LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪಂಚ ಭಾಷೆಯಲ್ಲಿ ಶಬರಿ ಸಿನಿಮಾ ಬಿಡುಗಡೆ

ನಾಯಕಿ ಪ್ರಧಾನ ಶಬರಿ ಸಿನಿಮಾ ಒಂದೇ ಭಾಷೆಗೆ ಸೀಮಿತವಾಗಿರದೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾ ಣವಾಗಿದ್ದು, ಮೇ 3ರಂದು ಈ ಸಿನಿಮಾ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ಮಹಾ ಮೂವೀಸ್ ಬ್ಯಾನರ್‍ನಲ್ಲಿ ಮಹೇಂದ್ರ ನಾಥ್ ಕೊಂಡ್ಲಾ ಶಬರಿ ಸಿನಿಮಾಕ್ಕೆ ಹಣ ಹೂಡಿದ್ದಾರೆ. ಮಹರ್ಷಿ ಕೊಂಡ್ಲಾ ಈ ಸಿನಿಮಾ ಪ್ರಸೆಂಟ್ ಮಾಡುತ್ತಿದ್ದಾರೆ. ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆ ಆಗಲಿರುವ ಈ ಚಿತ್ರವನ್ನು ಅನಿಲ್ ಕಾಟ್ಜ್ ನಿರ್ದೇಶನ ಮಾಡಿದ್ದಾರೆ. ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾ.

ಈ ಸಿನಿಮಾ ಬಗ್ಗೆ ನಿರ್ಮಾಪಕ ಮಹೇಂದ್ರನಾಥ್ ಕೊಂಡ್ಲಾ ಹೇಳುವುದೇನೆಂದರೆ, "ಶಬರಿ ಸಿನಿಮಾದ ಕಥೆ ಮತ್ತು ಸ್ಕ್ರೀನ್ ಪ್ಲೇ ತುಂಬ ವಿಶೇಷವಾಗಿದೆ. ಭಾವುಕ ಎಳೆಯ ಜತೆಗೆ ಸೀಟಿನ ತುದಿಗೆ ತಂದು ಕೂರಿಸುವ ಥ್ರಿಲ್ಲರ್ ಶೈಲಿಯೂ ಈ ಸಿನಿಮಾದಲ್ಲಿರಲಿದೆ. ವರಲಕ್ಷ್ಮೀ ಅವರ ಈ ವರೆಗಿನ ಸಿನಿಮಾಗಳಿಗೆ ಹೋಲಿಕೆ ಮಾಡಿದರೆ, ಇದು ತುಂಬ ವಿಭಿನ್ನ. ಈ ಸಿನಿಮಾದಲ್ಲಿನ ಅವರ ನಟನೆಯೂ ಅಷ್ಟೇ ರೋಚಕವಾಗಿಯೇ ಮೂಡಿಬಂದಿದೆ" ಎನ್ನುತ್ತಾರೆ.

ಮುಂದುವರಿದು ಮಾತನಾಡುವ ಅವರು, "ಈಗಾಗಲೇ ತೆಲುಗು ಮತ್ತು ತಮಿಳಿನ ಮೊದಲ ಕಾಪಿಯನ್ನು ನೋಡಿರುವುದರಿಂದ, ಎಲ್ಲರಿಗೂ ಇಷ್ಟವಾಗಲಿದೆ ಎಂದು ನಂಬಿದ್ದೇನೆ. ಈ ನಡುವೆ ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯ ಡಬ್ಬಿಂಗ್ ಕೆಲಸಗಳು ನಡೆಯುತ್ತಿದ್ದು, ಮೇ 3ರಂದು ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ಸಿನಿಮಾ ರಿಲೀಸ್ ಮಾಡಲಿದ್ದೇವೆ" ಎಂದಿದ್ದಾರೆ.
ವರಲಕ್ಷ್ಮೀ ಶರತ್ ಕುಮಾರ್, ಗಣೇಶ್ ವೆಂಕಟರಮಣನ್, ಶಶಾಂಕ್, ಮೈಮ್ ಗೋಪಿ, ಸುನಯನಾ, ರಾಜಶ್ರೀ ನಾಯರ್, ಮಧುನಂದನ್, ರಶಿಕಾ ಬಾಲಿ (ಬಾಂಬೆ), ವಿವಾ ರಾಘವ್, ಪ್ರಭು, ಭದ್ರಮ್, ಕೃಷ್ಣ ತೇಜ, ಬಿಂದು ಪಜಿದಿಮರ್ರಿ, ಅಸ್ರಿತಾ ವೆಮುಗಂಟಿ, ಹರ್ಷಿಣಿ ಕೊಡುರು. ಅರ್ಚನ್ ಅನಂತ್, ಪ್ರಮೋದಿನಿ, ಬೇಬಿ ನಿವೇಕ್ಷಾ, ಬೇಬಿ ಕೃತಿಕಾ ತಾರಾಗಣದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು