LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಸುಮಾರು 300 ವಿದ್ಯಾರ್ಥಿಗಳಿಗೆ ಸ್ಪಂದನ ವಿದ್ಯಾರ್ಥಿ ವೇತನ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ವಿದ್ಯಾರ್ಥಿ ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ತನ್ನ ಗುರಿಯನ್ನು ಮುಟ್ಟಲು ಸತತವಾಗಿ ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯಿಂದ ಶಿಕ್ಷಣವನ್ನು ಪಡೆಯಬೇಕು ಎಂದು ಕೋಲಾರ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಎಂ.ನಾರಾಯಣ್ ತಿಳಿಸಿದರು.
ನಗರದ ವಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಭಾನುವಾರ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ವತಿಯಿಂದ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚು ಅಂಕ ಪಡೆದ ಚಿಕ್ಕಬಳ್ಳಾಪುರ ತಾಲ್ಲೂಕಿನ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ವರ್ಗದ ಸುಮಾರು 300 ವಿದ್ಯಾರ್ಥಿಗಳಿಗೆ ಸ್ಪಂದನ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜ ಸೇವಕ ಸಂದೀಪ ಬಿ ರೆಡ್ಡಿ ಅವರು ಯಾವುದೇ ಪ್ರತಿ ಫಲಾಪೇಕ್ಷೆ ಪಡೆಯದೇ ಉತ್ತಮ ಸೇವಾ ಕಾರ್ಯವನ್ನ ಕೈಗೊಂಡಿರುವ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಕಟ್ಟಿಕೊಡಲು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ ಇಂತಹ ಸೇವ ಕಾರ್ಯಗಳಿಗೆ ಸಮಾಜದ ಇನ್ನಿತರರು ಮುಂದಾಗ ಬೇಕಿದೆ ಎಷ್ಟೋ ಮಂದಿ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿನ ಕಷ್ಟಕಾರ್ಪಣ್ಯಗಲಿಂದಾಗಿ ಇಂದು ವಿದ್ಯಾಭ್ಯಾಸವನ್ನು ಮುಟುಕುಗೊಳಿಸುವ ಅಂತಕ್ಕೆ ತಲುಪಿದ್ದರೆ ಇದು ನಿಜಕ್ಕೂ ದುರ್ದೈವ ವಿದ್ಯಾರ್ಥಿಗಳು ಇಂತಹವರು ನೀಡುವ ಸವಲತ್ತನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಸಂದೀಪ್.ಬಿ.ರೆಡ್ಡಿ ಮಾತನಾಡಿ, ಬಡವರಲ್ಲಿ ನಗು ಮೂಡಿದರೆ ಅದು ನನಗೆ ಇಷ್ಟ, ನಾನು ಯಾವುದೇ ರಾಜಕೀಯ ಉದ್ದೇಶ ಇಟ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುತ್ತಿಲ್ಲ ಬದಲಿಗೆ ಬಾಳು ಬೆಳಗಲು ನನ್ನ ಶ್ರಮದಲ್ಲಿ ಒಂದಷ್ಟು ಹಣ ಮೀಸಲಿಟ್ಟು ಈ ಸೇವೆ ಮಾಡಲು ಮುನಾಡಿದ್ದೇನೆ ಎಲ್ಲರ ಶಕ್ತಿಯಿಂದ ಎಲ್ಲರ ಸಹಕಾರದಿಂದ ಈ ಕೆಲಸ ಮಾಡಬೇಕು, ವಿದ್ಯಾರ್ಥಿಗಳು ಕೇವಲಪಠ್ಯಕ್ಕೆ ಮಾತ್ರ ಸೀಮಿತ ಆಗಿರದೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯರಾಗಿ ನಾನಾ ವೃದ್ಧಿ ಮಾಡಿಕೊಳ್ಳಬೇಕು ಎಂದರು.

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯರೆಡ್ಡಿ ಮಾತನಾಡಿ,ಮಕ್ಕಳು ವಿದ್ಯಾಭ್ಯಾಸ ಮಾಡಲು ಉತ್ತಮ ವಾತಾವರಣ ನಿರ್ಮಾಣ ಮಾಡುವುದರ ಜೊತೆಗೆ ಅವರ ತಕ್ಕಂತೆ ಮುನ್ನಡೆಯಲು ಅವಕಾಶ ಮಾಡಿಕೊಡಬೇಕು ದೊಡ್ಡ ಗುರಿಯೊಂದಿಗೆ ತಮ್ಮ ಓದಿನ ಬದುಕು ಕಟ್ಟಿಕೊಂಡು ಸಮಾಜದಲ್ಲಿ ಸತ್ಪ್ರಜೆ ಯಾಗಬೇಕು ಡಾ ಅಂಬೇಡ್ಕರ್ ಅವರ ಆಶಯದಂತೆ ಮುನ್ನಡೆಯಲು ಸಲಹೆ ಇತ್ತರು.

ಮಾಜಿ ಶಾಸಕ ಡಾ.ಎಂ.ಶಿವಾನಂದ್ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜಿನ ನೀಡುವ ದೊಡ್ಡ ಗುಣ ಬಿಟ್ಟಿರುವ ಸಂದೀಪ ಬಿ ರೆಡ್ಡಿ ಅವರು ಈ ಸಮಾಜದಲ್ಲಿ ಆದರ್ಶ ವ್ಯಕ್ತಿಯೇ ಸರಿ ಇವರು ವಿದ್ಯಾರ್ಥಿಗಳಿಗಾಗಿ ನೀಡಿರುವ ಉತ್ತೇಜನ ಸಾದ್ವಿನಿಯೋಗ ಪಡಿಸಿಕೊಂಡು ಮುಂದೇ ಸಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿವಿಆರ್ ರಾಜೇಶ್, ದಸಂಸ ಮುಖಂಡರಾದ ಸುದಾ ವೆಂಕಟೇಶ್, ಮೂರ್ತಿ, ಗವಿರಾಯಪ್ಪ, ಹೈಕೋರ್ಟ್ ವಕೀಲ ರಾಜೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ತಾ.ಪಂ. ಮಾಜಿ ಸದಸ್ಯ ತಿರುಮಲಪ್ಪ, ತಿಪ್ಪೇನಹಳ್ಳಿ ಗ್ರಾ.ಪಂ.ಅಧ್ಯಕ್ಷ ಶ್ರೀನಿವಾಸ್, ಪೆÇೀಶೆಟ್ಟಿಹಳ್ಳಿ ಗ್ರಾ.ಪಂ.ಅಧ್ಯಕ್ಷ ಶ್ರೀನಿವಾಸ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರಾಜೇಂದ್ರ ಬಾಬು,, ಜೈ ಕುಮಾರ್, ಮಂಡಿಕಲ್ ರಾಜಣ್ಣ, ಜಗದೀಶ್, ಪಿ ಆರ್. ಸುನಿಲ್, ಕೆ.ಜೆ.ಶ್ರೀನಿವಾಸ್ ಮರಿಯಪ್ಪ, ವಿದ್ಯಾರ್ಥಿಗಳು,ಪೋಷಕರು, ಮತ್ತಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು