LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸುವರ್ಣ ಸೌಧಕ್ಕೆ ಬಿಗಿ ಭದ್ರತೆ

ಬೆಳಗಾವಿ: ನಿನ್ನೆ ದೆಹಲಿಯ ಪಾರ್ಲಿಮೆಂಟ್ ಭವನದಲ್ಲಿ ಭದ್ರತಾ ಲೋಪ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸುವರ್ಣಸೌಧ ಸುತ್ತಾಮುತ್ತಾ ವ್ಯಾಪಕ ಬಿಗಿಭದ್ರತೆ ಒದಗಿಸಲಾಗಿದೆ. ಸುವರ್ಣಸೌಧಕ್ಕೆ ಬರುವ ಎಲ್ಲಾ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡಲಾಗುತ್ತಿತ್ತು. ಸೌಧದ ಎಲ್ಲಾ ದ್ವಾರಗಳಲ್ಲೂ ಭಾರಿ ಪೋಲಿಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಒಂದು ದ್ವಾರದಲ್ಲಿ ಮಾತ್ರ ಸಾರ್ವಜನಿಕರಿಗೆ ಪ್ರವೇಶವಕಾಶ ನೀಡಲಾಗಿದ್ದು, ಉಳಿದಂತೆ ಬೇರೆ ಯಾವ ದ್ವಾರಗಳ ಕಡೆಯೂ ಸಾರ್ವಜನಿಕರಿಗೆ ಪ್ರವೇಶವಿಲ್ಲ. ನೂರಾರು ಸಂಖ್ಯೆಯಲ್ಲಿ ಪೋಲಿಸರ ನಿಯೋಜಿಸಿದ್ದು ಭದ್ರತಾ ಲೋಪವಾಗಬಾರದೆಂದು ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಅವರು, ಮೊಗಸಾಲೆ, ಕಾರಿಡಾರ್‍ಗಳಿಗೆ ಖುದ್ದು ತಾವೇ ತೆರಳಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದರು.
ಮಾರ್ಷಲ್‍ಗಳಿಗೆ ಭದ್ರತಾ ಲೋಪವಾಗದಂತೆ ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದರು.ಸುವರ್ಣಸೌಧ ಕಟ್ಟಡಕ್ಕೆ ಭದ್ರತಾ ಸಿಬ್ಬಂದಿ ನಿಯೋಜನೆಯಲ್ಲಿ ಹೆಚ್ಚಳ ಮಾಡಲಾಗಿದೆ.

ಇಂದು ಹಲವಾರು ಜನರನ್ನು ಪೋಲಿಸರು ವಿಚಾರಣೆ ನಡೆಸಿ ಹೊರ ಹಾಕಿದ ಘಟನೆ ಜರುಗಿದೆ.ಓರ್ವ ಸ್ವಾಮಿಜಿಯನ್ನು ಪೋಲಿಸರು ತರಾಟೆಗೆ ತಗೆದುಕೊಂಡು ಹೊರ ದಬ್ಬಿದರು. ಅದೆ ರೀತಿ ಮಹಿಳೆಯರು ಸೇರಿದಂತೆ ಹಲವಾರು ಸಚಿವ ಶಾಸಕರ ಹಿಂಬಾಲಕರನ್ನು ಹೊರ ಹಾಕಿದ ಘಟನೆ ಜರುಗಿತು.

ಡಾ.ಜಿ.ವೈ. ಪದ್ಮನಾಗರಾಜು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು