LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟೆಸ್ಟ್ ಶತಕದತ್ತ ಆರ್. ಅಶ್ವಿನ್: ಧರ್ಮ ಶಾಲಾದಲ್ಲಿ ವಿಶೇಷ ಗೌರವ

ಹೊಸದಿಲ್ಲಿ: ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ಸಾಧನೆಯಿಂದಲೇ ಸುದ್ದಿಯಲ್ಲಿರುವ ಭಾರತದ ಪ್ರಧಾನ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈಗ ಮತ್ತೊಂದು ಎತ್ತರದತ್ತ ನೋಟ ಹಾಯಿಸಿದ್ದಾರೆ. ಅವರೀಗ 100ನೇ ಟೆಸ್ಟ್ ಪಂದ್ಯದ ಹೊಸ್ತಿಲಲ್ಲಿದ್ದಾರೆ. ಧರ್ಮಶಾಲಾದಲ್ಲಿ ನಡೆಯಲಿರುವ ಟೆಸ್ಟ್‍ನಲ್ಲಿ ಈ ಮೈಲುಗಲ್ಲು ನೆಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ನಾಯಕ ರೋಹಿತ್ ಶರ್ಮ ಅವರು ಟೆಸ್ಟ್ ಶತಕ ಸಾಧಕ ಆರ್. ಅಶ್ವಿನ್ ಅವರಿಗೆ ಧರ್ಮಶಾಲಾದಲ್ಲಿ ತಂಡವನ್ನು ಅಂಗಳಕ್ಕೆ ಮುನ್ನಡೆಸುವ ಗೌರವ ನೀಡಲಿದ್ದಾರೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.ಕಳೆದ 13 ವರ್ಷಗಳಿಂದ ಭಾರತೀಯ ಟೆಸ್ಟ್ ತಂಡದ ಅವಿಭಾಜ್ಯ ಅಂಗವಾಗಿರುವ ಅಶ್ವಿನ್ ಈವರೆಗಿನ 99 ಟೆಸ್ಟ್‍ಗಳಲ್ಲಿ 507 ವಿಕೆಟ್ ಉರುಳಿಸಿದ್ದಾರೆ.

ಅತ್ಯಧಿಕ 35 ಸಲ ಇನ್ನಿಂಗ್ಸ್ ಒಂದರಲ್ಲಿ 5 ಪ್ಲಸ್ ವಿಕೆಟ್ ಉರುಳಿಸಿದ ಭಾರತೀಯ ದಾಖಲೆ ಇವರದು. 3 ಸಾವಿರಕ್ಕೂ ಅಧಿಕ ರನ್, 5 ಸೆಂಚುರಿಯೊಂದಿಗೆ ಆಲ್‍ರೌಂಡ್ ಸಾಧಕನಾಗಿಯೂ ಗುರುತಿಸಲ್ಪಟ್ಟಿದ್ದಾರೆ. ಐಸಿಸಿ ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್‍ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಹಿರಿಮೆಯೂ ಇವರದ್ದಾಗಿದೆ.

ನೂರರ ಸಾಧಕರು: 100 ಟೆಸ್ಟ್ ಆಡಿರುವ ಭಾರತದ ಸಾಧಕರೆಂದರೆ ಸಚಿನ್ ತೆಂಡುಲ್ಕರ್ (200), ರಾಹುಲ್ ದ್ರಾವಿಡ್ (163), ವಿವಿಎಸ್ ಲಕ್ಷ್ಮಣ್ (134), ಅನಿಲ್ ಕುಂಬ್ಳೆ (132), ಕಪಿಲ್‍ದೇವ್ (131), ಸುನೀಲ್ ಗಾವಸ್ಕರ್ (125), ಸೌರವ್ ಗಂಗೂಲಿ (113), ವಿರಾಟ್ ಕೊಹ್ಲಿ (113), ಇಶಾಂತ್ ಶರ್ಮ (103), ಹರ್ಭಜನ್ ಸಿಂಗ್ (103), ವೀರೇಂದ್ರ ಸೆಹ ವಾಗ್ (103) ಮತ್ತು ಚೇತೇಶ್ವರ್ ಪೂಜಾರ (103).

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು