LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ತೆರಿಗೆ ಭಯೋತ್ಪಾದನೆ" ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ``ತೆರಿಗೆ ಭಯೋತ್ಪಾದನೆ'' ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ ಎಂದು ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಮುಖ್ಯಮಂತ್ರಿಯವರು, ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ `'ತೆರಿಗೆ ಭಯೋತ್ಪಾದನೆ''ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವಆರೋಪ ಹೊರಿಸಿ ರೂ.1823 ಕೋಟಿ ಪಾವತಿಸುವಂತೆ ಐಟಿ ಇಲಾಖೆ ನೋಟೀಸ್ ನೀಡಿದೆ. 2017-18ರಲ್ಲಿ ಬಿಜೆಪಿ ಹೆಸರೇ ಇಲ್ಲದ 92 ದಾನಿಗಳಿಂದ ರೂ.4.5 ಲಕ್ಷ ಮತ್ತು ವಿಳಾಸವೇ ಇಲ್ಲದ 1297 ದಾನಿಗಳಿಂದ ರೂ.42 ಕೋಟಿ ದೇಣಿಗೆ ಪಡೆದಿರುವುದನ್ನು ನಮ್ಮ ಪಕ್ಷದ ನಾಯಕರು ಬಯಲಿಗೆಳೆದಿದ್ದಾರೆ. ನಮ್ಮ ಪಕ್ಷಕ್ಕೆ ಅನ್ವಯಿಸಿದ ಮಾನದಂಡವನ್ನೇ ಅನ್ವಯಿಸಿದರೆ ಬಿಜೆಪಿ ಕಳೆದ ಏಳು ವರ್ಷಗಳಲ್ಲಿ ನಡೆಸಿರುವ ತೆರಿಗೆ ಉಲ್ಲಂಘನೆಗಾಗಿ ರೂ.4263 ಕೋಟಿ ಪಾವತಿಸಬೇಕಾಗಿದೆ.

ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅತಿ ಕ್ರಿಯಾಶಾಲಿಯಾಗಿರುವ ಐಟಿ ಇಲಾಖೆ ಟಿಎಂಸಿ, ಸಿಪಿಐ ಸೇರಿದಂತೆ ಬೇರೆ ವಿರೋಧಪಕ್ಷಗಳ ಮೇಲೆಯೂ ತೆರಿಗೆ ಭಯೋತ್ಪಾದನೆಯ ಅಸ್ತ್ರ ಪ್ರಯೋಗ ಮಾಡಿದೆ. ವಿರೋಧ ಪಕ್ಷಗಳ ಮೇಲೆ ಮುಗಿ ಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ. ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು ಎನ್ನುವುದನ್ನು ತಿಳಿಯದಷ್ಟು ದೇಶದ ಜನತೆ ದಡ್ಡರಲ್ಲ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆಯ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿಯೇ ಬಯಲಾಗಿದ್ದ ಯಡಿಯೂರಪ್ಪ ಡೈರಿಗಳಾಗಲಿ, ನರೇಂದ್ರಮೋದಿಯವರೂ ಫಲಾನುಭವಿ ಎಂದು ಆರೋಪಿಸಲಾಗಿರುವ `'ಬಿರ್ಲಾ-ಸಹಾರಾ'' ಡೈರಿಯಾಗಲಿ ಯಾಕೆ ಕಣ್ಣಿಗೆ ಬಿದ್ದಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್ ಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಆಡಳಿತಾರೂಡ ಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ ಈ ಹಗರಣದಿಂದ ಜನರ ಗಮನ ಬೇರೆ ಕಡೆ ಸೆಳೆಯುವ ಜೊತೆಯಲ್ಲಿ ವಿರೋಧ ಪಕ್ಷಗಳನ್ನೂ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ವರಮಾನ ತೆರಿಗೆ ವಂಚನೆಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಮೊದಲಾದ ಬ್ಯಾಂಕ್ ವಂಚಕರ 10.09 ಲಕ್ಷ ಕೋಟಿ ರೂಪಾಯಿಯಷ್ಟು ಬ್ಯಾಂಕ್ ಸಾಲವನ್ನು ಮನ್ನಾ ಮಾಡಿರುವ ಬಿಜೆಪಿ ಸರ್ಕಾರ ಅವರಿಂದ ಪಡೆದಿರುವ ಕಮಿಷನ್ ಹಣ ಎಷ್ಟು ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗುತ್ತದೆ.
ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ ಹಣ ಬಲ ಇದ್ದರೆ ನಮ್ಮಲ್ಲಿ ಜನಬಲ ಇದೆ. ತೆರಿಗೆ ವಂಚಕರು, ಬ್ಯಾಂಕ್ ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ.

ಬಿಜೆಪಿ ಅಂದ್ರೆ ಭ್ರಷ್ಟರ ಹಣವನ್ನು ನುಂಗಿ ಅವರಿಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್ ಮೆಶಿನ್ ಆಗಿದೆ. ಭ್ರಷ್ಟರು ತಾವು ಮಾಡಿದ ಮಹಾಪಾಪಗಳ ಮೇಲಿನ ತನಿಖೆಯಿಂದ ತಪ್ಪಿಸಿಕೊಳ್ಳಬೇಕಾದರೆ, ಶಿಕ್ಷೆಯಿಂದ ಪಾರಾಗಬೇಕಾದರೆ ಬಿಜೆಪಿ ಸೇರಿಕೊಂಡರೆ ಸಾಕು, ಪಾಪಗಳೆಲ್ಲವೂ ತನ್ನಿಂತಾನೆ ಶುದ್ಧವಾಗುತ್ತದೆ. ಅಲ್ಲಿದ್ದುಕೊಂಡು ಎಷ್ಟು ಬೇಕಾದರೂ ಭ್ರಷ್ಟಾಚಾರ ಮಾಡಬಹುದು, ಜನರ ಹಣ ಲೂಟಿ ಮಾಡಬಹುದು. ಅವರ ಮೇಲೆ ಯಾವ ಕೇಸೂ ದಾಖಲಾಗುವುದಿಲ್ಲ. ಯಾವ ತನಿಖಾ ಸಂಸ್ಥೆಯೂ ಹುಡುಕೊಂಡು ಬರುವುದಿಲ್ಲ ಎಂದು ಟೀಕಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮತ್ತು ಅಧಿಕಾರವನ್ನು ಉಳಿಸಿಕೊಂಡಿದ್ದೇ ಇಂತಹ ಕಳ್ಳ-ಖದೀಮರ ಲೂಟಿಯ ಹಣದಿಂದ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕದಲ್ಲಿ ನಡೆಸುತ್ತಾ ಬಂದ ಆಪರೇಷನ್ ಕಮಲ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಎದೆ ತಟ್ಟಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರಮೋದಿಯವರು ವಿರೋಧಪಕ್ಷಗಳನ್ನು ಹಣಿಯಲು ಈ ರೀತಿಯ ಅಕ್ರಮ ಕೃತ್ಯಗಳಿಗೆ ಇಳಿದಿರುವುದನ್ನು ನೋಡಿದರೆ ಅವರಿಗೆ ಗೋಡೆ ಮೇಲಿನ ಬರಹ ಸ್ಪಷ್ಟವಾಗಿ ಕಾಣತೊಡಗಿದೆ ಎಂದರ್ಥ. ಅರಸನ ಮೈಮೇಲಿನ ಬಟ್ಟೆ ಒಂದೊಂದಾಗಿ ಕಳಚಿ ಬೀಳುತ್ತಿದೆ. ದೇಶದ ಜಾಗೃತ ಮತದಾರರ ಮುಂದೆ ಬಿಜೆಪಿ ಮತ್ತು ಅದರ ತಥಾಕಥಿತ ನಾಯಕರೆಲ್ಲರೂ ಬತ್ತಲೆಯಾಗುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು