LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಮಾ.1ರಿಂದ ಮಾ.22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಜೆರಾಕ್ಸ್ ಅಂಗಡಿಗಳು ಬಂದ್ ಆಗಿರಲಿವೆ.
ಈ ಬಾರಿ 6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ.

ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಎಸ್‍ಆರ್‍ಟಿಸಿ ವಿಶೇಷ ಆಫರ್ ಘೋಷಿಸಿದೆ.

ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೇಟ್ ತೋರಿಸಿ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು