LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಆಗಸ್ಟ್‍ನಲ್ಲಿ ತೆರೆಗೆ ಬರಲಿದೆ "ಸಿಗ್ನಲ್ ಮ್ಯಾನ್ 1971" ಚಿತ್ರ

ಹಿಂದೂಸ್ಥಾನ್ ಮುಕ್ತ ಮೀಡಿಯಾ ಎಂಟರ್ ಟೈನರ್ ಲಾಂಛನದಲ್ಲಿ ಗಣೇಶ್ ಪ್ರಭು ಬಿ.ವಿ ಅವರು ನಿರ್ಮಿಸಿರುವ, ಕೆ.ಶಿವರುದ್ರಯ್ಯ ನಿರ್ದೇಶನದ ಹಾಗೂ ಪ್ರಕಾಶ್ ಬೆಳವಾಡಿ, ರಾಜೇಶ್ ನಟರಂಗ, ವೆಂಕಟೇಶ್ ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ "ಸಿಗ್ನಲ್ ಮ್ಯಾನ್ 1971" ಚಿತ್ರ ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

1971ರಲ್ಲಿ ನಡೆದ ಇಂಡೋ - ಪಾಕ್ ಕದನದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಅಳವಡಿಸಿಕೊಡಲಾಗಿದೆ. ಜೊತೆಗೆ ಯಾರು ಇಳಿಯದ, ಹತ್ತದ ರೈಲ್ವೆ ನಿಲ್ದಾಣದಲ್ಲಿ ಇಪ್ಪತ್ತು ವರ್ಷಗಳ ಕಾಲ ಕಾರ್ಯ ನಿರ್ವಹಿಸುವ "ಸಿಗ್ನಲ್ ಮ್ಯಾನ್" ಒಬ್ಬನ ಜೀವನದ ಕಥಯೂ ಇದರಲ್ಲಿದೆ. ಇಪ್ಪತ್ತು ವರ್ಷಗಳ ಕಾಲ ಜನಸಂಪರ್ಕವಿಲ್ಲದ ಸ್ಥಳದಲ್ಲಿದ್ದ ಈತ ಗೊಂದಲಕ್ಕೀಡಾಗುತ್ತಾನೆ. ಗೊಂದಲದಿಂದ ಆಚೆ ಬಂದ ನಂತರ ರಾಜ್ಯ ಹಾಗೂ ರಾಷ್ಟ್ರಕ್ಕೆ ಬೇಕಾಗುವ ವ್ಯಕ್ತಿಯಾಗುತ್ತಾನೆ.

ಈ ಪಾತ್ರದಲ್ಲಿ ಪ್ರಕಾಶ್ ಬೆಳವಾಡಿ ಅಭಿನಯಿಸಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಊಟಿಯಲ್ಲಿ ಹಾಕಲಾಗಿದ್ದ ರೈಲ್ವೆ ನಿಲ್ದಾಣದ ಸೆಟ್ ನಲ್ಲೇ ನಡೆದಿದೆ. ಗಣೇಶ್ ಪ್ರಭು ಅವರ ನಿರ್ಮಾಣ, ಶೇಖರ್ ಚಂದ್ರು ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ಒಸೆಪಚ್ಚನ್ ಸಂಗೀತ ನಿರ್ದೇಶನ ಹಾಗೂ ಸಂತೋಷ್ ಪಾಂಚಾಲ್ ಕಲಾ ನಿರ್ದೇಶನ ಈ ಚತ್ರಕ್ಕಿದೆ.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೆನ್ನೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಬಾಂಗ್ಲಾದೇಶದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈ ಚಿತ್ರ ಪ್ರದರ್ಶನವಾಗಿದೆ ಎಂದರು ನಿರ್ದೇಶಕ ಕೆ.ಶಿವರುದ್ರಯ್ಯ.ಚಿತ್ರದಲ್ಲಿ ನಟಿಸಿರುವ ರಾಜೇಶ್ ನಟರಂಗ , ಡಿಂಪಿ ಪದ್ಯ, ಛಾಯಾಗ್ರಾಹಕ ಶೇಖರ್ ಚಂದ್ರು ಹಾಗೂ ಕಾರ್ಯಕಾರಿ ನಿರ್ಮಾಪಕ, ನಟ ವೆಂಕಟೇಶ್ ಪ್ರಸಾದ್ ಚಿತ್ರದ ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು