LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಯುವನಿಧಿ ಯೋಜನೆ ಆರಂಭಕ್ಕೆ ಶಿವಮೊಗ್ಗ ಸಜ್ಜು

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ಷಕಾಂಕ್ಷೆಯ 5ನೇ ಗ್ಯಾರಂಟಿ ಘೋಷಣೆ ಯುವನಿಧಿ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರ ಸಜ್ಜಾಗಿದೆ.ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ನಾಳೆ ನಡೆಯುವ ಈ ಐತಿಹಾಸಿಕ ಸಮಾರಂಭಕ್ಕೆ ಶಿವಮೊಗ್ಗ ನಗರದ ಹೃದಯ ಭಾಗವೇ ಆದ ಫ್ರೀಡಂ ಪಾರ್ಕ್( ಹಳೆ ಜೈಲ್ ಆವರಣ) ನ ವಿಶಾಲವಾದ ಜಾಗದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದೆ.

85 ಸಾವಿರಕ್ಕೂ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಮಧುಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಶಾಸಕರು ಅಧಿಕಾರಿಗಳು ಚಾಲನೆ ಕೊಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೆ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಹಾಗೂ ಕಾರ್ಯಕ್ರಮದ ರೂವಾರಿಗಳಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು, ಕಾರ್ಯಕ್ರಮಕ್ಕೆ , ಬರುವವರಿಗಾಗಿ ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದಾರೆ.

ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ.

ಪ್ರತಿ ಬಸ್‍ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದಲ್ಲದೇ, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು