LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸೌಹಾರ್ದ ಕ್ರಿಕೆಟ್ ಸರಣಿ ಜಯಿಸಿದ ಪೋಲಿಸ್ ಇಲಾಖೆಯ ತಂಡ-ಸರಣಿ ಶ್ರೇಷ್ಠ ಶಿವಾನಂದ್

ದೊಡ್ಡಬಳ್ಳಾಪುರ: ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ RDPR ದೊಡ್ಡಬಳ್ಳಾಪುರ ಸಂಯುಕ್ತಾ ಶ್ರಯದಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ಪೊಲೀಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ(RDPR) ತಂಡ ರನ್ನರ್ಸ್ ಪ್ರಶಸ್ತಿ ಪಡೆಯಿತು. ಕಂದಾಯ ಇಲಾಖೆ ತಂಡ ಹಾಗೂ ಮಾಧ್ಯಮ ಬಳಗ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವು.

ಮಾಧ್ಯಮ ಬಳಗ ಹಾಗೂ ಪೊಲೀಸ್ ತಂಡಗಳ ನಡುವೆ ನಡೆದ ಮೊದಲ ನಾಕ್ ಔಟ್ ಪಂದ್ಯದಲ್ಲಿ ಮಾಧ್ಯಮ ತಂಡ ಪರಾಭವ ಗೊಂಡಿತು. ಪೊಲೀಸ್ ತಂಡದ ಆಟಗಾರ ಶಿವಾನಂದ್ ಅವರ ಅಧ್ಬುತ ಬ್ಯಾಟಿಂಗ್ ಫಲವಾಗಿ ಪೊಲೀಸ್ ಇಲಾಖೆ ವಿಜಯ ಸಾಧಿಸಿತು.

ದ್ವಿತೀಯ ಪಂದ್ಯ ಕಂದಾಯ ಇಲಾಖೆ ಹಾಗೂ ಆರ್ ಡಿಪಿಆರ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್ ಡಿಪಿಆರ್ ವಿಜಯ ಸಾಧಿಸಿತು. ಮೂರನೇ ಸ್ಥಾನಕ್ಕಾಗಿ ನಡೆದ ಪೈಫೋಟಿಯಲ್ಲಿ ಕಂದಾಯ ಇಲಾಖೆಯ ಆಟಗಾರರು ಮಾಧ್ಯಮ ಬಳಗಕ್ಕೆ ಸೋಲುಣಿಸಿದರು.
ರೋಚಕ ಫೈನಲ್ ಪಂದ್ಯದಲ್ಲಿ ಪೊಲೀಸ್ ಇಲಾಖೆ ಕೊನೆಯ ಓವರ್ ನಲ್ಲಿ ಆರ್ ಡಿಪಿಆರ್ ಎದುರು ಜಯ ಸಾಧಿಸಿ 2023-24ನೇ ಸಾಲಿನ ಸೌಹಾರ್ದ ಕ್ರಿಕೆಟ್ ಕಪ್ ಪಡೆಯಿತು.

ಟೂರ್ನಿಯ ಆರಂಭಕ್ಕೂ ಮುನ್ನ ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಡಿವೈಎಸ್ಪಿ ರವಿ ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ತಾ.ಪಂ.ಇಒ ಮುನಿರಾಜು, ವಕೀಲ ಪ್ರತಾಪ್ ಸೇರಿದಂತೆ ಹಲವು ಗಣ್ಯರು ಪಂದ್ಯಾವಳಿಗೆ ಚಾಲನೆ ನೀಡಿದರು.

ಈ ಸಮಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಕ್ರೀಡಾಂಗಣಕ್ಕೆ ಆಗಮಿಸಿ ಎಲ್ಲಾ ತಂಡದ ಅಟಗಾರರಿಗೆ ಶುಭ ಹಾರೈಸಿದರು.ಅಂತಿಮವಾಗಿ ವಿಜೇತ ತಂಡಗಳಿಗೆ ಡಿವೈಎಸ್ಪಿ ರವಿ.ಪಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಸೌಹಾರ್ದಯುತವಾಗಿ ಕ್ರಿಕೆಟ್ ಸೇರಿದಂತೆ ಇನ್ನಿತರೆ ಕ್ರೀಡಾ ಚಟುವಟಿಕೆಗಳು ಹೆಚ್ಚು ಅಗತ್ಯವಾಗಿವೆ.

ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಪ್ರತಿ ನಿತ್ಯದ ಕೆಲಸ ಕಾರ್ಯಗಳಲ್ಲಿ ಕರ್ತವ್ಯದ ಒತ್ತಡ ಇದ್ದೆ ಇರುತ್ತೆ, ಮನಸ್ಸಿಗೆ ವಿಶ್ರಾಂತಿ ಇರುವುದಿಲ್ಲ.ಇಂತಹ ಜಂಜಾಟದ ಮಧ್ಯೆ ಈ ರೀತಿಯ ಕ್ರೀಡೆಗಳನ್ನು ಆಯೋಜನೆ ಮಾಡುವುದರಿಂದ ಮನಸ್ಸಿಗೆ ಮುದ ಹಾಗೂ ನೆಮ್ಮದಿ ಸಿಗಲಿದೆ. ಜೊತೆಗೆ ಎಲ್ಲಾ ಇಲಾಖೆಗಳು ಹಾಗೂ ಮಾದ್ಯಮದವರು ಒಂದೆಡೆ ಸೇರಿದಾಗ ಪರಸ್ಪರ ಅರ್ಥ ಮಾಡಿಕೊಳ್ಳಬಹುದು ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚುಹೆಚ್ಚು ಕ್ರೀಡೆಗಳನ್ನು ಆಯೋಜನೆ ಮಾಡಿದರೆಇಲಾಖೆಯ ಸಹಕಾರ ಸದಾ ಇರಲಿದೆ. ಕ್ರೀಡೆ
ಗಳಿಗೆ ಸಾರ್ವಜನಿಕರನ್ನೂ ಒಳಗೊಂಡಂತೆ ಆಯೋಜನೆ ಮಾಡಿದರೆ ಆಡಳಿತ ವರ್ಗ- ಸಾರ್ವಜನಿಕರ ಮಧ್ಯೆ ಸಂಬಂಧ ವೃದ್ಧಿಸಲಿದೆ ಎಂದು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಗ್ರಾಮಾಂತರಪೊಲೀಸ್ ಠಾಣೆ ಪಿಐ ಮುನಿಕೃಷ್ಣ ನಗರ ಠಾಣೆ ಪಿಐ ಅಮರೇಶ್ ಗೌಡ, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಪಿಐ ಎಂ.ಆರ್.ಹರೀಶ್, ಹೊಸಹಳ್ಳಿ ಠಾಣೆ ಪಿಐ ರಾವ್ ಗಣೇಶ್ ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು