LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಶ್ವ ವಿಖ್ಯಾತ ಹಂಪಿಯಲ್ಲಿ ಜನರ ಮನಗೆದ್ದ ಶ್ವೇತಾಂಜಲಿ ಭರತ ನಾಟ್ಯ ಶಾಲೆ

ಬೆಂಗಳೂರು: ಜ್ಞಾನ ಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ನೆಲಮಂಗಲ ಹಾಗೂ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ವಿಜಯ ನಗರ ಇವರ ಸಹಯೋಗದಲ್ಲಿ "ಹಂಪಿಯಲ್ಲಿ ಕಲ್ಲಿನ ರಥ, ನಮ್ಮದು ಕನ್ನಡ ಪಥ" ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಲೇಖಕರು, ಚಿಂತಕರು, ಅಂಕಣಕಾರರು ಹಾಗೂ ಜ್ಞಾನ ಗಂಗ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದ ಅಧ್ಯಕ್ಷರಾದ ಮಣ್ಣೆ ಮೋಹನ್ ರವರು ಮಾತನಾಡುತ್ತಾ "ವಿಜಯನಗರ ಸಾಮ್ರಾಜ್ಯದ ಒಡೆಯನಾದ ಕೃಷ್ಣದೇವರಾಯನ ಕಾಲದಲ್ಲಿ ಹಂಪಿ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ.

ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದುಕೊಳ್ಳುತ್ತಾ ಬಂತು ಆದರೆ ಇಂದು ಹಂಪಿ ವಿಶ್ವಮಟ್ಟದಲ್ಲಿ ಪಾರಂಪರಿಕ ಸ್ಥಳವಾಗಿ ಎಲ್ಲಾ ಪ್ರವಾಸಿಗರನ್ನು ಕೈ ಬೀಸಿ ಕರೆಯುವ ಹಾಗೇ ಪ್ರಬುದ್ದತೆ ಕಾಪಾಡಿಕೊಂಡಿರುವುದು ನಮ್ಮ ಹೆಮ್ಮೆ ಆಗಿದೆ. ಇಂತಹ ಭವ್ಯ ಇತಿಹಾಸ ಇರುವ ಸ್ಥಳದಲ್ಲಿ ಚಿನ್ನದ ಜಿಲ್ಲೆ ಕೋಲಾರದ ಮಾಲೂರಿನ ಶ್ವೇತಾಂಜಲಿ ಭರತನಾಟ್ಯ ಶಾಲೆ ತಮ್ಮ ಶಾಲೆಯ ಪ್ರತಿಭಾನ್ವಿತ ಭರತನಾಟ್ಯ ನೃತ್ಯ ಪಟುಗಳನ್ನು ಕರೆಸಿ ಅದ್ಬುತ ನೃತ್ಯ ಮಾಡಿಸಿ ಕಾರ್ಯಕ್ರಮಕ್ಕೆ ವಿಶೇಷ ರಂಗು ತರಲಾಯಿತು" ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳ ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿದ್ದ ಶ್ವೇತಾಂಜಲಿ ಭರತನಾಟ್ಯ ಶಾಲೆ ಹಾಗೂ ವಿಶ್ವಮಾನವ ಕುವೆಂಪು ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಶ್ವೇತನಾಗರಾಜ್ ಮಾತನಾಡಿ "ವಿಶ್ವಮಟ್ಟದಲ್ಲಿ ಅತಿ ಹೆಚ್ಚು ಪ್ರಸಿದ್ದಿಗೆ ಕಾರಣವಾಗಿರುವ ಹಂಪಿ ಇಲ್ಲಿ ನಮ್ಮ ಶಾಲೆಯ ಮಕ್ಕಳಿಗೆ ಭರತನಾಟ್ಯ ನೃತ್ಯ ಪ್ರದರ್ಶನಕ್ಕೆ ಒಂದು ಉತ್ತಮ ಅವಕಾಶವನ್ನು ಒದಗಿಸಿ ವೇದಿಕೆಯಲ್ಲಿ ಕನ್ನಡ ಆಸಕ್ತರು, ಸಾಹಿತ್ಯ ಆಸಕ್ತರ ನಡುವೆ ಅದ್ದೂರಿ ನೃತ್ಯಗಳನ್ನು ಪ್ರದರ್ಶಿಸಿದ್ದು ನಮಗೆ ಬಹಳ ಹೆಮ್ಮೆ ಎನಿಸಿತು.

ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪಿಯಲ್ಲಿನ ಈ ಕಾರ್ಯಕ್ರಮ ಸದಾ ಕಾಲ ಅಚ್ಚಳಿಯದಂತೆ ಅಮರ" ಎಂದರು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ವೇತಾಂಜಲಿ ಭರತನಾಟ್ಯ ಶಾಲೆ ಮಾಲೂರು, ಚಿಕ್ಕತಿರುಪತಿ, ದುನ್ನಸಂದ್ರ ಕ್ರಾಸ್ ಮಕ್ಕಳಾದ ಕು.ತಾನೀಶ್.ಎನ್, ಕು.ಹನ್ಸಿಕ, ಕು.ರಕ್ಷಗೌಡ, ಕು.ಮೋಕ್ಷ ಗೌಡ, ಕು.ಮೌಲ್ಯ, ಕು.ಸಾನ್ವಿ, ಕು.ರಿಷ ಕು.ಐಸಿರಿ, ಕು.ಗುಣಪ್ರಿಯ.ಎಂ, ಕು.ಧೃತಿ, ಕು.ಮಧುಮೀತ. ಇವರಿಂದ ಭಾರತೀಯ ಸಂಸ್ಕ್ರತಿಯನ್ನು ಪ್ರತಿಬಿಂಬಿಸುವ ಹಾಡುಗಳಿಗೆ ನೃತ್ಯ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳಿಗೆ ಪೋಷಕರೊಂದಿಗೆ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ನೆಲಮಂಗಲ ಕಸಾಪ ಅಧ್ಯಕ್ಷರಾದ ಬಿ.ಪ್ರಕಾಶ್ ಮೂರ್ತಿ, ಕಸಾಪ ಬಳ್ಳಾರಿ ಅಧ್ಯಕ್ಷರಾದ ನಿಷ್ಟಿರುದ್ರಪ್ಪ, ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾದ ಕೃಷ್ಣಮೂರ್ತಿ ಕುಲಕರ್ಣಿ, ವಿಶ್ವಮಾನವ ಕುವೆಂಪು ಫೌಂಡೇಶನ್ ರಾಜ್ಯ ಅಧ್ಯಕ್ಷ ಹಾಗೂ ಯುವ ಕವಿ ಲಕ್ಕೂರು ಎಂ.ನಾಗರಾಜ್ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು