LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಶುಭಂ-ಫೆರೆರಾ ಸವಾರಿ: ಸೋಲಿಲ್ಲದ ಪಂಜಾಬ್ ಅನ್ನು ಬಾಗಿಸಿದ ರಾಜಸ್ಥಾನ

ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ತಂಡ ಯಾವುದಾದರೂ ಇದೆಯೇ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಐಪಿಎಲ್ 2026 ಸೀಸನ್ ನಲ್ಲಿ ಶ್ರೇಯಸ್ ಅಯ್ಯರ್ ಬಳಗದ ಅಜೇಯ ಗೆಲುವಿನೋಟಕ್ಕೆ ಇದೀಗ ರಾಜಸ್ಥಾನ ರಾಯಲ್ಸ್ ಬ್ರೇಕ್ ಹಾಕಿದೆ.ಸಾಂಘಿಕ ಪ್ರದರ್ಶನ ತೋರಿದ ರಿಯಾನ್ ಪರಾಗ್ ಬಳಗ 6 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಆರಂಭದಲ್ಲಿ ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್ ಶ್ರೇಯಸ್ ಅಯ್ಯರ್ ಪಡೆ ವಿರುದ್ಧ ಏರಿ ಹೋದರು. ಕೊನೆಯಲ್ಲಿ ಡೊನೊವನ್ ಫೆರೆರಾ ಮತ್ತು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಶುಭಂ ದುಬೆ ಎದುರಾಳಿಗಳ ಲೆಕ್ಕಾಚಾರವನ್ನು ಉಲ್ಟಾಪಲ್ಟಾ ಮಾಡಿದರು. ಈ ಮೂಲಕ ಆಡಿರುವ 9 ಪಂದ್ಯಗಳಲ್ಲಿ ಆರನ್ನು ಗೆದ್ದಿರುವ ರಾಜಸ್ಥಾನ ರಾಯಲ್ಸ್ ಇದೀಗ ಐಪಿಎಲ್ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಪಂಜಾಬ್ ಕಿಂಗ್ಸ್ ತಂಡ ಈ ಸೀಸನ್ ನಲ್ಲೂ ಮೊದಲನೇ ಸೋಲಿನ ಕಹಿಯುಂಡರೂ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದಿದೆ.
ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಏಪ್ರಿಲ್ 28ರ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 4 ವಿಕೆಟ್ ನಷ್ಟಕ್ಕೆ 222 ರನ್ ಪೇರಿಸಿತು. ಇದಕ್ಕುತ್ತರವಾಗಿ ರಾಜಸ್ಥಾನ ರಾಯಲ್ಸ್ ತಂಡ ಇನ್ನೂ 4 ಎಸೆತಗಳು ಬಾಕಿ ಉಳಿದಿರುವಂತೆ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
15ರ ಹರೆಯದ ಬಾಲಕ ವೈಭವ್ ಸೂರ್ಯವಂಶಿ(16 ಎಸೆತದಲ್ಲಿ 43 ರನ್) ತನ್ನ ಎಂದಿನ ಆಕ್ರಮಣಕಾರಿ ಆಟಕ್ಕೇ ಕೈಹಾಕಿದಾಗ, ಯಶಸ್ವಿ ಜೈಸ್ವಾಲ್(27 ಎಸೆತದಲ್ಲಿ 51 ರನ್) ಸಹ ಅದೇ ರೀತಿಯ ಆಡಿದಾಗ ಪಂಜಾಬ್ ತಂಡದಲ್ಲಿ ಆತಂಕ ಮನೆ ಮಾಡಿತ್ತು. ಯಾಕಂದರೆ ಕೇವಲ 3 ಓವರ್ ಗಳಲ್ಲಿ ರಾಜಸ್ಥಾನ ಮೊತ್ತ 50 ದಾಟಿತ್ತು. ವೈಭವ್ ಅದಾಗಲೇ 5 ಸಿಕ್ಸರ್ ಸಿಡಿಸಿ ದೊಡ್ಡ ಇನ್ನಿಂಗ್ಸ್ ಆಡುವ ಸೂಚನೆ ನೀಡಿದ್ದರು. ಆದೆರ ವೈಭವ್ ಗೆ ಫುಲ್ ಟಾಲ್ ಚೆಂಡೆಸೆದು ದಿಕ್ಕು ತಪ್ಪಿಸಿದ ಅರ್ಶದೀಪ್ ಸಿಂಗ್ ಅವರು ಶ್ರೇಯಸ್ ಅಯ್ಯರ್ ಅವರಿಗೆ ಕ್ಯಾಚ್ ಕೊಡಿಸುವಲ್ಲಿ ಯಶಸ್ವಿಯಾದರು. ಪಂದ್ಯದಲ್ಲಿ ಹತೋಟಿ ಸಾಧಿಸುವಲ್ಲಿ ಒಂದು ಹಂತಕ್ಕೆ ಪಂಜಾಬ್ ಯಶಸ್ವಿಯಾದರೂ ಅಂತಿಮ ಹಂತದಲ್ಲಿ ಡೊನೊವನ್ ಫೆರೆರಾ(26 ಎಸೆತದಲ್ಲಿ ಅಜೇಯ 52 ರನ್) ಮತ್ತು ಶುಭಂ ದುಬೆ(12 ಎಸೆತದಲ್ಲಿ ಅಜೇಯ 31 ರನ್) ಅಬ್ಬರದ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಂಜಾಬ್ ಬೌಲರ್ ಗಳು ಮಾಡಿದ ಎಲ್ಲಾ ಪ್ರಯತ್ನಗಳೂ ವ್ಯರ್ಥವಾದವು. ಪಂಜಾಬ್ ಪರ ಯುಜುವೇಂದ್ರ ಚಹಲ್ 3 ವಿಕೆಟ್ ಪಡೆದರು. ಡೊನೊವನ್ ಫೆರೆರಾ ಅವರು ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು