LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ರಾಜಕಾರಣ ತೃಪ್ತಿ ತಂದಿದೆ: ಸಿದ್ದು

ಮೈಸೂರು : ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊAಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದರು.
ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿ
ರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತ- ರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ.
ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.
ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.
ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ನನಗೆ ಈ ಬಗ್ಗೆ ತಿಳಿದಿಲ್ಲ ಎಂದ ಮುಖ್ಯಮಂತ್ರಿಗಳು ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿAದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು.
ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. ೧೯೭೨ರಿಂದ ೮೦ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.
ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬಜೆಟ್ ಆಗುವವರೆಗೂ ಕಾದು ನೋಡಿ ಎಂದರು.
ಬಳ್ಳಾರಿ ಘಟನೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ. ತನಿಖೆ ನಡೆಯುತ್ತಿದ್ದು, ಕೆಲವರನ್ನು ಬಂಧಿಸಲಾಗಿದೆ ಎಂದರು.
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ಘಟನೆಯ ಬಗ್ಗೆ ಮಾಡಿರುವ ಆರೋಪಗಳ ಪ್ರತಿಕ್ರಿಯೆ ನೀಡಿ ಜೆಡಿಎಸ್ ಹಾಗೂ ಬಿಜೆಪಿ ಕಾನೂನಿನ ರೀತಿ ಮಾತನಾಡದೆ ರಾಜಕೀಯವಾಗಿ ಮಾತನಾಡುತ್ತಾರೆ ಎಂದರು.
ನಿನ್ನೆ ವೇಣುಗೋಪಾಲ್ ಅವರೊಂದಿಗೆ ನಡೆದ ಮಾತುಕತೆಯ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಯನಾಡಿನಿಂದ ಬೆಂಗಳೂರು ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸೌಹಾರ್ದಯುತವಾಗಿ ಮೈಸೂರಿನಲ್ಲಿ ಭೇಟಿ ಮಾಡಲಾಯಿತು ಎಂದರು.
ಸಂಪುಟ ಪುನರ್ ರಚನೆಯ ಬಗ್ಗೆ ದೆಹಲಿಯಿಂದ ಕರೆ ಬಂದಾಗ ಮಾತನಾಡುವುದಾಗಿ ಸಿಎಂ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು