LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕೋಲ್ಕತ್ತಕ್ಕೆ ಬಂದಿಳಿದ ಶ್ರೇಯಸ್ ಅಯ್ಯರ್

ಕೋಲ್ಕತ್ತ: ತಂಡದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಐಪಿಎಲ್‍ನಲ್ಲಿ ಆಡಲಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಭಾನುವಾರ ಅವರು ನೆಟ್ಸ್‍ನಲ್ಲಿ ಅಭ್ಯಾಸ ಕೂಡ ಮಾಡಿದರು.

ಈ ಆವೃತ್ತಿಯಲ್ಲಿ ಅವರು ಕೋಲ್ಕತ್ತ ತಂಡವನ್ನು ಮುನ್ನಡೆಸಲಿದ್ದಾರೆ.ಈಚೆಗೆ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ಅವರು ಆಡಿದ್ದರು. ಅದರಲ್ಲಿ ಕೊನೆಯ ಎರಡು ದಿನ ಅವರು ಬೆನ್ನುನೋವಿನಿಂದಾಗಿ ಫೀಲ್ಡಿಂಗ್ ಮಾಡಿರಲಿಲ್ಲ. ಆದ್ದರಿಂದ ಅವರು ಐಪಿಎಲ್‍ನಲ್ಲಿ ಆಡುವುದು ಅನುಮಾನವಿತ್ತು. ಶನಿವಾರ ರಾತ್ರಿ ಶ್ರೇಯಸ್ ಅವರು ಕೋಲ್ಕತ್ತ ನಗರಕ್ಕೆ ಬಂದಿಳಿದ ಚಿತ್ರಗಳನ್ನು ನೈಟ್ ರೈಡರ್ಸ್ ತಂಡವು ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಾಕಿದೆ.

ಶ್ರೇಯಸ್ ಅವರು ಹೋದ ವರ್ಷದ ಏಪ್ರಿಲ್‍ನಲ್ಲಿ ಬೆನ್ನಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಪಡೆದಿದ್ದರು. ಅದರಿಂದಾಗಿ ಐಪಿಎಲ್‍ನಲ್ಲಿ ಆಡಿರಲಿಲ್ಲ. ಸೆಪ್ಟೆಂಬರ್‍ನಲ್ಲಿ ಕ್ರಿಕೆಟ್‍ಗೆ ಮರಳಿದ್ದರು. ಆದರೂ ಬೆನ್ನು ನೋವು ಮತ್ತೆ ಕಾಡಿತ್ತು. ನಂತರ ಚೇತರಿಸಿಕೊಂಡ ಅವರು ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದರು. ಈಚೆಗೆ ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡು ಟೆಸ್ಟ್‍ಗಳಲ್ಲಿ ಆಡಿದ್ದರು. ಮತ್ತೆ ಬೆನ್ನುನೋವಿನ ಸಮಸ್ಯೆಯಿಂದ ಹೊರಗುಳಿದಿದ್ದರು. ರಣಜಿ ಟ್ರೋಫಿ ಕ್ವಾರ್ಟರ್‍ಫೈನಲ್‍ನಲ್ಲಿ ಕೂಡ ಆಡಿರಲಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು