LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಅಕ್ಕೂರು ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ರಾಮನಗರ: ತಾಲ್ಲೂಕಿನ ಅಕ್ಕೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ  ಜೆಡಿಎಸ್ ಬೆಂಬಲಿತ ಶಿವುಗೌಡ ನೂತನ ಅಧ್ಯಕ್ಷರಾಗಿ, ಕಾಂಗ್ರೆಸ್ ಬೆಂಬಲಿತ ಗೋಪಾಲ್ ಉಪಾಧ್ಯಕ್ಷರಾಗಿ ಚುನಾವಣೆ ಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಕ್ಕೂರು ಪಿಎಸಿಎಂಎಸ್ ನಲ್ಲಿ ಅದ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ಸಂಘದಲ್ಲಿ ಚುನಾವಣೆ ನಡೆಯಿತು. ಅದ್ಯಕ್ಷ ಸ್ಥಾನಕ್ಕೆ ಶಿವುಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಗೋಪಾಲ್ ಒಂದೊಂದೆ ನಾಮಪತ್ರಗಳನ್ನು ಸಲ್ಲಿಸಿದ್ದರು. ಇದರಿಂದ ರಿಟರ್ನಿಂಗ್ ಅಧಿಕಾರಿಯಾಗಿದ್ದ ಮಂಜುನಾಥ್ ಅವರುಗಳ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಪ್ರಭಾರ ಕಾರ್ಯದರ್ಶಿ ಅನಿತಾ ಇದ್ದರು.

ಚುನಾವಣಾ ಪ್ರಕ್ರಿಯೆಯಲ್ಲಿ 10 ನಿರ್ದೇಶಕರಾದ ಸಿದ್ದಲಿಂಗಯ್ಯ, ಲೋಕೇಶ್, ಪುಟ್ಟಸ್ವಾಮಯ್ಯ, ಹನುಮೇಶ್, ಅನುಸೂಯ, ಶಿವಣ್ಣ, ಚಿಕ್ಕಸ್ವಾಮಿ, ಸುಭಾಷ್ ಚಂದ್ರ,  ಭಾಗವಹಿಸಿದ್ದರು. ಒರ್ವ ನಿರ್ದೇಶಕಿ ಶಿವಮ್ಮ ಗೈರಾಗಿದ್ದರು.ಈ ವೇಳೆ ನೂತನ ಅಧ್ಯಕ್ಷ ಶಿವುಗೌಡ  ಅಭಿನಂದನೆ ಸ್ವೀಕರಿಸಿ ಮಾತನಾಡಿ ನಾನು ಸಂಘದ ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆ ಯಾಗಲು ಸಹಕರಿಸಿದ ಎಲ್ಲ ನಿರ್ದೇಶಕರು ಮತ್ತು ಮುಖಂಡರು, ಪಕ್ಷದ ವರಿಷ್ಟರು ಗಳಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಎ.ಮಂಜುನಾಥ್, ಮುಖಂಡ ನಾಗರಕಲ್ಲುದೊಡ್ಡಿ ಶಿವಣ್ಣ ಹಾಗೂ ಸ್ಥಳೀಯ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಪ್ರಶ್ತುತ ಸಂಘವು ಲಾಭದಲ್ಲಿದ್ದು, 4.5 ಕೋಟಿ ರೂ ರೈತರಿಗೆ ಬೆಳೆ ಸಾಲವನ್ನು ವಿತರಣೆ ಮಾಡಲಾಗಿದೆ, ಮತ್ತಷ್ಟು ಸರ್ಕಾರದ ಸವಲತ್ತುಗಳನ್ನು ರೈತರಿಗೆ ತಲುಪಿಸುವ ಕೆಲಸ ಮಾಡುತ್ತೇನೆ. ಸಹಕಾರಿ ಕ್ಷೇತ್ರದಲ್ಲಿ ಜನರ ಬಳಿ ತಲುಪಿ ಅವರಿಗೆ ಸಂಘದಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸಲು ಒಳ್ಳೆಯ ಅವಕಾಶಗಳಿವೆ. ಆಗಾಗಿ ಸಂಘದ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರ ಸಹಕಾರದಿಂದ ರೈತರು ಮತ್ತು ಸಂಘದ ಆರ್ಥಿಕ ಬೆಳವಣಿಗೆ ಯಲ್ಲಿ ಪ್ರಮುಖ ಪಾತ್ರ ವಹಿಸುವುದಾಗಿ ತಿಳಿಸಿದರು.

ಈ ವೇಳೆ ನೂತನ ಅಧ್ಯಕ್ಷ- ಉಪಾದ್ಯಕ್ಷರನ್ನು ಎಪಿಎಂಸಿ ಮಾಜಿ ಅದ್ಯಕ್ಷ ಪುಟ್ಟರಾಮಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಹನುಮೇಶ್, ಜೆಡಿಎಸ್ ವಕೀಲರ ಘಟಕದ ಅಧ್ಯಕ್ಷ ರಾಜಶೇಖರ, ಮುಖಂಡರಾದ ರಾಜು, ಬೆಟ್ಟಸ್ವಾಮಿ, ವೆಂಕಟೇಶ್, ರವೀಶಾಣ್ಣ ಕೆಂಪಣ್ಣ, ರಂಗಸ್ವಾಮಿ, ಸಿದ್ದಲಿಂಗಣ್ಣ ಮೀಸೆನಾಥಪ್ಪ, ಲೋಕೇಶ್, ಮಂಡಿ ಪ್ರಕಾಶ, ಜೈ ಕುಮಾರ್ ಮತ್ತಿತರರು ಹಾಜರಿದ್ದು ಅಭಿನಂದಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು