LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸರಣಿ ಅಪಘಾತ ನಾಲ್ವರು ಸಾವು

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಇಂದು ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದ ಮಣಿಕಂಠ (26), ಪವನ(23), ಚಂದನ (31) ಮತ್ತು ಬೆಂಗಳೂರಿನ ಪ್ರಭು (34) ಮೃತ ದುರ್ದೈವಿಗಳು.

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.

ಇನ್ನು ಕಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಶವಗಳನ್ನು ಕಂಡು ಭಾವುಕರಾದರು. ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅನಿರೀಕ್ಷಿತವಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರು ಅಪಘಾತ ಸಂಭವಿಸಿದ ನಂತರ ರಸ್ತೆ ಬದಿ ನಿಂತವರ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಯಾವ ರೀತಿ ಆಗಿದೆ ಅಂತ ಗೊತ್ತಾಗಿಲ್ಲ. ಮಂಜು ಇತ್ತಾ ಅಂತ ಪರಿಶೀಲನೆ ಮಾಡುತ್ತೇವೆ. ಈ ದುರ್ಘಟನೆ ಸಂಭವಿಸಬಾರದಾಗಿತ್ತು ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು