LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೆಟ್ಟೇರಿತು ನಿದ್ರಾದೇವಿ Next Door ?

ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ಮತ್ತೊಂದು ವಿಭಿನ್ನ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ.

ಕ್ರೇಜಿಸ್ಟಾರ್ ರವಿಚಂದ್ರನ್ ಪ್ರವೀರ್ ಶೆಟ್ಟಿಯ ನಿದ್ರಾದೇವಿ Next Door ? ಚಿತ್ರಕ್ಕೆ ಕ್ಲಾಪ್ ಮಾಡಿದರು.ಸುರಾಗ್ ಸಾಗರ್ ನಿದ್ರಾದೇವಿ Next Door ? ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ರಿಷಿಕಾ ನಾಯಕ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

ಮುಹೂರ್ತ ಸಮಾರಂಭದ ಬಳಿಕ ಮಾತನಾಡಿದ ನಿರ್ದೇಶಕ ಸುರಾಗ್ ಸಾಗರ್, ರವಿ ಸರ್ ನಮ್ಮ ಸಿನಿಮಾಗೆ ಕ್ಲಾಪ್ ಮಾಡಿದ್ದು ಖುಷಿ ಕೊಟ್ಟಿದೆ. ಅವರು ವಿಭಿನ್ನ ಟೈಟಲ್ ಮೂಲಕ ಬರ್ತಾರೆ. ನಮ್ಮ ಟೈಟಲ್ ಕೂಡ ವಿಭಿನ್ನವಾಗಿದೆ. ಇದು ಕಾಕತಾಳೀಯ. ಇಬ್ಬರು ನಿದ್ದೆ ಇಲ್ಲದರ ಜರ್ನಿ. ಅವ್ರಿಗೆ ಯಾಕೆ ನಿದ್ದೆ ಬರಲ್ಲ. ಇದಕ್ಕೆ ಪರಿಹಾರ ಏನು. ಅದರೊಳಗೆ ಅವರು ಕಂಡುಕೊಳ್ಳುವ ಲವ್ ಸ್ಟೋರಿ. ಇದಕ್ಕೆಲ್ಲಾ ಸಿನಿಮಾ ನೋಡಬೇಕು ಎಂದರು.

ನಿರ್ಮಾಪಕ ಜಯರಾಮ್ ದೇವಸಮುದ್ರ ಮಾತನಾಡಿ, ಪ್ರವೀಣ್ ಶೆಟ್ಟಿ ಅವರಿಗೋಸ್ಕರ ಈ ಪ್ರಾಜೆಕ್ಟ್ ಗೆ ಹಣ ಹಾಕುತ್ತಿದ್ದೇನೆ. ಕಥೆ ಬಹಳ ಚೆನ್ನಾಗಿದೆ. ನನಗೆ ಸುರಾಗ್ ಕಥೆ ಹೇಳಿದಾಗ ಫಸ್ಟ್ ಇಂಪ್ರೆಷನ್ ನಲ್ಲಿಯೇ ಇಷ್ಟವಾಯ್ತು. ಪ್ರತಿಯೊಬ್ಬರು ಲೈಫ್ ನಲ್ಲಿ ನಡೆಯುವ ಕೆಲ ಘಟನೆಗಳು ಜೀವನದಲ್ಲಿವೆ. ಕಾಮಿಡಿ ಜೊತೆಗೆ ಒಂದು ಸಂದೇಶ ಚಿತ್ರದಲ್ಲಿದೆ ಎಂದು ತಿಳಿಸಿದರು.

ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ, ನಿದ್ರೆ ಬರದಿರುವ ಹುಡುಗ ಏನೇನೂ ಕಷ್ಟಪಡುತ್ತಾನೆ. ಅದರ ಸುತ್ತ ನನ್ನ ಪಾತ್ರ ಸಾಗುತ್ತದೆ. ನನ್ನದು ಇಂಟ್ರೆಸ್ಟಿಂಗ್ ಪಾತ್ರ. ಈ ಹಿಂದಿನ ಚಿತ್ರಗಳಿಗೆ ಹೋಲಿಕೆ ಮಾಡಿದರೆ ಇದು ವಿಭಿನ್ನ ಪಾತ್ರ. ಕಳೆದೊಂದು ತಿಂಗಳಿನಿಂದ ರಿಹರ್ಸಲ್ ಮಾಡುತ್ತಿದ್ದೇವೆ ಎಂದರು.

ನಾಯಕಿ ರಿಷಿಕಾ ನಾಯಕ್ ಮಾತನಾಡಿ, ಎರಡು ವರ್ಷದ ಹಿಂದೆಯೇ ನನಗೆ ನಿರ್ದೇಶಕರು ಸಿನಿಮಾದ ಕಥೆ ಹೇಳಿದ್ದರು. ಆಗ ಕ್ಯಾರಕ್ಟರ್ ಬೇರೆ ಇತ್ತು. ಈಗ ಕ್ಯಾರೆಕ್ಟರ್ ಬೇರೆ ಇದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು