LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`S\O ಮುತ್ತಣ್ಣ' ಚಿತ್ರಕ್ಕೆ ಶಾಲಿನಿ ಆರ್ಟ್ಸ್ ಮೆಚ್ಚುಗೆ

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ "`S\O ಮುತ್ತಣ್ಣ" ಚಿತ್ರ ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಈ ಚಿತ್ರದ ಆಡಿಯೋ ರೈಟ್ಸ್ ಕೂಡ A2 music ಸಂಸ್ಥೆಗೆ ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ರೀತಿ ಸಿನಿಮಾದ ಹಲವು ವಿಶೇಷಗಳನ್ನು ಪರಿಗಣಿಸಿದ ಜಾಕ್ ಮಂಜು ಅವರ ನೇತೃತ್ವದ ಶಾಲಿನಿ ಆರ್ಟ್ಸ್, ನಿರ್ಮಾಪಕರಿಗೆ ಹಾಗೂ ನಿರ್ದೇಶಕ ಶ್ರೀಕಾಂತ್ ಹುಣಸೂರು ಅವರಿಗೆ ಕರೆ ಮಾಡಿ ಈ ಚಿತ್ರವನ್ನು ನೋಡಬೇಕೆಂದು ಕೇಳಿದಾಗ ನಿರ್ಮಾಪಕರು ಹಾಗೂ ನಿರ್ದೇಶಕರು ಪ್ರೀತಿಯಿಂದ ಸಿನಿಮಾ ತೋರಿಸಿದ್ದಾರೆ.

"ನಮಗೆ `S\O ಮುತ್ತಣ್ಣ ಚಿತ್ರ ನೋಡಿ ಖುಷಿಯಾಗಿದೆ. ಪ್ರಣಂ ದೇವರಾಜ್ ಹಾಗೂ ದಿಯಾ ಖುಷಿ ಅಭಿನಯ ಚೆನ್ನಾಗಿದೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಅವರ ತಂದೆ - ಮಗನ ಬಾಂಧವ್ಯದ ಸನ್ನಿವೇಶಗಳು ಮನಸ್ಸಿಗೆ ಹತ್ತಿರವಾಗಿದೆ. ಹಾಡುಗಳಂತೂ ಒಂದಕ್ಕಿಂತ ಒಂದು ಅದ್ಭುತವಾಗಿದೆ. ಅದರಲ್ಲೂ ಈ ಸಿನಿಮಾದ ಕ್ಲೈಮ್ಯಾಕ್ಸ್ ಬಹಳ ಇಷ್ಟವಾಯಿತು. ಹಾಗಾಗಿ ನಮ್ಮ ಸಂಸ್ಥೆಯ ಮೂಲಕ ಕರ್ನಾಟಕ ಜನರಿಗೆ ಹೆಮ್ಮೆಯಿಂದ ಸಮರ್ಪಿಸಬೇಕೆಂದು ತೀರ್ಮಾನಿಸಿ, ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿರುವ ಶಾಲಿನಿ ಆರ್ಟ್ಸ್ ಸಂಸ್ಥೆ, ನಿಮ್ಮೆಲ್ಲರ ಪ್ರೀತಿ,  ಪ್ರೋತ್ಸಾಹ ಹಾಗೂ ಆಶೀರ್ವಾದ ಸದಾ ಇರಲಿ ಎಂದು ವಿನಂತಿ ಮಾಡಿದೆ.

ಪುರಾತನ ಫಿಲಂಸ್ ನಿರ್ಮಾಣ ಮಾಡಿರುವ ಸಿನಿಮಾಗೆ ಎಸ್ ಅರ್ ಕೆ ಫಿಲಂಸ್ ಜಂಟಿಯಾಗಿದೆ ಈ ಚಿತ್ರವನ್ನು ಶ್ರೀಕಾಂತ್ ಹುಣಸೂರು ನಿರ್ದೇಶಿಸಿದ್ದಾರೆ. ಹಾಗೂ ಈ ಸಿನಿಮಾದಲ್ಲಿ ಪ್ರಣಾಂ ದೇವರಾಜ್ ಅವರಿಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರು ತಾರಾ ಬಳಗದಲ್ಲಿದ್ದಾರೆ.ಸಚಿನ್ ಬಸ್ರೂರು ಸಂಗೀತವಿರುವ 's/o ಮುತ್ತಣ್ಣ' ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು