LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸ್ವತಃ ಬಿಸಿಯೂಟ ಸವಿದು, ಆಹಾರದ ಗುಣಮಟ್ಟ ಪರಿಶೀಲನೆ


ಕೊಳ್ಳೇಗಾಲ: ಪಟ್ಟಣದ ಸರ್ಕಾರಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ದಿಢೀರ್ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಹಾಗೂ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ವೇಳೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮಧ್ಯಾಹ್ನದ ಬಿಸಿಯೂಟವನ್ನು ಸ್ವತಃ ಸವಿದು, ಆಹಾರದ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕರು ವಿದ್ಯಾರ್ಥಿಗಳೊಂದಿಗೆ ಆತ್ಮೀಯ ವಾಗಿ ಬೆರೆತು, ಅವರಿಗೆ ನೀಡಲಾಗುತ್ತಿರುವ ಬಿಸಿಯೂಟದ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಊಟವನ್ನು ಸ್ವತಃ ಸೇವಿಸಿ, ಆಹಾರದ ರುಚಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು.ಮಕ್ಕಳಿಗೆ ನೀಡುವ ಆಹಾರದಲ್ಲಿ ಶುಚಿತ್ವ, ಗುಣಮಟ್ಟ ಹಾಗೂ ಪೌಷ್ಟಿಕಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳ ಆರೋಗ್ಯ ಮತ್ತು ಬೆಳವಣಿಗೆಯ ದೃಷ್ಟಿಯಿಂದ ಪ್ರತಿದಿನವೂ ಉತ್ತಮ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರವನ್ನು ನೀಡುವಂತೆ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಸಲಹೆ ನೀಡಿದರು.
ಬಿಸಿಯೂಟದ ಬಳಿಕ ಶಾಸಕರು ಮಜ್ಜಿಗೆಯನ್ನೂ ಸೇವಿಸಿ, ಶಾಲೆಯ ಆಹಾರ ವ್ಯವಸ್ಥೆಯ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದರು. ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟವನ್ನು ನಿರಂತರವಾಗಿ ಕಾಪಾಡಿಕೊಳ್ಳುವಂತೆ ಅವರು ಸೂಚಿಸಿದರು.ಶಾಸಕರ ದಿಢೀರ್ ಭೇಟಿಯಿಂದ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯಲ್ಲಿ ಉತ್ಸಾಹ ಮೂಡಿತು. ವಿದ್ಯಾರ್ಥಿಗಳೊಂದಿಗೆ ಬೆರೆತು ಅವರೊಂದಿಗೆ ಬಿಸಿಯೂಟ ಸವಿದ ಶಾಸಕರ ನಡೆಗೆ ಶಾಲೆಯ ಸಿಬ್ಬಂದಿ ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಕ್ಷೇತ್ರ ಸಂಪನ್ಮೂಲ ಸಮನ್ವಯಾ ಧಿಕಾರಿ ಮಹದೇವ ಕುಮಾರ್, ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಸಹಶಿಕ್ಷಕರಾದ ಶ್ರೀಧರ್, ಪುಟ್ಟರಾಜು, ಪರಶಿವಮೂರ್ತಿ, ಬಸವರಾಜು ಸೇರಿದಂತೆ ಇತರ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST