LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು: 2024 ರ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸಿಎಂ ಸಿದ್ಧರಾಮಯ್ಯ ತೆಗೆದುಕೊಂಡಿದ್ದಾರೆ. ಈ ಬಾರಿ ಶತಾಯಗತಾಯ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್‍ಗೆ ತರಲೇಬೇಕೆಂದು ಪಣತೊಟ್ಟಿರುವ ಅವರು, ಮೊದಲ ಹಂತದ ಚುನಾವಣೆ ನಡೆಯುವ ಹಳೆಯ ಮೈಸೂರು ಭಾಗದಲ್ಲಿ ನಿರಂತರ ಪ್ರವಾಸ ಮಾಡುತ್ತಿದ್ದಾರೆ. ಚಾಮರಾಜನಗರ, ಮೈಸೂರು- ಕೊಡಗು, ಮಂಡ್ಯ, ಬೆಂಗಳೂರು ನಗರದ 3 ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ, ಹಾಸನ ಹೀಗೆ ಹಳೆಯ ಮೈಸೂರು ಭಾಗದಲ್ಲಿ ಹೆಚ್ಚಿನ ಪ್ರವಾಸ ಮಾಡುವುದರ ಮೂಲಕ ಕಾಂಗ್ರೆಸ್ ಗೆಲುವಿಗೆ ತಂತ್ರ ಹೆಣೆಯುತ್ತಿದ್ದಾರೆ.

ಇನ್ನು ಸಿಎಂ ಸಿದ್ಧರಾಮಯ್ಯರಿಗೆ ಮೈಸೂರು-ಕೊಡಗು ಹಾಗೂ ಚಾಮರಾಜನಗರ ಎರಡು ಕ್ಷೇತ್ರಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಾರಿಯ ಚುನಾವಣೆಯಲ್ಲಿ ತಾವು ನೀಡಿದ ಗ್ಯಾರೆಂಟಿಗಳ ಮೇಲೆ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತಿದ್ದು, ತವರು ಜಿಲ್ಲೆಯಲ್ಲಿಯೇ ಹಿನ್ನಡೆಯಾದ್ರೆ, ಅದು ಅವರಿಗೆ ಮುಖಭಂಗ. ಹೀಗಾಗಿ, ಶತಾಯಗತಾಯ ಮೈಸೂರು-ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿದ್ದಾರೆ.

ನಾಳೆ ಪ್ರಧಾನಿ ನರೇಂದ್ರ ಮೋದಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಸಾಥ್ ನೀಡಲಿದ್ದಾರೆ. ಈ ಕಾರಣದಿಂದಲೇ ಸಿಎಂ ಈಗಾಗಲೇ ಎರಡು ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಅಲ್ಲಿಯೇ ಠಿಕಾಣಿ ಹೂಡಿ ತಂತ್ರ ಹೆಣೆಯುತ್ತಿದ್ದಾರೆ.

ಇನ್ನು ಪ್ರಚಾರ ಆಖಾಡದಲ್ಲಿಯೇ ಬಲ ವರ್ಧನೆಯ ಮಾತನ್ನು ಸಿಎಂ ಸಿದ್ಧರಾಮಯ್ಯ ಈಗಾಗಲೇ ಆಡಿದ್ದಾರೆ. ನೀವು ನನಗೆ ಹೆಚ್ಚಿನ ಲೀಡ್ ಕೊಟ್ಟು, ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ರೆ, ಸಿದ್ಧರಾಮಯ್ಯರನ್ನು ಯಾರೂ ಕೂಡ ಮುಟ್ಟಲು ಆಗುವುದಿಲ್ಲ ಎಂದಿದ್ದಾರೆ.ಒಂದು ಕಡೆ ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳ ಪೈಕಿ ಸಿಎಂ ಹಳೆಯ ಮೈಸೂರು ಭಾಗವನ್ನು ಬಹಳ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಇದಕ್ಕೆ ಮತದಾರ ಪ್ರಭು ಯಾವ ಉತ್ತರ ನೀಡುತ್ತಾನೆ ಕಾದು ನೋಡಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು