LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಆರು ಮಂದಿ ದುರ್ಮರಣ

ವಡೋದರಾ: ಚಲಿಸುತ್ತಿದ್ದ ಟ್ರಕ್‌ಗೆ (ಲಾರಿ) ಐಷಾರಾಮಿ ಸ್ಲೀಪರ್ ಬಸ್ಸೊಂದು ಹಿಂಬದಿಯಿAದ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿರುವ ಘಟನೆ ಗುಜರಾತ್‌ನ ವಡೋದರಾ-ಜರೋಡ್ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಐಷಾರಾಮಿ ಖಾಸಗಿ ಬಸ್ ರಾಜಸ್ಥಾನದ ಬನ್ಸಾ÷್ವರಾದಿಂದ ಗುಜರಾತ್‌ನ ಸೂರತ್ ನಗರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಜರೋಡ್ ಬಳಿಯ ಹೆದ್ದಾರಿಯಲ್ಲಿರುವ ಕೋಟಂಬಿ ಗ್ರಾಮದ ಹತ್ತಿರ ಬಸ್ ಬಂದಾಗ, ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸಿದ ಮುಂಜಾನೆ ಸಮಯದಲ್ಲಿ ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಹೀಗಾಗಿ ಯಾರಿಗೂ ತಕ್ಷಣಕ್ಕೆ ಏನು ನಡೆಯುತ್ತಿದೆ ಎಂದು ತಿಳಿಯದೇ, ಹಲವರು ಬಸ್ಸಿನ ಒಳಗೆ ಸಿಲುಕಿಕೊಂಡರು.
ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಜರೋಡ್ ಪೊಲೀಸರು ಮತ್ತು ಎನ್‌ಡಿಆರ್‌ಎಫ್ ರಕ್ಷಣಾ ತಂಡಗಳು ಗ್ಯಾಸ್ ಕಟರ್‌ಗಳೊಂದಿಗೆ ಸ್ಥಳಕ್ಕೆ ಧಾವಿಸಿದವು. ಬಸ್ಸಿನ ಶೀಟ್‌ಗಳನ್ನು ಕತ್ತರಿಸಿ ಒಳಗೆ ಸಿಲುಕಿದ್ದ ಜನರನ್ನು ಹೊರತೆಗೆಯಲಾಯಿತು.
ಗಾಯಗೊಂಡಿರುವ ಎಂಟಕ್ಕೂ ಹೆಚ್ಚು ಜನರನ್ನು ತಕ್ಷಣವೇ ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸದ್ಯಕ್ಕೆ ಮೃತಪಟ್ಟವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಚಾಲಕ ನಿದ್ದೆಗಣ್ಣಿನಲ್ಲಿದ್ದದ್ದು ಅಪಘಾತಕ್ಕೆ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು