LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಶಿವಶಂಕರಪ್ಪಗೆ ಇ.ಡಿ. ಬಿಸಿ


ಬೆಂಗಳೂರು: ಪಶುವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬAಧ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್ ನೀಡಿದೆ. ಶಿವಶಂಕರಪ್ಪನಿವಾಸ ಸೇರಿ ಒಟ್ಟು 13 ಕಡೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗಿದ್ದು, ಕೆಪಿಎಸ್‌ಸಿ ಕಚೇರಿ ಮೇಲೂ ರೇಡ್ ನಡೆದಿದೆ. ಶಿವಶಂಕರಪ್ಪ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮನೆ ಮತ್ತು ಕಲಬುರಗಿ ಜಿಲ್ಲೆ ಆಳಂದ ನಿವಾಸದ ಮೇಲೂ ಮನಿಲ್ಯಾಂಡ್ರಿAಗ್ ಆಗಿರುವ ಬಗ್ಗೆ ಅನುಮಾನ ಹಿನ್ನೆಲೆ ದಾಳಿ ನಡೆಸಲಾಗಿದೆ.ಇಡಿ ಅಧಿಕಾರಿಗಳು  ಕಚೇರಿ ಸೇರಿ, ರಾಜ್ಯದ 21ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಪ್ಲಾಟ್ ಮೇಲೂ ದಾಳಿ ನಡೆಸಲಾಗಿದ್ದು, ಏPSಅ ಸದಸ್ಯೆ ಶಾಂತಾ ಹೊಸಮನಿ ಮನೆ ಮೇಲೂ ರೇಡ್ ನಡೆದಿದೆ. ಮಧ್ಯವರ್ತಿಗಳಿಗೂ ಶಾಕ್ ಕೊಡಲಾಗಿದ್ದು, ಪಶುವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದವರ ಮನೆಗಳ ಮೇಲೂ ದಾಳಿ ನಡೆದಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಅಭ್ಯರ್ಥಿಗಳಿಂದ 70-80 ಲಕ್ಷ ಲಂಚ ಪಡೆದಿರೋ ಆರೋಪ ಕೇಳಿಬಂದಿತ್ತು. ಮಧ್ಯವರ್ತಿಗಳ ಲಂಚದ ಬೇಡಿಕೆ ಕುರಿತು 4 ಈIಖ ಕೂಡ ದಾಖಲಾಗಿತ್ತು. ಲಂಚದ ಬೇಡಿಕೆಯ ಆಡಿಯೋ ಸಾಕ್ಷ್ಯ ಇಡಿಗೂ ಸಲ್ಲಿಕೆಯಾಗಿತ್ತು. ಹೀಗಾಗಿ ನೇಮಕಾತಿ ಅಕ್ರಮದ ಹಣದ ಜಾಡು ಹಿಡಿದು ಇಡಿ ಶೋಧಕ್ಕೆ ಮುಂದಾಗಿದ್ದು, ದಾಖಲೆ, ಡಿಜಿಟಲ್ ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಸಿದೆ ಎನ್ನಲಾಗಿದೆ.ಪಶು ವೈದ್ಯರ ನೇಮಕಾತಿ ಹಗರಣದಲ್ಲಿ ಭಾಗಿಯಾದ ಆರೋಪ ಹಿನ್ನೆಲೆ ಶಿವಶಂಕರಪ್ಪರನ್ನು ಜು.13ರಂದು ರಾಜ್ಯಪಾಲರು ಅಮಾನತು ಮಾಡಿದ್ದರು. ಇದಾದ ಬಳಿಕ ಪ್ರಕರಣದ ಬಗ್ಗೆ ತನಿಖೆಯನ್ನು ಸಿಐಡಿ ಟೀಂ ನಡೆಸುತ್ತಿದೆ ಯಾದರೂ, ಅಕ್ರಮದ ಹಣ ಬೇರೆ ಕಡೆಗೆ ವರ್ಗಾವಣೆ ಶಂಕೆ ಹಿನ್ನೆಲೆ ಇಡಿ ದಾಳಿ ನಡೆದಿದೆ. ನಾಲ್ಕು ವಾಹನಗಳಲ್ಲಿ ವಿಧಾನಸೌಧ ಬಳಿಯ ಕೆಪಿಎಸ್ಸಿ ಕೇಂದ್ರ ಕಚೇರಿಗೆ 10ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 2019ರ ಸೆಪ್ಟೆಂಬರ್ 3ರಂದು ಕೆಪಿಎಸ್‌ಸಿ ಸದಸ್ಯರಾಗಿ ನೇಮಕವಾಗಿದ್ದ ಶಿವಶಂಕರಪ್ಪ, 2021ರ ಏಪ್ರಿಲ್ 3ರಂದು ಕೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕಗೊಂಡಿ ದ್ದರು. ಏಪ್ರಿಲ್ 4ರಂದು ಅಧಿಕೃತ ಆದೇಶವಾಗಿತ್ತು. ಅಂದಿನಿಂದ 2026ರ ಜು.13ರ ವರೆಗೆ ಅವರೇ ಅಧ್ಯಕ್ಷರಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST