LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ರಸ್ತೆಗೆ ಹರಿಯುವ ಚರಂಡಿ ನೀರು, ಪಾದಚಾರಿಗಳ ಪರದಾಟ

ಹೊಸಕೋಟೆ: ನಗರದ ತಮ್ಮೇಗೌಡ ಬಡಾವಣೆಯ ಒಂದನೇ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿ 207ಕ್ಕೆ ಸಂಪರ್ಕಿಸುವ ತಿರುವಿನಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಚರಂಡಿ ಕಾಮಗಾರಿಯಿಂದಾಗಿ ಕೊಳಚೆ ನೀರು ರಸ್ತೆಗೆ ಹರಿದುಬರುತ್ತಿದ್ದು ಪಾದಚಾರಿಗಳು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಇದರೊಂದಿಗೆ ರಾಷ್ಟ್ರೀಯ ಹೆದ್ದಾರಿಯನ್ನು ತರಕಾರಿಗಳನ್ನು ಸಾಗಣೆ ಮಾಡುವಂತಹ ಅಂಗಡಿಗಳು ಒತ್ತುವರಿ ಮಾಡಿಕೊಂಡಿರುವ ಕಾರಣ ಚರಂಡಿ ನೀರಿನಿಂದ ಪಾರಾಗಲು ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ರಾಷ್ಟ್ರೀಯ ಹೆದ್ದಾರಿಯಾಗಿರುವ ಕಾರಣದಿಂದಾಗಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ಅತಿ ವೇಗವಾಗಿ ಚಲಿಸುವುದೇ ಅಲ್ಲದೆ ಬಹಳಷ್ಟು ಸಂದರ್ಭಗಳಲ್ಲಿ ಪಾದಚಾರಿಗಳ ಮೇಲೆ ಕೊಳಚೆ ನೀರು ಎರಚುವುದು ಸಹ ಸಾಮಾನ್ಯವಾಗಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ನಗರಕ್ಕೆ ಸಂಚರಿಸುವ ಬಹಳಷ್ಟು ಬಿಎಂಟಿಸಿ ಬಸ್‍ಗಳು ಬಸ್ ಸ್ಟಾಂಡಿಗೆ ತೆರಳಲು ಇದೇ ರಸ್ತೆಯನ್ನು ಬಳಸುವುದರಿಂದ ಸಂಚಾರದ ದಟ್ಟಣೆ ಹೆಚ್ಚಾಗಿದೆ.ರಾಷ್ಟ್ರೀಯ ಹೆದ್ದಾರಿಯ ಅರ್ಧದಷ್ಟು ಭಾಗದಲ್ಲಿ ಕೊಳಚೆ ನೀರು ಹರಿಯುತ್ತಿದ್ದು, ಮಹಿಳೆಯರು, ವೃದ್ಧರು, ಮಕ್ಕಳು ಸೇರಿದಂತೆ ಪಾದಚಾರಿಗಳು ವಿಧಿಯಿಲ್ಲದೆ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಭೀತಿಯಿಂದಲೇ ರಸ್ತೆಯಲ್ಲಿ ಓಡಾಡಬೇಕಾಗಿದೆ.

ಈ ಸಮಸ್ಯೆಯು ಸುಮಾರು 2 ವರ್ಷಗಳಿಂದ ಇದ್ದಾಗ್ಯೂ ಸಹ ಸಂಬಂಧಪಟ್ಟ ನಗರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಇದ್ದಾರೆ. ಸುಮಾರು 6 ತಿಂಗಳ ಹಿಂದೆ ನಡೆದ ರಾಜ್ಯ ಮಟ್ಟದ ಹಿರಿಯ ಕ್ರೀಡಾಕೂಟದ ಸಂದರ್ಭದಲ್ಲಿ ಕ್ರೀಡಾಪಟುವೊಬ್ಬರು ಓಡಾಡುವ ಸಂದರ್ಭದಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದರು.

ಇತ್ತೀಚೆಗೆ ಸಿಮೆಂಟ್ ಕಾಂಕ್ರೀಟ್ ಚರಂಡಿ ನಿರ್ಮಿಸಿದ್ದು ಸಮಸ್ಯೆ ಬಗೆಹರಿಯಬಹುದು ಎಂಬ ವಿಶ್ವಾಸವಿದ್ದಿತು. ಆದರೆ ಕೆಲವೇ ದಿನಗಳಲ್ಲಿ ಅದು ಮರಿಚಿಕೆಯಾಗಿದೆ.ಈಗಲಾದರೂ ಅಧಿಕಾರಿಗಳು ಅನಾಹುತ ಸಂಭವಿಸುವ ಮೊದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಮಸ್ಯೆಯನ್ನು ಬಗೆಹರಿಸುವರೆ ಎಂದು ಕಾದುನೋಡಬೇಕಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು