LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಐಪಿಎಲ್‌ಗೆ ಸೌತ್ ಆಫ್ರಿಕಾ ಆಲ್ ರೌಂಡರ್ ಜಾರ್ಜ್ ಲಿಂಡೆ ಎಂಟ್ರಿ..!

ಇಂಡಿಯನ್ ಪ್ರೀಮಿಯರ್ ಲೀಗ್ ನಡುವೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಪ್ರಮುಖ ಬದಲಾವಣೆಯೊಂದನ್ನು ಮಾಡಿಕೊಂಡಿದೆ. ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ಶ್ರೀಲಂಕಾದ ಸ್ಟಾರ್ ಆಲ್‌ರೌಂಡರ್ ಎಲ್‌ಎಸ್‌ಜಿ ಸೌತ್ ಆಫ್ರಿಕಾ ಆಲ್‌ರೌಂಡರ್‌ನನ್ನು ಆಯ್ಕೆ ಮಾಡಿಕೊಂಡಿದೆ.ಹೌದು, ಸೌತ್ ಆಫ್ರಿಕಾ ತಂಡದ ಆಲ್‌ರೌಂಡರ್ ಜಾರ್ಜ್ ಲಿಂಡೆ ಐಪಿಎಲ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಶ್ರೀಲಂಕಾದ ಸ್ಪಿನ್ ಆಲ್?ರೌಂಡರ್ ವನಿಂದು ಹಸರಂಗ ಬದಲಿಗೆ. ಫೆಬ್ರವರಿಯಲ್ಲಿ ನಡೆದ ಟಿ20 ವಿಶ್ವಕಪ್ ವೇಳೆ ಹಸರಂಗ ಅವರ ಸ್ನಾಯು ಸೆಳೆತದ ಸಮಸ್ಯೆಗೀಡಾಗಿತ್ತು.
ಈ ಸಮಸ್ಯೆ ಉಲ್ಬಣಗೊಂಡಿರುವ ಕಾರಣ ವನಿಂದು ಹಸರಂಗ ಐಪಿಎಲ್‌ಗೆ ಆಗಮಿಸಿರಲಿಲ್ಲ. ಇದೀಗ 2 ಕೋಟಿ ರೂ. ಮೂಲ ಬೆಲೆಯ ಹಸರಂಗ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ತಂಡದಿAದ ಕೈ ಬಿಟ್ಟಿದೆ. ಅವರ ಬದಲಿಗೆ ಸೌತ್ ಆಫ್ರಿಕಾ ಆಲ್‌ರೌಂಡರ್ ಜಾರ್ಜ್ ಲಿಂಡೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.ಜಾರ್ಜ್ ಲಿಂಡೆ ಎಡಗೈ ಬ್ಯಾಟರ್ ಮತ್ತು ಎಡಗೈ ಸ್ಪಿನ್ ಬೌಲರ್. ವಿಶ್ವದ ವಿವಿಧ ಟಿ20 ಲೀಗ್‌ಗಳಲ್ಲಿ 250ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿರುವ ಲಿಂಡೆ, 200ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ. ಇದೀಗ ಅನುಭವಿ ಆಟಗಾರನನ್ನು ಲಕ್ನೋ ಸೂಪರ್ ಜೈಂಟ್ಸ್ 1 ಕೋಟಿ ರೂ. ಗೆ ತಂಡಕ್ಕೆ ಸೇರಿಸಿಕೊಂಡಿದ್ದಾರೆ.ಲಕ್ನೋ ಸೂಪರ್ ಜೈಂಟ್ಸ್ ತಂಡ: ರಿಷಭ್ ಪಂತ್ (ನಾಯಕ), ಅಬ್ದುಲ್ ಸಮದ್, ಆಯುಷ್ ಬದೋನಿ, ಐಡೆನ್ ಮರ್ಕಾ್ರಮ್, ಮ್ಯಾಥ್ಯೂ ಬ್ರೀಟ್ಝ್, ಹಿಮ್ಮತ್ ಸಿಂಗ್, ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಶಹಬಾಝ್ ಅಹ್ಮದ್, ಅರ್ಶಿನ್ ಕುಲಕರ್ಣಿ, ಮಯಾಂಕ್ ಯಾದವ್, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಣಿಮಾರನ್ ಸಿದ್ಧಾರ್ಥ್, ದಿಗ್ವೇಶ್ ರಾಠಿ, ಪ್ರಿನ್ಸ್ ಯಾದವ್, ಆಕಾಶ್ ಸಿಂಗ್, ಮೊಹಮ್ಮದ್ ಶಮಿ, ಅರ್ಜುನ್ ತೆಂಡೂಲ್ಕರ್, ಅನ್ರಿಕ್ ನೋಕಿಯ, ಮುಕುಲ್ ಚೌಧರಿ, ನಮನ್ ತಿವಾರಿ, ಅಕ್ಷತ್ ರಘುವಂಶಿ, ಜೋಶ್ ಇಂಗ್ಲಿಸ್, ಜಾರ್ಜ್ ಲಿಂಡೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು