LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕ್ರೀಡೆಯಿಂದ ಮನಸ್ಸು, ಆರೋಗ್ಯಕ್ಕೆ ಉತ್ಸಾಹ ಹೆಚ್ಚುತ್ತದೆ: ರತೀಶ್ ಕುಮಾರ್ ಸಿಂಗ್

ಬೆಂಗಳೂರು: ಬ್ಯಾಂಕಿಂಗ್ ವಲಯದಲ್ಲಿ ಸಿಬ್ಬಂದಿಗಳು ಒತ್ತಡದಿಂದ ಕೆಲಸ ಮಾಡುತ್ತಾರೆ ಎನ್ನುವುದು ಎಲ್ಲರಿಗೂ ತಿಳಿದ ವಿಷಯವೇ. ಸಿಬ್ಬಂದಿಗಳು ಆಗಾಗ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿಗೆ ಮತ್ತು ದೇಹಕ್ಕೆ ಉಲ್ಲಾಸ ಮತ್ತು ಹುಮ್ಮಸ್ಸು ವೃದ್ಧಿಯಾಗುತ್ತದೆ, ಎಂದರು ರತೇಶ್ ಕುಮಾರ್ ಸಿಂಗ್ ಸರ್ಕಲ್ ಹೆಡ್,ಪಂಜಾಬ್ ನ್ಯಾಷನಲ್ ಬ್ಯಾಂಕ್, ಬೆಂಗಳೂರು.

ನಗರದ ಕಬ್ಬನ್ ಪಾರ್ಕ್ ನಲ್ಲಿರುವ ಕೆ.ಜಿಎಸ್ ಕ್ಲಬ್ ನಲ್ಲಿ ಅಖಿಲ ಭಾರತ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಸಂಘ ಬೆಂಗಳೂರು ವತಿಯಿಂದ ಆಯೋಗಿಸಿದ್ದ ಸ್ಪೋರ್ಟ್ಸ್ ಮೀಟ್ 2024 ನಲ್ಲಿ ಭಾಗವಹಿಸಿ ಮಾತನಾಡಿದ ಅವರು ಕ್ರೀಡೆಯಿಂದ ಮನಸ್ಸಿನ ಮೇಲೆ ಉಂಟಾದ ಒತ್ತಡವನ್ನು ಕಡಿಮೆ ಮಾಡಬಹುದು. ಇದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಮತ್ತು ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಸಹಾಯಕರವಾಗಿರುತ್ತದೆ. ಈ ನಿಟ್ಟಿನಲ್ಲಿ ಕಳೆದ ವಾರ ಹೊರಾಂಗಣ ಕ್ರೀಡೆಯಾದ ಕ್ರಿಕೆಟ್ ಮತ್ತು ಇಂದು ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್, ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ನಂತಹ ಕ್ರೀಡೆಗಳನ್ನು ಆಯೋಜಿಸಲಾಗಿತ್ತು, ಎಂದರು.

ಎಸ್ ಎಂ ಉದಯ್ ಕುಮಾರ್ ಸರ್ಕಲ್ ಸೆಕ್ರೆಟರಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬೆಂಗಳೂರು ಇವರು ಮಾತನಾಡುತ್ತಾ ದೇಶದಾದ್ಯಂತ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ 139 ಸರ್ಕಲ್ ಗಳಿದ್ದು, ಬೆಂಗಳೂರಿನಲ್ಲಿಯೇ ಸುಮಾರು 850 ನೌರರು ಇದ್ದಾರೆ. ಇಂದು ಸುಮಾರು 120ಕ್ಕೂ ಹೆಚ್ಚು ಮಂದಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾಸಕ್ತಿಯನ್ನು ಪ್ರದರ್ಶಿಸಿದರು.

ಕ್ರೀಡೆಗಳನ್ನು ಒಟ್ಟಿಗೆ ಆಡುವುದರಿಂದ ಪರಸ್ಪರ ಅನ್ಯೂನ್ಯತೆ ವೃದ್ಧಿಸುತ್ತದೆ, ಇದು ಅವರು ಮಾಡುವ ಕೆಲಸ ಕಾರ್ಯಗಳನ್ನು ಸಹ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅವರು ತಿಳಿಸಿದರು.ಇದೇ ಸಂದರ್ಭದಲ್ಲಿ ಸಂಜೆ ಜಿ ಮಾನೆ, ಉಪ ಪ್ರಧಾನ ವ್ಯವಸ್ಥಾಪಕರು, ಸಂತೋಷ್ ಶರ್ಮಾ ಅಶೋಕ್ ಕುಮಾರ್, ಅಖಿಲ ಭಾರತ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬೆಂಗಳೂರು ಸರ್ಕಲ್ ನ ಅಲೆಗ್ಸಾಂಡರ್ ಡಿಸೋಜ ಮತ್ತು ಇತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು