LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರಧಾನಿ ಇಚ್ಛೆಯಂತೆ ಕೆಲಸ: ಸೋಮಣ್ಣ

ತುಮಕೂರು: ದೇಶದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಇಚ್ಛೆ ಹಾಗೂ ದೂರದೃಷ್ಟಿಯಂತೆ ಸಾಮಾನ್ಯಜನರ ಅಗತ್ಯ ಸೌಲಭ್ಯಗಳಿಗಾಗಿ ಪ್ರಮಾಣಿಕವಾಗಿ ಕೆಲಸ ನಿರ್ವಹಿಸುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಕೇಂದ್ರ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಇಂದು ಬೆಳಿಗ್ಗೆ ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಸೋಮಣ್ಣ ಶಿವಕುಮಾರ್ ಸ್ವಾಮಿಜೀಯವರ ಗದ್ದುಗೆಗೆ ನಮಸ್ಕರಿಸಿ ನಂತರ ಸಿದ್ದಲಿಂಗಾಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ತಮ್ಮನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ಮಂತ್ರಿಗಳನ್ನಾಗಿ ಮಾಡಿದ್ದಾರೆ.

ಅದಕ್ಕಾಗಿ ಪ್ರಧಾನಿಯವರಿಗೆ ಕೇಂದ್ರದ ಗೃಹಮಂತ್ರಿ ಅಮಿತ್ ಶಾ ಮತ್ತಿತರ ನಾಯಕರು ಸೇರಿದಂತೆ ಎನ್‍ಡಿಎ ಒಕ್ಕೂಟದ ಪ್ರಮುಖರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಮತ್ತಿತರ ನಾಯಕರಿಗೆ ಧನ್ಯವಾದ ಸಮರ್ಪಿಸುತ್ತೇನೆ.
ಇಂದು ತಾವು ಜಿಲ್ಲೆಯ ಹರಗುರು ಚರಮೂರ್ತಿಗಳ ದರ್ಶನ ಪಡೆದು ಆಶೀರ್ವಾದ ಪಡೆಯಲಿದ್ದೇನೆ. ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರನ್ನು ಜಿಲ್ಲಾಸ್ಪತ್ರಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಲಿದ್ದೇನೆ.

ಘಟನೆಗೆ ಸಂಬಂಧಪಟ್ಟಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಪರಮೇಶ್ವರ್ ಅವರು ಪ್ರಕರಣದ ವರದಿಯನ್ನು ಜಿಲ್ಲಾಧಿಕಾರಿಯವರು ತಲುಪಿಸಲಿದ್ದಾರೆ ಎಂದು ತಿಳಿಸಿದ್ದಾರೆ.ವರದಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಿದ್ದೇನೆ ಎಂದು ಸೋಮಣ್ಣ ತಿಳಿಸಿದ್ದಾರೆ. ಭಾನುವಾರ ಮತ್ತೆ ತುಮಕೂರಿಗೆ ಭೇಟಿ ನೀಡಲಿದ್ದೇನೆ. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮತ್ತು ಜೆಡಿಎಸ್ ಎರಡು ಪಕ್ಷಗಳಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಂಸದ ಜಿ. ಎಸ್. ಬಸವರಾಜ್, ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಜ್ಯೋತಿಗಣೇಶ್, ಬಿ.ಸುರೇಶ್‍ಗೌಡ, ಜಿಲ್ಲಾ ಬಿಜೆಪಿ ಜೆಡಿಎಸ್ ಅಧ್ಯಕ್ಷರಾದ ಹೆಬ್ಬಾಕ ರವಿಶಂಕರ್, ಟಿ.ಆರ್. ಆಂಜಿನಪ್ಪ ಮತ್ತು ಎರಡು ಪಕ್ಷಗಳ ಪ್ರಮುಖ ಮುಖಂಡರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು