಡೆದುಕೊಂಡರು.ಶಾಸಕ ಬಿ.ಎನ್.ರವಿಕುಮಾರ್ ಅವರು, ವಾಲಿಬಾಲ್ ಟೂರ್ನಿಮೆಂಟ್ ಗೆ ಚಾಲನೆ ನೀಡಿ ಮಾತನಾಡಿದರು.ಯುವಕರು, ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗುವುದರ ಜೊತೆಗೆ, ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದಕ್ಕೆ ಸಹಕಾರಿಯಾಗುತ್ತದೆ. ಇಂತಹ ಕ್ರೀಡೆಗಳು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಯೋಜನೆಗೊಳ್ಳುವ ಮೂಲಕ ಯುವ ಸಮೂಹದಲ್ಲಿ ಒಗ್ಗಟ್ಟಿನ ಜೊತೆಗೆ ಅವರನ್ನು ಸಂಘಟಿತರನ್ನಾಗಿ ಮಾಡಲು ಹೆಚ್ಚು ಸಹಕಾರಿಯಾಗಲಿದೆ. ಕ್ರೀಡೆಗಳನ್ನು ಕ್ರೀಡಾಸ್ಫೂರ್ತಿಯಿಂದ ಆಡುವುದನ್ನು ರೂಢಿಸಿಕೊಳ್ಳಬೇಕು. ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕಾರ ಮಾಡಿಕೊಳ್ಳಬೇಕು ಎಂದರು. ಗ್ರಾಮದ ಹಿರಿಯ ವಾಲಿಬಾಲ್ ಆಟಗಾರರನ್ನು ಸನ್ಮಾನಿಸಲಾಯಿತು. ಕ್ರೀಡಾ ಪಟುಗಳಿಗೆ ಮತ್ತು ಪಂದ್ಯಗಳ ವೀಕ್ಷಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿತ್ತು. ಗಂಗಾದೇವಿ ಟ್ರಸ್ಟ್ ನ ಧರ್ಮದರ್ಶಿ ರಾಮಕೃಷ್ಣಪ್ಪ, ಜೈ ಕರ್ನಾಟಕ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಸಿ.ಎನ್.ಸೂರೇಗೌಡ, ಮೇಲೂರು ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾಗರಾಜ್, ವಹ್ನಿಕುಲ ರಾಜ್ಯ ಸಂಘದ ನಿರ್ದೇಶಕ ಶಿವರಾಜ್, ವಾಲ್ಮೀಕಿ ಸಂಘದ ಅಧ್ಯಕ್ಷ ಗಿರೀಶ್ ನಾಯಕ್, ಆಯೋಜಕರಾದ ಎಸ್.ಎನ್.ಪಾರ್ಥಸಾರಥಿ, ಟಿ.ವಿಜಯಕುಮಾರ್, ರಾಜು,(ಕೆ.ಜಿ.ಎಫ್), ಪ್ರದೀಪ್ ಜೋಗಿ, ಆರ್.ಚಂದ್ರೇಗೌಡ, ತಿಮ್ಮರಾಜು, ಡಿ.ಮುನಿಶಾಮಯ್ಯ, ಅಣ್ಣಪ್ಪ, ಹಾಗೂ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು