LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿಲ್ಪಿ ಅರುಣ್ ಯೋಗಿರಾಜ್‍ಗೆ ಪ್ರತಿಷ್ಠಿತ ‘ಅಭಿನವ ಅಮರಶಿಲ್ಪಿ’ ಪ್ರಶಸ್ತಿ ಪ್ರದಾನ

ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯರಾಮಮಂದಿರದಲ್ಲಿ ಪ್ರತಿಷ್ಠಾಪನೆ ಗೊಂಡಿರುವ ಬಾಲಕ ರಾಮನ ವಿಗ್ರಹವನ್ನು ಕೆತ್ತಿರುವ ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಡಾ. ಹಿರೇಮಠ ಫೌಂಡೇಷನ್ ವತಿಯಿಂದ ಸೋಮವಾರ ಪ್ರತಿಷ್ಠಿತ “ಅಭಿನವ ಅಮರಶಿಲ್ಪಿ” ಬಿರುದು ನೀಡಿ ಗೌರವಿಸಲಾಯಿತು.

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಗರ್ ದರ್ಶನ್ ಕನ್ವೆನ್ಷನ್ ಹಾಲ್ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅವರನ್ನು ಪುರಸ್ಕರಿಸಲಾಯಿತು.ದಾಂಡೇಲಿಯ ಮ್ಯಾಕ್ಸಿಲೋ ಫೇಷಿಯಲ್ ಸರ್ಜನ್ ಡಾ.ವಿಶ್ವನಾಥ ಹಿರೇಮಠ ಅವರು ಈ ಪ್ರತಿಷ್ಠಾನದ ನೇತೃತ್ವ ವಹಿಸಿಕೊಂಡಿದ್ದಾರೆ.

ಇದುರಾಜ್ಯದಾದ್ಯಂತ ಆಸ್ಪತ್ರೆಗಳ ಜಾಲವನ್ನು ಹೊಂದಿದೆ. ಮೈಸೂರು ಜಿಲ್ಲೆಯಿಂದ ತೆಗೆದುಕೊಂಡು ಹೋಗಿರುವ ಕೃಷ್ಣ ಶಿಲೆಯಿಂದ ಕೆತ್ತಿದ 51 ಇಂಚಿನ ರಾಮಲಲ್ಲಾನ ಮೂರ್ತಿಗೆ ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಅರುಣ್ ಯೋಗಿರಾಜ್ ಅವರು ಈ ಮೂರ್ತಿ ನಿರ್ಮಿಸಿದ್ದು ಜನವರಿ 22ರಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಾಣಪ್ರತಿಷ್ಠಾನೆ ಮಾಡಿದ್ದಾರೆ.

ಸೋಮವಾರ ಪ್ರಶಸ್ತಿ ಸ್ವೀಕರಿಸಿಮಾತನಾಡಿದ ಶಿಲ್ಪಿ ಅರುಣ್ ಯೋಗಿ ರಾಜ್ ಅವರು, “ಅಯೋಧ್ಯೆಯಲ್ಲಿ ಇಡೀ ದೇಶವೇ ಬೆರಗಾಗುವಂತಹ ಅದ್ಭುತ ಶ್ರೀ ರಾಮ ಮಂದಿರ ನಿರ್ಮಿಸಿ ಉದ್ಘಾಟಿಸಿದ ಕೀರ್ತಿ ಶ್ರೀ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಮೋದಿಯವರಲ್ಲದೇ ಮತ್ಯಾರಿಂದಲೂ ಈ ಕೆಲಸ ಕೈಗೂಡುವುದು ಅಸಾಧ್ಯದ ಮಾತಾಗಿತ್ತು.

ದೇಶದ ಜನತೆ ಶ್ರೀ ರಾಮನ ಮೇಲಿಟ್ಟಿರುವ ಶೃದ್ಧಾಭಕ್ತಿಗೆ ಬೆರಗಾಗಿದ್ದೇನೆ. ತಿಂಗಳೊಪ್ಪತ್ತಿನಲ್ಲಿ 65 ಲಕ್ಷ ಜನರು ಈಗಾಗಲೇ ಅಯೋಧ್ಯೆಯ ನೂತನರಾಮಮಂದಿರಕ್ಕೆ ಭೇಟಿ ನೀಡಿರು ವುದು ನಿಜಕ್ಕೂ ಅದ್ಭುತ. ಬೇಲೂರುಮತ್ತು ಹಳೆಬೀಡಿನ ಐತಿಹಾಸಿಕ ದೇವಸ್ಥಾನಗಳಲ್ಲಿ ಸುಂದರ ಶಿಲ್ಪಗಳನ್ನು ಕೆತ್ತಿರುವ ಶಿಲ್ಪಿ ಜಕಣಾಚಾರಿಗೆಅಮರಶಿಲ್ಪಿ ಎಂಬ ಬಿರುದು ಹೊಂದಿದ್ದಾರೆ.

ಅದಕ್ಕೆ ಸಮಾನಾರ್ಥವಾಗಿ ಅಯೋಧ್ಯೆಯ ರಾಮಮಂದಿರದ ಬಾಲಕ ರಾಮನ ಸುಂದರ ಮೂರ್ತಿಯನ್ನು ಕೆತ್ತಿರುವ ಮೈಸೂರು ಮೂಲದ ಅರುಣ್ ಯೋಗಿರಾಜ್‍ಗೆ ಡಾ. ಹಿರೇಮಠ ಫೌಂಡೇಷನ್ ಅಭಿನವ ಅಮರಶಿಲ್ಪಿ ಬಿರುದು ನೀಡಿ ಗೌರವಿಸಿತು.ಇದೇ ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ 200ಕ್ಕೂ ಅಧಿಕ ಧಾರ್ಮಿಕ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶ್ರೀರಾಮಸೇನೆಯ ಮುಖಂಡ ಶ್ರೀ ಪ್ರಮೋದ್ ಮುತಾಲಿಕ್ ಅವರು ಮಾತನಾಡಿದರು. ಡಾ. ಹಿರೇಮಠ ಫೌಂಡೇಷನ್ನ ಡಾ. ವಿಶ್ವನಾಥ ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು