LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಸನ್ಮಾನ್ಯ ಸಿದ್ದರಾಮಯ್ಯನವರು ಚಾಲನೆ ನೀಡಿ ಮಾತನಾಡಿದರು.

55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿಯಾಗಲಿದೆ. 2013 ರಲ್ಲಿ ತಮ್ಮದೆ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ.

ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯಯೋಜನೆಯನ್ನು ಆರಂಭಿಸಿದ್ದೆವು. ಕೆ.ಎಂ.ಎಫ್ ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ.ಈ ಹಾಲಿನ ಹಣವನ್ನು ಸರ್ಕಾರ ಕೆ.ಎಂ.ಎಫ್ ಗೆ ನೀಡುತ್ತದೆ. ಆ ಮೂಲಕ ಕೆ.ಎಂ.ಎಫ್ ಗೆ ಹಾಲುಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು.

ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ.ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಠಿಕಾಂಶ ಕೊರತೆ ಆಗಲೇಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಡವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ.

ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತರು, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ. ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ.

ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್ ಗಳೂ ಈಗ ಮೌಡ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಡ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಡ್ಯಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಸನ್ಮಾನ್ಯ ಮುಖ್ಯಮಂತ್ರಿಗಳು ನುಡಿದರು.

ಈ ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಹಾಗೂ ಸಾಯಿ ಶ್ಯೂರ್ ಮುಖ್ಯಸ್ಥ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು