ಧಾರವಾಡ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯದ ತೀರ್ಪನ್ನು ನಾವು ಸಂಪೂರ್ಣವಾಗಿ ಗೌರವಿಸುತ್ತೇವೆ ಎಂದು ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಈ ಪ್ರಕರಣದಲ್ಲಿ ತಮ್ಮ ಪತಿ ವಿನಯ ಕುಲಕರ್ಣಿ ಅವರು ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ ಎಂಬ ಬಗ್ಗೆ ತಮಗೆ ದೃಢವಾದ ಆತ್ಮವಿಶ್ವಾಸವಿದೆ. ಪ್ರಸ್ತುತ ಹೊರಬಿದ್ದಿರುವ ತೀರ್ಪನ್ನು ಪ್ರಶ್ನಿಸಿ ನಾವು ಕೂಡಲೇ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದೇವೆ.