LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

`ಸರ್ವಜ್ಞನ ತ್ರಿಪದಿಗಳು ಜೀವನಾನುಭವ, ಬದುಕಿನ ಅರಿವು ಮೂಡಿಸಲಿವೆ’

ದಾವಣಗೆರೆ: ಸರ್ವಜ್ಞ ಕವಿಯು ತಮ್ಮ ತ್ರಿಪದಿಗಳ ಮೂಲಕ ಜೀವನದ ಅನುಭವ ಕಲಿಸಿಕೊಟ್ಟು, ಬದುಕಿನ ಅರಿವು ಮೂಡಿಸುವ ಪ್ರಯತ್ನ ಮಾಡಿದವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎA ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ನಡೆದ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸರ್ವಜ್ಞನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ವಚನ ಸಾಹಿತ್ಯ, ಹಳೇಗನ್ನಾಡ, ಹೊಸಗನ್ನಾಡವನ್ನು ಶಾಲಾ ಮಕ್ಕಳಿಗೆ ಹಾಗೂ ಹಾಸ್ಟೆಲ್ ಮಕ್ಕಳಿಗೂ ತಿಳಿಯುವಂತೆ ನಾವು ಮಾಡಿದ್ದೇವೆ. ಸರ್ವಜ್ಞ ಎಂದರೆ ಎಲ್ಲವನ್ನು ತಿಳಿದವನು, ಸಮಾಜದ ಜ್ಞಾನವನ್ನು ಅರಿತವನು, ಸರ್ವಜ್ಞ ಕವಿಯು, ವಿದ್ಯೆ, ಕೃಷಿ ಹಾಗೂ ಜೀವನದ ಕುರಿತ ಆಳವನ್ನು ಅಳೆಯುವುದರ ಮೂಲಕ ದೊಡ್ಡ ವ್ಯಕ್ತಿತ್ವವನ್ನು ಹೊಂದಿದ್ದರು. ಅವರ ತ್ರಿಪದಿಗಳಲ್ಲಿ ಒಳ ಅರಿವು ಜಾಸ್ತಿ ಇದ್ದು, ಶ್ರೀಸಾಮಾನ್ಯರಿಗೂ ಅರ್ಥವಾಗುವಂತಿರುತ್ತದೆ. ಸರ್ವಜ್ಞರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡು ಮುಂದಿನ ಪೀಳಿಗೆಗೆ ತಲುಪಿಸು ವಂಥ ಕೆಲಸವನ್ನು ಮಾಡಬೇಕು ಎಂದರು.
ಕುಂಬಾರ ಸಮಾಜದವರು ನೀಡಿದ ಮನ ವಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ನಿಮ್ಮ ಬೇಡಿಕೆಯಂತೆ ನಿಮಗೆ ಬೇಕಾದ ಮಣ್ಣನ್ನು ನೀಡಲು ನಾವು ಸಹಕರಿಸುತ್ತೆವೆ ಎಂದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಯೋಜನಾ ನಿರ್ದೇಶಕರಾದ ಮಹಾಂತೇಶ್, ಜಿ.ಪಂ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಕುಂಬಾರ ಸಮಾಜದ ಅಧ್ಯಕ್ಷರಾದ ಪುಷ್ಪರಾಜ್, ಬುರುಡೆಕಟ್ಟೆ ಮಂಜಪ್ಪ, ಹಾಗೂ ಸಮಾಜ ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು