LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕೊರಗಜ್ಜ ಸಿನಿಮಾಗೆ ದಕ್ಷಿಣ ಭಾರತದ ಖ್ಯಾತ "ಗೋಪಿ ಸುಂದರ್" ಸಂಗೀತ

ಹಲವಾರು ಬಾರಿ ಮರು ಚಿತ್ರೀಕರಣ, ಮತ್ತೆ ಮತ್ತೆ ತಿದ್ದುಪಡಿಗಳು, ಹಲವಾರು ಬದಲಾವಣೆಗಳೊಂದಿಗೆ ಕ್ರೇಜ್ ಹುಟ್ಟುಹಾಕುತ್ತಿರುವ ಸುಧೀರ್ ಅತ್ತಾವರ ನಿರ್ದೇಶನದ ಕೊರಗಜ್ಜ ಸಿನಿಮಾದ ಸಂಗೀತವನ್ನೇ ಸಂಪೂರ್ಣವಾಗಿ ಬದಲಾಯಿಸಿ, ದಕ್ಷಿಣ ಭಾರತದ ಪ್ರಖ್ಯಾತ ಸಂಗೀತ ನಿರ್ದೇಶಕ "ಗೋಪಿ ಸುಂದರ್" ಈಗ ಸಿನಿಮಾಗೆ ಬ್ಯಾಗ್ರೌಂಡ್ ಸ್ಕೋರ್ ಜೊತೆ ಎಲ್ಲಾ ಹಾಡುಗಳನ್ನು ಮತ್ತೆ ಹೊಸದಾಗಿ ಕಂಪೋಜ್ ಮಾಡುತ್ತಿದ್ದಾರೆ.

ಬಹುಕೋಟಿ ವೆಚ್ಚದಲ್ಲಿ ತ್ರಿವಿಕ್ರಮ ಸಪಲ್ಯ ರವರು ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ನ ಅಡಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ "ಕೊರಗಜ್ಜ" ಚಿತ್ರಕ್ಕೆ ಖಖಖ, ಪುಷ್ಪ ಮೊದಲಾದ ಹಿಟ್ ಸಿನಿಮಾಗಳ ತಂತ್ರಜ್ಞರ ದಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಸುಮಾರು ಎಂಟು ನೂರು ವರ್ಷಗಳ ಹಿಂದಿನ ಕಥೆಯುಳ್ಳ ಈ ಸಿನಿಮಾದಲ್ಲಿ ಹಾಲಿವುಡ್- ಬಾಲಿವುಡ್ ಕಲಾವಿದರಾದ ಕಬೀರ್ ಬೇಡಿ, ಸಂದೀಪ್ ಸೋಪರ್ಕರ್, ಗಣೇಶ್ ಆಚಾರ್ಯ ಜೊತೆ ಶ್ರುತಿ, ಭವ್ಯ ಮೊದಲಾದವರು ಅಭಿನಯಿಸುತ್ತಿದ್ದಾರೆ.

ಋತಿಕ ಎನ್ನುವ ಹೊಸ ಮುಖ ಕೊರಗಜ್ಜನ ತಾಯಿ ಕೊರೊಪೊಳು ಪಾತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಪರಿಚಯ ವಾಗುತ್ತಿದ್ದಾರೆ. ಉಳಿದಂತೆ ಜೀತ್ ಜೊಸ್ಸಿ ಮತ್ತು ವಿದ್ಯಾಧರ್ ಶೆಟ್ಟಿ ಸಂಕಲನ, ಮನೋಜ್ ಪಿಳ್ಳೈ ಮತ್ತು ಪವನ್ ವಿ ಛಾಯಾಗ್ರಹಣ, ಸುಧೀರ್ ಅತ್ತಾವರ್ ಕಲಾ ನಿರ್ದೇಶನ, ಬಿಬಿನ್ ದೇವ್ ಸೌಂಡ್ ಡಿಸೈನಿಂಗ್ ಚಿತ್ರಕ್ಕಿದೆ. ಮಾರ್ಚ್ ಕೊನೆಗೆ ಸಿನಿಮಾ ಬಿಡುಗಡೆಗಾಗಿ ತಯಾರಿ ನಡೆದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು