LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಸೀಟ್ ಎಡ್ಜ್' ಚಿತ್ರದ ಟ್ರೇಲರ್ ಬಿಡುಗಡೆ

`ಲವ್ ಯು ಮುದ್ದು' ಚಿತ್ರದ ನಂತರ ಯುವನಟ ಸಿದ್ಧು ಮೂಲಿಮನಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸಚಿತ್ರ 'ಸೀಟ್ ಎಡ್ಜ್' ತೆರೆಗೆ ಬರಲು ತಯಾರಾಗಿದೆ. ಇದೇ ೩೦ಕ್ಕೆ 'ಸೀಟ್ ಎಡ್ಜ್' ಚಿತ್ರ ತೆರೆಗೆ ಬರಲಿದೆ. ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ.
ಇನ್ನು 'ಸೀಟ್ ಎಡ್ಜ್' ಚಿತ್ರ ವ್ಲಾಗರ್ ಹುಡುಗನೊಬ್ಬನ ಘೋಸ್ಟ್ ಹಂಟಿAಗ್ ಕುರಿತಾದ ಕಥಾಹಂದರವನ್ನು ಹೊಂದಿರುವ ಚಿತ್ರವಾಗಿದೆ. ಹೀಗಾಗಿ 'ಸೀಟ್ ಎಡ್ಜ್' ಚಿತ್ರದ ಟ್ರೇಲರ್ ಅನ್ನು ಕನ್ನಡದ ಪ್ರಮುಖ ವ್ಲಾಗರ್ ಗಳ ಕೈಯಿಂದಲೇ ಚಿತ್ರ ತಂಡ ಬಿಡುಗಡೆ ಮಾಡಿಸಿದೆ.
ಡಾರ್ಕ್ ಕಾಮಿಡಿಯ ಜೊತೆಗೆ ಹಾರರ್-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬರುತ್ತಿರುವ 'ಸೀಟ್ ಎಡ್ಜ್' ಸಿನಿಮಾದಲ್ಲಿ ನಾಯಕ ಸಿದ್ಧು ಮೂಲಿಮನಿ ಅವರಿಗೆ ರವೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ, `ರಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷಿ÷್ಮ ಸಿದ್ದಯ್ಯ, ಕಿರಣ್, ಪುನೀತ್ ಬಾಬು, ತೇಜು ಪೊನ್ನಪ್ಪ, ಮನಮೋಹನ್ ರೈ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಕನ್ನಡದಲ್ಲಿ ಈ ಹಿಂದೆ ತೆರೆಗೆ ಬಂದಿದ್ದ 'ಕೆಮಿಸ್ಟಿçà ಆಫ್ ಕರಿಯಪ್ಪ' ಹಾಗೂ 'ಕ್ರಿಟಿಕಲ್ ಕೀರ್ತನೆಗಳು' ಮೊದಲಾದ ಚಿತ್ರಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವವಿರುವ ಚೇತನ್ ಶೆಟ್ಟಿ 'ಸೀಟ್ ಎಡ್ಜ್' ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. 'ಎನ್. ಆರ್. ಸಿನಿಮಾ ಪ್ರೊಡಕ್ಷನ್ಸ್' ಬ್ಯಾನರಿನಲ್ಲಿ ಗಿರಿಧರ ಟಿ. ವಸಂತಪುರ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ.
`ಸೀಡ್ ಎಡ್ಜ್' ಸಿನಿಮಾದ 'ವ್ಲಾಗ್-೨' ಹೆಸರಿನ ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಚಿತ್ರತಂಡ, 'ಸೀಟ್ ಎಡ್ಜ್'ನಲ್ಲಿರುವ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿತು.
ಮೊದಲಿಗೆ ಮಾತನಾಡಿದ 'ಸೀಟ್ ಎಡ್ಜ್' ಚಿತ್ರದ ನಾಯಕ ನಟ ಸಿದ್ಧು ಮೂಲಿಮನಿ, 'ಇದೊಂದು ಔಟ್ ಅಂಡ್ ಔಟ್ ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದಿರುವ ಸಿನಿಮಾ. ಈ ಸಿನಿಮಾದಲ್ಲಿ ಮೊದಲ ಬಾರಿಗೆ ನಾನೂಬ್ಬ ಯು-ಟ್ಯೂಬ್ ವ್ಲಾಗರ್ ಆಗಿ ಕಾಣಿಸಿಕೊಂಡಿದ್ದೇನೆ. ಯಾರೂ ಹೋಗದ ಭಯಾನಕ್ಕೆ ಜಾಗವನ್ನು ಪ್ರೇಕ್ಷಕರಿಗೆ ಪರಿಚಯಿಸಬೇಕು ಎಂದು ಹಠಕ್ಕೆ ಬಿದ್ದ ನಾನು, ಘೋಸ್ಟ್ ಟೌನ್ ಗೆ ಹೋಗಿ ಘೋಸ್ಟ್ ಹಂಟಿಂಗ್ ವೀಡಿಯೋ ಮಾಡಲು ನಿರ್ಧರಿಸುತ್ತೇನೆ. ಕೊನೆಗೆ ನಾನು ಅಂದುಕೊಂಡಂತೆ ಘೋಸ್ಟ್ ಹಂಟಿಂಗ್ ವಿಡಿಯೋ ಮಾಡಿ ಆಡಿಯನ್ಸ್ಗೆ ತೋರಿಸುತ್ತೇನಾ..? ಇಲ್ಲಿವಾ..? ಈ ಘೋಸ್ಟ್ ಹಂಟಿಂಗ್ ಅನ್ನೋದು ಹೇಗಿರುತ್ತದೆ ಎಂಬುದೇ ನನ್ನ ಪಾತ್ರ' ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.
ನಾಯಕಿ ರವೀಕ್ಷಾ ಶೆಟ್ಟಿ ಮಾತನಾಡಿ, `ನಾನು ಈ ಸಿನಿಮಾದಲ್ಲಿ ಮಧ್ಯಮ ವರ್ಗದ ಕಾಲೇಜ್ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಘೋಸ್ಟ್ ಹಂಟಿಂಗ್‌ಗೆ ಹೋಗುವ ಯು-ಟ್ಯೂಬರ್ ಜೊತೆಗೆ ನಾನು ಕೂಡ ತೊಂದರೆಗೆ ಸಿಲುಕಿಕೊಳ್ಳುತ್ತೇನೆ. ಎರಡು ಶೇಡ್‌ಗಳಿರುವಂಥ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ. ಇಡೀ ಸಿನಿಮಾದ ನನಗೆ ಸಾಕಷ್ಟು ವಿಷಯಗಳನ್ನು ಕಲಿಸಿದೆ. ಒಳ್ಳೆಯ ಅನುಭವಗಳನ್ನು ಕೊಟ್ಟಿದೆ. ಒಳ್ಳೆಯ ಕಥೆ, ಹಾಡು, ಡ್ಯಾನ್ಸ್, ಕಾಮಿಡಿ, ಸೆಂಟಿಮೆಂಟ್, ಸಸ್ಪೆನ್ಸ್-ಥ್ರಿಲ್ಲರ್ ಹೋಗೆ ಎಲ್ಲಾ ಥರದ ಅಂಶಗಳೂ ಈ ಸಿನಿಮಾದಲ್ಲಿದೆ. ಖಂಡಿತವಾಗಿಯೂ 'ಸೀಟ್ ಎಡ್ಜ್' ಆಡಿಯನ್ಸ್ನ 'ಸೀಟ್ ಎಡ್ಜ್' ನಲ್ಲಿ ಕೂರಿಸುವಂಥ ಸಿನಿಮಾವಾಗಲಿದೆ' ಎಂಬ ಭರವಸೆ ವ್ಯಕ್ತಪಡಿಸಿದರು.
ನಿರ್ದೇಶಕ ಚೇತನ್ ಶೆಟ್ಟಿ,ನಿರ್ಮಾಪಕ ಗಿರಿಧರ ಟಿ. ವಸಂತಪುರ ಮಾತನಾಡಿ, ಎಲ್ಲಾ ಥರದ ಪ್ರೇಕ್ಷಕರಿಗೂ ಇಷ್ಟವಾಗುವಂಥ, ಮನೆಮಂದಿ ಒಟ್ಟಾಗಿ ಕೂತು ನೋಡುವಂಥ ಸಿನಿಮಾ ಮಾಡಿದ್ದೇವೆ' ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ನಟರಾದ ರಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಸಂಗೀತ ನಿರ್ದೇಶಕ ಆಕಾಶ್ ಪರ್ವ, ಛಾಯಾಗ್ರಹಕ ದೀಪಕ್ ಕುಮಾರ್ ಜೆ. ಕೆ ಮೊದಲಾದವರು 'ಸೀಟ್ ಎಡ್ಜ್' ಚಿತ್ರದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಸುತ್ತಮುತ್ತ ಸುಮಾರು ೪೫ ದಿನಗಳ ಕಾಲ ೪೫ 'ಸೀಟ್ ಎಡ್ಜ್' ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಅರ್ಮನ್ ಮಲ್ಲಿಕ್, ಟಿಪುö್ಪ ಮೊದಲಾದ ಗಾಯಕರು 'ಸೀಟ್ ಎಡ್ಜ್' ಚಿತ್ರದ ಹಅಡುಗಳಿಗೆ ಧ್ವನಿಯಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು