LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿಶ್ವ ಚಾಂಪಿಯನ್ ಪಟ್ಟದೊಂದಿಗೆ ಹೊಸ ಇತಿಹಾಸ ಬರೆದ ಸ್ಪೇನ್

ನ್ಯೂಜೆರ್ಸಿ: ಜುಲೈ 19, 2026 ರಂದು ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆದ ಫಿಫಾ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಸ್ಪೇನ್ ತಂಡವು ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿAದ ಸೋಲಿಸಿ, 2026ರ ಫಿಫಾ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ನಿಗದಿತ 90 ನಿಮಿಷಗಳಲ್ಲಿ ಉಭಯ ತಂಡಗಳು ಯಾವುದೇ ಗೋಲು ಬಾರಿಸಿರಲಿಲ್ಲ. ಆ ಬಳಿಕ ನಡೆದ ಹೆಚ್ಚುವರಿ ನಿಮಿಷದಲ್ಲಿ ಪಂದ್ಯ ಫಲಿತಾಂಶ ನಿರ್ಧಾರವಾಯಿತು.ಗೆಲುವಿನ ಗೋಲು: ಪಂದ್ಯದ 106ನೇ ನಿಮಿಷದಲ್ಲಿ ಬದಲಿ ಆಟಗಾರನಾಗಿ ಬಂದ ಫೆರಾನ್ ಟೊರೆಸ್, ನಿಕೋ ವಿಲಿಯಮ್ಸ್ ನೀಡಿದ ಪಾಸ್ ಅನ್ನು ಅದ್ಭುತ ಗೋಲಾಗಿ ಪರಿವರ್ತಿಸಿ ಸ್ಪೇನ್‌ಗೆ ಜಯ ತಂದುಕೊಟ್ಟರು.ರೆಡ್ ಕಾರ್ಡ್: ಹೆಚ್ಚುವರಿ ಸಮಯದ ಆರಂಭದಲ್ಲೇ (93ನೇ ನಿಮಿಷ) ಅರ್ಜೆಂಟೀನಾದ ಮಿಡ್‌ಫೀಲ್ಡರ್ ಎಂಜೊ ಫೆರ್ನಾಂಡಿಸ್ ಎರಡನೇ ಹಳದಿ ಕಾರ್ಡ್ ಪಡೆದು ಮೈದಾನದಿಂದ ಹೊರನಡೆದರು. ಇದರಿಂದಾಗಿ ಅರ್ಜೆಂಟೀನಾ ಹೆಚ್ಚುವರಿ ನಿಮಿಷದಲ್ಲಿ ಕೇವಲ 10 ಆಟಗಾರರೊಂದಿಗೆ ಆಡುವಂತಾಯಿತು.ಸ್ಪೇನ್ ಪ್ರಾಬಲ್ಯ: ಇಡೀ ಪಂದ್ಯದಲ್ಲಿ ಸ್ಪೇನ್ 65% ರಷ್ಟು ಚೆಂಡನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡಿತ್ತು. ಹಾಗೆಯೇ ಸ್ಪೇನ್‌ನ ಬಲಿಷ್ಠ ರಕ್ಷಣಾತ್ಮಕ ಆಟದ ಮುಂದೆ ಅರ್ಜೆಂಟೀನಾಗೆ ಒಂದು ಶಾಟ್ ಅನ್ನೂ ಗೋಲು ಪೆಟ್ಟಿಗೆಯ ಕಡೆಗೆ ಹೊಡೆಯಲು ಸಾಧ್ಯವಾಗಲಿಲ್ಲ.ಪರಿಣಾಮ ಅರ್ಜೆಂಟೀನಾ ತಂಡವು ಸ್ಪೇನ್ ಮುಂದೆ ಶರಣಾಗಲೇಬೇಕಾಯಿತು. ಅದರಂತೆ ಫೆರಾನ್ ಟೊರೆಸ್ ಬಾರಿಸಿದ ಐತಿಹಾಸಿಕ ಗೋಲಿನೊಂದಿಗೆ ಸ್ಪೇನ್ ತಂಡವು ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಸ್ಪೇನ್ ಹೊಸ ಇತಿಹಾಸ: ಸ್ಪೇನ್ ಪುರುಷರ ತಂಡ ಗೆದ್ದ ಎರಡನೇ ವಿಶ್ವಕಪ್ ಪ್ರಶಸ್ತಿಯಾಗಿದೆ. ಇದಕ್ಕೂ ಮುನ್ನ 2010 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ಇದೀಗ ಮತ್ತೊಮ್ಮೆ ವಿಶ್ವಕಪ್ ಕಿರೀಟ ಮುಡಿಗೇರಿಸಿ ಕೊಂಡಿದ್ದಾರೆ. ಕಮರಿದ ಅರ್ಜೆಟೀನಾ ಕನಸು: ಫೈನಲ್‌ನಲ್ಲಿ ಸ್ಪೇನ್ ತಂಡವನ್ನು ಮಣಿಸಿ ಅರ್ಜೆಂಟೀನಾ ಹೊಸ ಇತಿಹಾಸ ನಿರ್ಮಿಸುವ ಇರಾದೆಯಲ್ಲಿತ್ತು. ಅಂದರೆ ಫಿಫಾ ವಿಶ್ವಕಪ್ ಇತಿಹಾಸದಲ್ಲಿ ಕೇವಲ 2 ತಂಡಗಳು ಮಾತ್ರ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ತಂಡಗಳೆAದರೆ ಇಟಲಿ (1934, 1938 ) ಮತ್ತು ಬ್ರೆಝಿಲ್ (1958, 1962). ಇದಾದ ಬಳಿಕ ಕಳೆದ 60 ವರ್ಷಗಳಿಂದ ಯಾವುದೇ ತಂಡ ಬ್ಯಾಕ್ ಟು ಬ್ಯಾಕ್ ವಿಶ್ವಕಪ್ ಗೆದ್ದಿಲ್ಲ. 2022 ರಲ್ಲಿ ವರ್ಲ್್ಡ ಕಪ್ ಎತ್ತಿ ಹಿಡಿದಿದ್ದ ಅರ್ಜೆಟೀನಾ ಈ ಬಾರಿ ಕೂಡ ಚಾಂಪಿಯನ್ ಪಟ್ಟ ಅಲಂಕರಿಸಿ ಹೊಸ ಇತಿಹಾಸ ಬರೆಯುವ ಇರಾದೆಯಲ್ಲಿತ್ತು. ಆದರೆ ಸ್ಪೇನ್ ತಂಡ ಶಿಸ್ತಿನ ಆಟದ ಮುಂದೆ ಸೋಲೊಪ್ಪಿಕೊಳ್ಳದೇ ವಿಧಿಯಿರಲಿಲ್ಲ ಎನ್ನಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು