LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಜೀವನದ ಪ್ರಮುಖ ಭಾಗ: ಜಿಪಂ ಸಿಇಒ ಆಕೃತಿ ಬನ್ಸಲ್ 


ಚಾಮರಾಜನಗರ: ವ್ಯಕ್ತಿಯ ದೈನಂದಿನ ಜೀವನದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಆಕೃತಿ ಬನ್ಸಲ್ ಅವರು ಅಭಿಪ್ರಾಯಪಟ್ಟರು. ವಿಶ್ವ ವಿಕಲಚೇತನರ ದಿನಾಚರಣೆ-2026ರ ಅಂಗವಾಗಿ ವಿಕಲಚೇತನರಿಗಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಪ್ರಯುಕ್ತ ಚಾಮರಾಜೇಶ್ವರ ದೇವಾಲಯ ಮುಂಭಾಗದಲ್ಲಿ ಕ್ರೀಡಾ ಜ್ಯೋತಿ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. ಇಂತಹ ಕಾರ್ಯಕ್ರಮಗಳು ಹೊಸ ಹುರುಪು ಉಲ್ಲಾಸ ತರಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಿರುವ ಎಲ್ಲ ಸ್ಪರ್ಧಿಗಳಿಗೂ ಶುಭವಾಗಲಿ ಎಂದು ಜಿ.ಪಂ ಸಿಇಒ ಆಕೃತಿ ಬನ್ಸಲ್ ಅವರು ಹಾರೈಸಿದರು.ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಆರಂಭಗೊಂಡ ಕ್ರೀಡಾ ಜ್ಯೋತಿ ಮೆರವಣಿಗೆ ವಿವಿಧ ಮಾರ್ಗಗಳ ಮೂಲಕ ಸಾಗಿ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ತಲುಪಿತು. ಕಾರ್ಯಕ್ರಮದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಡಾ. ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಸುಭದ್ರಾದೇವಿ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿಶೇಷಚೇತನ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST