LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿರಾಟ್ ಕೊಹ್ಲಿ ಪ್ರತೀ ಪಂದ್ಯದ ಬಳಿಕ ಲಂಡನ್ ತೆರಳಲು ಆರ್.ಸಿ.ಬಿ ಯಿಂದ ವಿಶೇಷ ವಿಮಾನ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಪ್ರತಿ ಐಪಿಎಲ್ ಪಂದ್ಯದ ಬಳಿಕ ಲಂಡನ್ ಗೆ ತೆರಳುತ್ತಾರಾ? ಆರ್ ಸಿಬಿ ಫ್ರಾಂಚೈಸಿಯು ಅವರಿಗಾಗಿ ವಿಶೇಷ ವಿಮಾನದ ವ್ಯವಸ್ಥೆ ಮಾಡಿದೆಯಾ? ಹೀಗೊಂದು ಗಾಳಿ ಸುದ್ದಿ ಅನೇಕ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಗಾಳಿಸುದ್ದಿಗೆ ಇದೀಗ ಸ್ವತಃ ವಿರಾಟ್ ಕೊಹ್ಲಿ ಅವರೇ ವ್ಯಂಗ್ಯಭರಿತವಾಗಿ ನಕ್ಕಿದ್ದಾರೆ.ಐಪಿಎಲ್ 2026 ಸೀಸನ್ ನಲ್ಲಿ ಆಡುವ ಸಲುವಾಗಿ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದು ಆರ್ ಸಿಬಿ ತಂಡದ ಜೊತೆ ಅಭ್ಯಾಸ ನಿರತರಾಗಿದ್ದಾರೆ. ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಆರ್ ಸಿಬಿ ನಡುವೆ ನಡೆಯಲಿರುವ ಉದ್ಘಾಟನಾ ಪಂದ್ಯಕ್ಕೆ ತಯಾರಿ ನಡೆಸುತ್ತಿದ್ದಾರೆ. ಈ ಸೀಸನ್ ನಲ್ಲಿ ಆರ್ ಸಿಬಿ ತಂಡಕ್ಕೆ ಪರಿಸ್ಥಿತಿ ಕಠಿಣವಾಗಲಿದೆ ಎಂದು ಸಲಹೆಯಿಂದ ಕೂಡಿದ ಎಚ್ಚರಿಕೆಯನ್ನೂ ತಮ್ಮ ಸಹ ಆಟಗಾರರಿಗೆ ಅವರಿಗೆ ಅವರು ನೀಡಿದ್ದಾರೆ.
ಏತನ್ಮಧ್ಯೆ ತಮಗೆ ಆರ್ ಸಿಬಿ ಪ್ರಾಂಚೈಸಿಯು ಚಾರ್ಟರ್ ಪ್ಲೇಟ್ ವ್ಯವಸ್ಥೆ ಮಾಡಿರುವ ಗಾಳಿಸುದ್ದಿಯನ್ನೂ ಅವರು ನಿರಾಕರಿಸಿದ್ದಾರೆ. ಈ ಬಗ್ಗೆ ಇನ್ ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದಿರುವ ಅವರು ಕೇವಲ ಎರಡು ಗಹಗಹಿಸುವ ಎಮೋಜಿಗಳ ಮೂಲಕ ಗಾಳಿ ಸುದ್ದಿಗೆ ತೆರೆ ಎಳೆದಿದ್ದಾರೆ. ಅವರ ಪ್ರತಿಕ್ರಿಯೆಯ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಂಡನ್ ನಲ್ಲಿ ಮನೆ ಮಾಡಿರುವ ವಿರಾಟ್ ಕೊಹ್ಲಿ ಅವರ ಕುಟುಂಬ ಅಲ್ಲೇ ನೆಲೆಸುತ್ತಿದೆ. ವಿರಾಟ್ ಕೊಹ್ಲಿ ಅವರು ಪ್ರಸ್ತುತ ಕ್ರಿಕೆಟ್ ಪಂದ್ಯಗಳನ್ನು ಆಡುವ ಸಲುವಾಗಿ ಮಾತ್ರ ಭಾರತಕ್ಕೆ ಬರುತ್ತಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿರುವ ಅವರು ವರ್ಷದ ಕೆಲ ತಿಂಗಳು ಮಾತ್ರ ಭಾರತ ತಂಡದೊAದಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು